Home
ಸುದ್ದಿಜಾಲ

ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ: ಈ ಫೋನಿಗೆ ಈಗ ಜಬರ್ದಸ್ತ್‌ ಆಫರ್‌!

ಸದ್ಯ ನೀವೇನಾದರೂ ರಿಯಾಯಿತಿ ದರದಲ್ಲಿ ಹೊಸದಾಗಿ ಒನ್‌ಪ್ಲಸ್‌ ಸಂಸ್ಥೆಯ ಫೋನ್‌ ಖರೀದಿಸಬೇಕಿದ್ದರೆ, ಈ ಕೊಡುಗೆ ನಿಮಗೆ ಆಕರ್ಷಕ. ಹೌದು, ಒನ್‌ಪ್ಲಸ್‌ ಸಂಸ್ಥೆಯ ಜನಪ್ರಿಯ ಒನ್‌ಪ್ಲಸ್‌ 10 ಪ್ರೊ 5G ಫೋನ್‌ ಇದೀಗ ಸಖತ್‌ ಬೆಲೆ ಇಳಿಕೆ ಪಡೆದಿದ್ದು, ಗ್ರಾಹಕರು ಖುಷಿ ಪಡುವಂತೆ ಮಾಡಿದೆ.

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಒನ್‌ಪ್ಲಸ್‌ 10 ಪ್ರೊ 5G (OnePlus 10 Pro 5G) 25% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಫೋನ್‌ ದರವು 66,999ರೂ. ಆಗಿದ್ದು, ಆದ್ರೆ, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ನಲ್ಲಿ 49,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೆ ಆಯ್ದ ಬ್ಯಾಂಕ್‌ ಆಫರ್‌ಗಳು ಸಹ ಗ್ರಾಹಕರಿಗೆ ಸಿಗಲಿವೆ.

ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ: ಈ ಫೋನಿಗೆ ಈಗ ಜಬರ್ದಸ್ತ್‌ ಆಫರ್‌!

ಅಂದಹಾಗೆ ಒನ್‌ಪ್ಲಸ್‌ 10 ಪ್ರೊ 5G ಮೊಬೈಲ್‌ ಎರಡು ವೇರಿಯಂಟ್‌ ಮಾದರಿಯಲ್ಲಿ ಖರೀದಿಗೆ ಲಭ್ಯ ಇದ್ದು, ಅವುಗಳು ಕ್ರಮವಾಗಿ 8GB RAM + 128 GB ಮತ್ತು 12GB RAM + 256 GB ಸ್ಟೋರೇಜ್‌ ಆಗಿವೆ. ಇನ್ನು ಈ ಫೋನ್‌ ಬ್ಲ್ಯಾಕ್‌ ಹಾಗೂ ಎಮರಾಲ್ಡ್‌ ಫಾರೆಸ್ಟ್‌ ಕಲರ್‌ ಆಯ್ಕೆ ಪಡೆದಿದೆ. ಇನ್ನುಳಿದಂತೆ ಒನ್‌ಪ್ಲಸ್‌ 10 ಪ್ರೊ 5G ಮೊಬೈಲ್‌ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ 10 ಪ್ರೊ 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಮಾಹಿತಿ : ಒನ್‌ಪ್ಲಸ್‌ 10 ಪ್ರೊ ಮೊಬೈಲ್‌ 1,440 x 3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ OLED ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಫೋನ್‌ ಎರಡನೇ ತಲೆಮಾರಿನ ಲೋ-ಟೆಂಪ್‌ರೇಚರ್‌ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ತಂತ್ರಜ್ಞಾನ ಆಧರಿಸಿದ್ದು, 1Hz ಹಾಗೂ 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್‌ ಒದಗಿಸಲಿದೆ. ಈ ಡಿಸ್‌ಪ್ಲೇ sRGB ಬಣ್ಣದ ಹರವುಗಳನ್ನು ಸಹ ಸಪೋರ್ಟ್‌ ಇದೆ. ಜೊತೆಗೆ, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಹೊಂದಿದೆ.

ಒನ್‌ಪ್ಲಸ್‌ 10 ಪ್ರೊ 5G ಪ್ರೊಸೆಸರ್‌ ಕಾರ್ಯವೈಖರಿ ಯಾವುದು : ಒನ್‌ಪ್ಲಸ್‌ 10 ಪ್ರೊ ಮೊಬೈಲ್‌ ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್‌ 8 ಜೆನ್‌ 1 SoC ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಆಂಡ್ರಾಯ್ಡ್‌ 12 ನಲ್ಲಿ ಆಕ್ಸಿಜನ್‌ OS 12.1 ಸಪೋರ್ಟ್‌ ನೊಂದಿಗೆ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು 12GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯ ಪಡೆದುಕೊಂಡಿದೆ.

ಒನ್‌ಪ್ಲಸ್‌ 10 ಪ್ರೊ 5G ಕ್ಯಾಮೆರಾ ಸೆನ್ಸಾರ್ ಮಾಹಿತಿ : ಒನ್‌ಪ್ಲಸ್‌ 10 ಪ್ರೊ ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX789 ಸೆನ್ಸಾರ್‌, ಸೆಕೆಂಡರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ತೃತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಪಡೆದಿದೆ. ಇದರ ಜೊತೆಗೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಒನ್‌ಪ್ಲಸ್‌ 10 ಪ್ರೊ 5G ಬ್ಯಾಟರಿ ಮತ್ತು ಇತರೆ ಆಯ್ಕೆಗಳ ಮಾಹಿತಿ : ಒನ್‌ಪ್ಲಸ್‌ 10 ಪ್ರೊ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಇದು 80W ಸೂಪರ್‌ವೂಕ್‌ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್‌ ವಾಯರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಮಾಡಲಿದೆ.

ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
OnePlus 10 Pro 5G huge price drop on flipkart. offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+