Just In
Don't Miss
- Sports
Asia Cup 2023: ಪಾಕ್ನಲ್ಲಿ ಭಾರತ ಏಷ್ಯಾಕಪ್ ಆಡದಿದ್ದರೆ, ವಿಶ್ವಕಪ್ ಆಡಲ್ಲ; ಎಚ್ಚರಿಕೆ ನೀಡಿದ ಪಿಸಿಬಿ
- Automobiles
ಸೆಲ್ಟೋಸ್ನ ಗೇರ್ಬಾಕ್ಸ್ನಲ್ಲಿ ದೋಷ ಕಂಡು ಬಂದಾಗ ಉಚಿತವಾಗಿ ಬದಲಾಯಿಸಿ ಕೊಟ್ಟ ಕಿಯಾ
- News
ಬರಲಿವೆ ಎಲಿವೇಟೆಡ್ ಇಂಟರ್ಸಿಟಿ ಸೆಮಿ-ಹೈಸ್ಪೀಡ್ ರೈಲುಗಳು: ಭಾರತ ಹಾಗೂ ಕರ್ನಾಟಕದ ಯಾವ ನಗರಗಳ ನಡುವೆ ಸಂಚಾರ?
- Movies
ವಾಣಿ ಜಯರಾಂ ಸಾವು: ಮರಣೋತ್ತರ ಪರೀಕ್ಷೆ ವಿವರ ಬಹಿರಂಗ
- Lifestyle
ಮಕ್ಕಳನ್ನು 'ಅಮ್ಮ' ದಡಾರದಿಂದ ರಕ್ಷಿಸಲು ಇದೇ ತಿಂಗಳು ತಪ್ಪದೆ ಕೊಡಿಸಿ MR ಲಸಿಕೆ
- Finance
Twitter: ಟ್ವಿಟ್ಟರ್ನಲ್ಲಿ ಗೋಲ್ಡ್ ಬ್ಯಾಡ್ಜ್ ಉಳಿಸಿಕೊಳ್ಳಬೇಕಾದರೆ ಇಷ್ಟು ಮೊತ್ತ ಪಾವತಿಸಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಡಿಸ್ಕೌಂಟ್‌ನಲ್ಲಿ ಒನ್‌ಪ್ಲಸ್ ಫೋನ್ ಖರೀದಿಗೆ, ಇದೇ ಸರಿಯಾದ ಸಮಯ!
ಮೊಬೈಲ್ ಮಾರುಕಟ್ಟೆಯಲ್ಲಿ ಒನ್‌ಪ್ಲಸ್ ಬ್ರ್ಯಾಂಡ್ ಭಿನ್ನ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಒನ್‌ಪ್ಲಸ್ ಸಂಸ್ಥೆಯ ಕೆಲವು ಫ್ಲ್ಯಾಗ್‌ಶಿಪ್ ಮಾದರಿಯ ಫೋನ್‌ಗಳು ಈಗಾಗಲೇ ಗ್ರಾಹಕರಿಗೆ ಇಷ್ಟವಾಗಿವೆ. ಆ ಪೈಕಿ ಒನ್‌ಪ್ಲಸ್ 10 ಪ್ರೊ 5G (OnePlus 10 Pro 5G) ಸ್ಮಾರ್ಟ್‌ಫೋನ್ ಸಹ ಒಂದಾಗಿದ್ದು, ಈ ಫೋನ್ ಸಹ ಸಖತ್ ಡಿಮ್ಯಾಂಡ್ ಹೊಂದಿದೆ. ಇನ್ನು ಈ ಫೋನ್ ಅನ್ನು ಭಾರೀ ಡಿಸ್ಕೌಂಟ್‌ನಲ್ಲಿ ಖರೀದಿಸುವ ಪ್ಲ್ಯಾನ್ ಇದ್ರೆ, ಅದಕ್ಕೆ ಈಗ ಸಮಯ ಕೂಡಿ ಬಂದಿದೆ.

ಹೌದು, ದೈತ್ಯ ಇ ಕಾಮರ್ಸ್ ತಾಣ ಅಮೆಜಾನ್ ಒನ್‌ಪ್ಲಸ್ 10 ಪ್ರೊ 5G ಸ್ಮಾರ್ಟ್‌ಫೋನ್‌ಗೆ ಭರ್ಜರಿ ರಿಯಾಯಿತಿ ನೀಡಿದೆ. 8GB ವೇರಿಯಂಟ್ ಬೆಲೆಯು 66,900ರೂ. ಆಗಿದ್ದು, ಆಫರ್‌ನಲ್ಲಿ 61,999ರೂ. ಗಳಿಗೆ ಲಭ್ಯವಾಗುತ್ತೆ. ಅದೇ ರೀತಿ 12GB ವೇರಿಯಂಟ್ 71,900ರೂ. ಬೆಲೆಯನ್ನು ಪಡೆದಿದ್ದು, ಆಫರ್‌ನಲ್ಲಿ 66,999ರೂ. ಗಳಿಗೆ ಖರೀದಿಗೆ ಲಭ್ಯವಿದೆ. ಬ್ಲ್ಯಾಕ್ ಹಾಗೂ ಫಾರೆಸ್ಟ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯ.
ಇನ್ನು ಒನ್‌ಪ್ಲಸ್ 10 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. 8GB RAM + 128 GB ಮತ್ತು 12GB RAM + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗಾದರೆ ಒನ್‌ಪ್ಲಸ್ 10 ಪ್ರೊ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ 1,440 x 3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ OLED ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಎರಡನೇ ತಲೆಮಾರಿನ ಲೋ-ಟೆಂಪ್‌ರೇಚರ್ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ತಂತ್ರಜ್ಞಾನವನ್ನು ಆಧರಿಸಿದೆ. ಇದು 1Hz ಮತ್ತು 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್ ನೀಡಲಿದೆ. ಈ ಡಿಸ್‌ಪ್ಲೇ sRGB ಬಣ್ಣದ ಹರವುಗಳನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಪಡೆದಿದೆ.
ಪ್ರೊಸೆಸರ್ ಯಾವುದು?
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಜೆನ್ 1 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯ
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 80W ಸೂಪರ್‌ವೂಕ್ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470