ಒನ್‌ಪ್ಲಸ್ ಮೊಬೈಲ್ ಖರೀದಿಸುವ ಗ್ರಾಹಕರೇ ಗಮನಿಸಿ!..ಇದು ಬೆಸ್ಟ್ ಆಫರ್!
ಒನ್‌ಪ್ಲಸ್ 10R 5G ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಅಮೆಜಾನ್ ವೆಬ್‌ಸೈಟ್ ಸಿಹಿಸುದ್ದಿ ನೀಡಿದೆ. ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಎನಿಸಿಕೊಂಡಿರುವ ಅಮೆಜಾನ್ ಒನ್‌ಪ್ಲಸ್ 10R 5G ಸ್ಮಾರ್ಟ್‌ಫೋನ್ ಮೇಲೆ ಬಿಗ್ ಆಫರ್ ಲಭ್ಯ ಮಾಡಿದೆ.
ಹೌದು, ಅಮೆಜಾನ್ ತಾಣದಲ್ಲಿ ಒನ್‌ಪ್ಲಸ್ 10R 5G ಸ್ಮಾರ್ಟ್‌ಫೋನ್ ಜಬರ್ದಸ್ತ್ ರಿಯಾಯಿತಿ ಬೆಲೆಗೆ ಮಾರಾಟವಾಗುತ್ತಿದೆ. ಒನ್‌ಪ್ಲಸ್ 10R 5G ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್‌ನ ವೇರಿಯಂಟ್ 38,999ರೂ. ಹೊಂದಿದ್ದು, ಆಫರ್‌ನಲ್ಲಿ 34,999ರೂ. ಗಳಿಗೆ ಲಭ್ಯ. ಇದರೊಂದಿಗೆ ಬ್ಯಾಂಕ್ ಆಫರ್ ಸಹ ಪಡೆದುಕೊಳ್ಳಬಹುದಾಗಿದೆ. ಹಾಗಾದ್ರೆ ಒನ್‌ಪ್ಲಸ್ 10R 5G ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್ 10R 5G ಡಿಸ್‌ಪ್ಲೇ ರಚನೆ ಹೇಗಿದೆ : ಒನ್‌ಪ್ಲಸ್ 10R 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ.
ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 120 Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 720 Hz ಟಚ್ ರೆಸ್ಪಾನ್ಸ್ ರೇಟ್ ಅನ್ನು ಹೊಂದಿದೆ. ಜೊತೆಗೆ 2.5D ಕರ್ವ್ಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಪಡೆದುಕೊಂಡಿದೆ.
ಒನ್‌ಪ್ಲಸ್ 10R 5G ಪ್ರೊಸೆಸರ್ ದಕ್ಷತೆ : ಒನ್‌ಪ್ಲಸ್ 10R 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 ಮ್ಯಾಕ್ಸ್ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ OxygenOS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇನ್ನು ಈ ಪ್ರೊಸೆಸರ್ 20% ಸುಧಾರಿತ GPU ಕಾರ್ಯಕ್ಷಮತೆ, 25% ಸುಧಾರಿತ ವಿದ್ಯುತ್ ದಕ್ಷತೆ ಮತ್ತು 80% ಉತ್ತಮ AI ಕಾರ್ಯಕ್ಷಮತೆಯನ್ನು ನೀಡುತ್ತದೆ. ಹಾಗೆಯೇ 12 GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.
ಒನ್‌ಪ್ಲಸ್ 10R 5G ಕ್ಯಾಮೆರಾ ಸೆಟ್‌ಅಪ್ ಯಾವುದು : ಒನ್‌ಪ್ಲಸ್ 10R 5G ಇದು ಸುಗಮ ಗೇಮಿಂಗ್ ಕಾರ್ಯಕ್ಷಮತೆಯನ್ನು ನೀಡುತ್ತದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ.
ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೋನಿ IMX355 ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ GC02M1 ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL S5K3P9 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಒನ್‌ಪ್ಲಸ್ 10R 5G ಬ್ಯಾಟರಿ ಸಾಮರ್ಥ್ಯ ಮತ್ತು ಇತರೆ ಫೀಚರ್ಸ್ : ಒನ್‌ಪ್ಲಸ್ 10R 5G ಸ್ಮಾರ್ಟ್‌ಫೋನ್ ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 4,500 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 150W SuperVOOC ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ.
ಇನ್ನು 80W SuperVOOC ವೇಗದ ಚಾರ್ಜಿಂಗ್ ಹೊಂದಿರುವ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್ C ಪೋರ್ಟ್ ಸೇರಿವೆ.


Click it and Unblock the Notifications








