ಒನ್‌ಪ್ಲಸ್‌ ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ದಿಡೀರ್ ಬೆಲೆ ಇಳಿಕೆ!

|

ಮೊಬೈಲ್ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಕಂಪನಿಯು ಫ್ಲ್ಯಾಗ್‌ಶಿಪ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಹೆಚ್ಚಾಗಿ ಗುರುತಿಸಿಕೊಂಡಿದೆ. ಆ ಪೈಕಿ ಇದೀಗ ಕಂಪನಿಯ ಇತ್ತೀಚಿಗಿನ ಫೋನ್‌ಗಳಲ್ಲಿ ಒಂದಾದ ಒನ್‌ಪ್ಲಸ್‌ 10 ಪ್ರೊ (OnePlus 10 Pro) ಭರ್ಜರಿ ಬೆಲೆ ಇಳಿಕೆ ಕಂಡಿದ್ದು, ಗ್ರಾಹಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ.

ಒನ್‌ಪ್ಲಸ್‌ 10 ಪ್ರೊ

ಹೌದು, ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 10 ಪ್ರೊ (OnePlus 10 Pro) ಫೋನ್‌ ಬೆಲೆಯಲ್ಲಿ 5,000ರೂ. ಕಡಿತ ಆಗಿದೆ. ಇನ್ನು ಈ ಫೋನ್ 8GB + 128GB ಮತ್ತು 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಎರಡು ವೇರಿಯಂಟ್‌ಗಳು ಬೆಲೆ ಇಳಿಕೆ ಕಂಡಿವೆ.

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌

ಇನ್ನು ಬೆಲೆ ಇಳಿಕೆ ಬಳಿಕ ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 8GB + 128GB ವೇರಿಯಂಟ್‌ 61,999ರೂ. ಆಗಿದ್ದು, ಅದೇ ರೀತಿ 12GB + 256GB ವೇರಿಯಂಟ್‌ ಬೆಲೆಯು 66,999ರೂ. ಆಗಿದೆ. ಹಾಗಾದರೆ ಒನ್‌ಪ್ಲಸ್‌ 10 ಪ್ರೊ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 1,440 x 3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಎರಡನೇ ತಲೆಮಾರಿನ ಲೋ-ಟೆಂಪ್‌ರೇಚರ್‌ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ತಂತ್ರಜ್ಞಾನವನ್ನು ಆಧರಿಸಿದೆ. ಇದು 1Hz ಮತ್ತು 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್‌ ನೀಡಲಿದೆ. ಈ ಡಿಸ್‌ಪ್ಲೇ sRGB ಬಣ್ಣದ ಹರವುಗಳನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಆಕ್ಸಿಜನ್‌ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB + 128GB ಮತ್ತು 12GB + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟು

ಕ್ಯಾಮೆರಾ ಸೆನ್ಸಾರ್ ಎಷ್ಟು

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX789 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ IMX615 ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 80W ಸೂಪರ್‌ವೂಕ್‌ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್‌ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 8GB + 128GB ಮತ್ತು 12GB + 256GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್ ಎಮರಾಲ್ಡ್ ಫಾರೆಸ್ಟ್ ಮತ್ತು ವೊಲ್ಕ್ಯಾನಿಕ್ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
OnePlus 10 Pro Price cut in India: Check New Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X