ಒನ್‌ಪ್ಲಸ್‌ನ ಈ ಫೋನ್ ಮೇಲೆ ಸಿಗ್ತಾ ಇದೆ ಬರೋಬ್ಬರಿ 22,000ರೂ ರಿಯಾಯಿತಿ!
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಅಮೆಜಾನ್‌ನಲ್ಲಿ ಒಳ್ಳೆ ಚಾನ್ಸ್ ನೀಡಿದೆ. ಪ್ರೀಮಿಯಂ ಪ್ಲ್ಯಾಗ್‌ಶಿಪ್‌ನ ಈ ಫೋನ್ ಅನ್ನು ನೀವು ಹಿಂದೆಂದೂ ನಿರೀಕ್ಷಿಸಿದ ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾಗಿದೆ. ಪ್ರಸ್ತುತ ಈ 66,999ರೂ ಗಳಿಗೆ ಅಮೆಜಾನ್ ಪಟ್ಟಿ ಮಾಡಲಾಗಿರುವ ಈ ಫೋನ್ ಮೇಲೆ 17,000 ಕೂಪನ್ ನೀಡಲಾಗ್ತಿದೆ.
ಹೌದು, ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಮೇಲೆ ಅಮೆಜಾನ್ ಬಿಗ್ ಆಫರ್ ನೀಡುತ್ತಿದೆ. ಇದರಿಂದ ಫೋನ್ 50,000ರೂ ಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದಿಷ್ಟೇ ಅಲ್ಲ ಸ್ಮಾರ್ಟ್‌ಫೋನ್ ಮೇಲೆ ವಿವಿಧ ಬ್ಯಾಂಕ್ ಕಾರ್ಡ್‌ಗಳ ಆಫರ್ ಕೂಡ ದೊರೆಯುತ್ತಿದೆ. ಹಾಗಾದ್ರೆ ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಅನ್ನು ನೀವು ಎಷ್ಟು ರೂಗಳಲ್ಲಿ ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್ 10 ಪ್ರೊ ಮೇಲೆ ಬಿಗ್ ಆಫರ್
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ 66,999ರೂ ಗಳಿಗೆ ಪಟ್ಟಿ ಮಾಡಲಾಗಿದೆ. ಇದರ ಮೇಲೆ ಅಮೆಜಾನ್ ತ್ವರಿತ 17,000ರೂ ಕೂಪನ್ ನೀಡುತ್ತಿದೆ. ಜೊತೆಗೆ ಖರೀದಿದಾರರು ICICI ಬ್ಯಾಂಕ್ ಕಾರ್ಡ್‌ಗಳ ಮೇಲೆ 5,000 ರೂ ತ್ವರಿತ ರಿಯಾಯಿತಿಯನ್ನು ಪಡೆಯಬಹುದು. ಇದರಿಂದ ಸ್ಮಾರ್ಟ್‌ಫೋನ್ ಬೆಲೆ 22,000ರೂ ಕಡಿಮೆ ಆಗಲಿದ್ದು ಕೇವಲ 44,999ರೂ. ಬೆಲೆಗೆ ಖರೀದಿಸಬಹುದಾಗಿದೆ. ಈ ಫೋನ್ ವೋಲ್ಕಾನಿಕ್ ಬ್ಲ್ಯಾಕ್ ಮತ್ತು ಎಮರಾಲ್ಡ್ ಫಾರೆಸ್ಟ್ ಬಣ್ಣದ ರೂಪಾಂತರಗಳಲ್ಲಿ ಲಭ್ಯವಾಗಲಿದೆ. ಇದಲ್ಲದೆ OneCard ಕ್ರೆಡಿಟ್ ಕಾರ್ಡ್‌ನಲ್ಲಿ ಫ್ಲಾಟ್ 5000ರೂ ತ್ವರಿತ ರಿಯಾಯಿತಿಯ ಆಯ್ಕೆಯೂ ಇದೆ.
ಒನ್‌ಪ್ಲಸ್ 10 ಪ್ರೊ ಫೀಚರ್ಸ್ ಹೇಗಿದೆ?
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ QHD+ ಲಿಕ್ವಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,440x3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ ಎರಡನೇ ತಲೆಮಾರಿನ ಲೋ-ಟೆಂಪ್‌ರೇಚರ್ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ತಂತ್ರಜ್ಞಾನವನ್ನು ಆಧರಿಸಿದೆ. ಇದು 1Hz ಮತ್ತು 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್ ನೀಡಲಿದೆ. ಇದಲ್ಲದೆ, ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಪಡೆದಿದೆ.

ಪ್ರೊಸೆಸರ್ ಮತ್ತು ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 80W ಸೂಪರ್‌ವೂಕ್ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.


Click it and Unblock the Notifications








