ಡಿಸ್ಕೌಂಟ್‌ನಲ್ಲಿ ದೈತ್ಯ ಒನ್‌ಪ್ಲಸ್ ಮೊಬೈಲ್ ಬೇಕಿದ್ರೆ, ಈ ಆಫರ್ ನಿಮಗಾಗಿ!
ಮೊಬೈಲ್ ಮಾರುಕಟ್ಟೆಯಲ್ಲಿ ಒನ್‌ಪ್ಲಸ್ ಸಂಸ್ಥೆಯು ಜನಪ್ರಿಯ ಸ್ಥಾನ ಪಡೆದಿದ್ದು, ಭಿನ್ನ ಬೆಲೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಸಂಸ್ಥೆಯ ಪ್ರಮುಖ ಫೋನ್‌ಗಳ ಪೈಕಿ ಒನ್‌ಪ್ಲಸ್ 10 ಪ್ರೊ ಮೊಬೈಲ್ ಕೂಡಾ ಒಂದಾಗಿದ್ದು, ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತಾಣದಲ್ಲಿ ಒನ್‌ಪ್ಲಸ್ 10 ಪ್ರೊ 5G ಮೊಬೈಲ್ ಶೇ. 31% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಕೊಡುಗೆಯಲ್ಲಿ ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ 45,990ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಕೆಲವು ಬ್ಯಾಂಕ್ ಕೊಡುಗೆಗಳು ಹಾಗೂ ಇತರೆ ರಿಯಾಯಿತಿಗಳು ಕೂಡಾ ದೊರೆಯಲಿವೆ.

ಇನ್ನು ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 1 SoC ಪ್ರೊಸೆಸರ್ ಸೌಲಭ್ಯ ಪಡೆದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 48 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ಅಲ್ಲದೇ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಪಡೆದಿದೆ. ಹಾಗಾದರೇ ಒನ್‌ಪ್ಲಸ್ 10 ಪ್ರೊ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒನ್‌ಪ್ಲಸ್ 10 ಪ್ರೊ ಮೊಬೈಲ್ - ಫೀಚರ್ಸ್
ಒನ್‌ಪ್ಲಸ್ 10 ಪ್ರೊ ಮೊಬೈಲ್ 1,440 x 3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ OLED ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದೆ. ಇದು ಎರಡನೇ ತಲೆಮಾರಿನ ಲೋ-ಟೆಂಪ್‌ರೇಚರ್ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ತಂತ್ರಜ್ಞಾನವನ್ನು ಆಧರಿಸಿದೆ. ಇದು 1Hz ಮತ್ತು 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್ ನೀಡಲಿದೆ. ಇದಲ್ಲದೆ, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಪಡೆದಿದೆ.

ಒನ್‌ಪ್ಲಸ್ 10 ಪ್ರೊ ಮೊಬೈಲ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಜೆನ್ 1 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಇದು ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ OS 12.1 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.
ಒನ್‌ಪ್ಲಸ್ 10 ಪ್ರೊ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX789 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ IMX615 ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ.
ಒನ್‌ಪ್ಲಸ್ 10 ಪ್ರೊ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 80W ಸೂಪರ್‌ವೂಕ್ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್ ವಾಯರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಕೂಡಾ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.


Click it and Unblock the Notifications








