ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ! QHD+ ಡಿಸ್‌ಪ್ಲೇ ವಿಶೇಷ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಒನ್‌ಪ್ಲಸ್ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಬಹುನಿರೀಕ್ಷಿತ ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಇತ್ತೀಚಿನ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದೆ. ಇದು ಎರಡನೇ ತಲೆಮಾರಿನ ಕಡಿಮೆ-ತಾಪಮಾನದ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ಟೆಕ್ನಾಲಜಿಯನ್ನು ಒಳಗೊಂಡಿದೆ.

ಹೌದು, ಒನ್‌ಪ್ಲಸ್ ಕಂಪೆನಿ ತನ್ನ ಹೊಸ ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ , ಹೋಲ್-ಪಂಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಡ್ಯುಯಲ್-ಸೆಲ್ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೈರ್ಡ್ ಚಾರ್ಜಿಂಗ್ ಮತ್ತು 50W ವಾಯರ್‌ಲೆಸ್ ಫ್ಲ್ಯಾಶ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಹಾಗಾದ್ರೆ ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್ 10ಪ್ರೊ ಸ್ಮಾರ್ಟ್‌ಫೋನ್ 1,440x3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ QHD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 20.1:9 ರಚನೆಯ ಅನುಪಾತವನ್ನು ಹೊಂದಿದೆ. 1Hz ಮತ್ತು 120Hz ಡೈನಾಮಿಕ್ ರಿಫ್ರೆಶ್ ದರವನ್ನು ಪಡೆದಿದೆ ಎನ್ನಲಾಗಿದೆ. ಈ ಡಿಸ್ಪ್ಲೇ ಆಲ್‌ವೇಸ್ ಆನ್ ಬೆಂಬಲವನ್ನು ಒಳಗೊಂಡಿದ್ದು, 1300ನಿಟ್ಸ್ ಬ್ರೈಟ್‌ನೆಸ್ ನೀಡಲಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ಯಾನೆಲ್ ಪ್ರೊಟೆಕ್ಷನ್ ಹೊಂದಿದೆ.

ಪ್ರೊಸೆಸರ್ ಯಾವುದು?
ಒನ್‌ಪ್ಲಸ್ 10ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ColorOS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಸಹ ಪಡೆದುಕೊಂಡಿದೆ.

ಕ್ಯಾಮೆರಾ ವಿಶೇಷ
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್ f/1.8 ಲೆನ್ಸ್ ಜೊತೆಗೆ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್ f/2.2 ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಡ್ಯುಯಲ್-ಸೆಲ್ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೈರ್ಡ್ ಚಾರ್ಜಿಂಗ್ ಮತ್ತು 50W ವಾಯರ್‌ಲೆಸ್ ಫ್ಲ್ಯಾಶ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ CNY 4,699 (ಅಂದಾಜು 54,500ರೂ) ಗೆ ನಿಗದಿಪಡಿಸಲಾಗಿದೆ. ಹಾಗೆಯೇ 8GB + 256GB ಸ್ಟೋರೇಜ್ ಆಯ್ಕೆಗೆ CNY 4,999 (ಅಂದಾಜು 58,000ರೂ) ಮತ್ತು 12GB + 256GB ಮಾದರಿ CNY 5,299 (ಅಂದಾಜು 61,500ರೂ) ಬೆಲೆ ಹೊಂದಿದೆ. ಇದು ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.


Click it and Unblock the Notifications








