Home
ಸುದ್ದಿಜಾಲ

ಒನ್‌ಪ್ಲಸ್‌ ಫೋನ್‌ ಖರೀದಿಸಲು ಇದು ಸಕಾಲ!..ಈ 5G ಫೋನಿಗೆ ಬಿಗ್‌ ಆಫರ್‌!

ಒನ್‌ಪ್ಲಸ್‌ ಸಂಸ್ಥೆಯ ಬಹುತೇಕ ಫೋನ್‌ಗಳು ಗ್ರಾಹಕರ ಗಮನ ಸೆಳೆದಿವೆ. ಆ ಪೈಕಿ ಒನ್‌ಪ್ಲಸ್‌ 10R 5G ಮೊಬೈಲ್‌ ಕೂಡಾ ಒಂದಾಗಿದೆ. ಇದೀಗ ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸಖತ್‌ ರಿಯಾಯಿತಿ ಪಡೆದಿದ್ದು, ಒನ್‌ಪ್ಲಸ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಭಾರೀ ಖುಷಿ ಎನಿಸಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಒನ್‌ಪ್ಲಸ್‌ 10R 5G ಮೊಬೈಲ್‌ ಶೇ. 10% ರಷ್ಟು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB RAM + 128GB ವೇರಿಯಂಟ್‌ ಫೋನ್‌ 34,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಇದರೊಂದಿಗೆ ಬ್ಯಾಂಕ್‌ ಆಫರ್‌ ಸಹ ಗ್ರಾಹಕರಿಗೆ ಲಭ್ಯ ಆಗಲಿವೆ.

ಒನ್‌ಪ್ಲಸ್‌ ಫೋನ್‌ ಖರೀದಿಸಲು ಇದು ಸಕಾಲ!..ಈ 5G ಫೋನಿಗೆ ಬಿಗ್‌ ಆಫರ್‌!

ಅಂದಹಾಗೆ ಒನ್‌ಪ್ಲಸ್‌ನ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 ಮ್ಯಾಕ್ಸ್ SoC ಪ್ರೊಸೆಸರ್‌ ಸಾಮರ್ಥ್ಯದ ಹೊಂದಿದೆ. ಇದರ ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದೆ. ಇನ್ನುಳಿದಂತೆ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ ಫೋನ್‌ ಖರೀದಿಸಲು ಇದು ಸಕಾಲ!..ಈ 5G ಫೋನಿಗೆ ಬಿಗ್‌ ಆಫರ್‌!

ಡಿಸ್‌ಪ್ಲೇ ರಚನೆ ಹಾಗೂ ಡಿಸೈನ್‌

ಒನ್‌ಪ್ಲಸ್‌ 10R 5G ಮೊಬೈಲ್‌ 6.7 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಈ ಮೊಬೈಲ್‌ ಒಳಗೊಂಡಿದೆ.

ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, ಹಾಗೆಯೇ ಡಿಸ್‌ಪ್ಲೇಯು 120 Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 720 Hz ಟಚ್ ರೆಸ್ಪಾನ್ಸ್ ರೇಟ್‌ ಅನ್ನು ಒಳಗೊಂಡಿದೆ. ಇದರ ಜತೆ 2.5D ಕರ್ವ್ಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಇರುವುದನ್ನು ಕಾಣಬಹುದಾಗಿದೆ.

ಒನ್‌ಪ್ಲಸ್‌ ಫೋನ್‌ ಖರೀದಿಸಲು ಇದು ಸಕಾಲ!..ಈ 5G ಫೋನಿಗೆ ಬಿಗ್‌ ಆಫರ್‌!

ವೇಗದ ಪ್ರೊಸೆಸರ್‌ ಸೌಲಭ್ಯ

ಒನ್‌ಪ್ಲಸ್‌ 10R 5G ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 ಮ್ಯಾಕ್ಸ್ SoC ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಆಧಾರಿತ OxygenOS 12.1 ಸಪೋರ್ಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ.

ಹಾಗೆಯೇ ಈ ಮೊಬೈಲ್‌ನ ಪ್ರೊಸೆಸರ್‌ 20% ಸುಧಾರಿತ GPU ಕಾರ್ಯಕ್ಷಮತೆ, ಶೇ 25% ಸುಧಾರಿತ ವಿದ್ಯುತ್ ದಕ್ಷತೆ ಹಾಗೂ ಶೇ 80% ಉತ್ತಮ AI ಕಾರ್ಯಕ್ಷಮತೆ ಅನ್ನು ನೀಡಲಿದೆ. ಇದರ ಜೊತೆಗೆ 12 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ತ್ರಿವಳಿ ಕ್ಯಾಮೆರಾ ಸೆನ್ಸಾರ್ ಸೌಲಭ್ಯ

ಒನ್‌ಪ್ಲಸ್‌ ಸಂಸ್ಥೆಯ ಈ ಮೊಬೈಲ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೋನಿ IMX355 ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ GC02M1 ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL S5K3P9 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಪಡೆದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಮತ್ತು ಇತರೆ ಆಯ್ಕೆಗಳು

ಒನ್‌ಪ್ಲಸ್‌ 10R 5G ಮೊಬೈಲ್‌ ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇದು 150W SuperVOOC ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಕೂಡಾ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್ C ಪೋರ್ಟ್ ಇವೆ.

Best Mobiles in India

English summary
OnePlus 10R 5G big price cut on amazon ecommerce. offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+