Just In
- 13 hrs ago
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- 18 hrs ago
ಈ ಯೋಜನೆಗಳನ್ನು ರೀಚಾರ್ಜ್ ಮಾಡಿದ್ರೆ, ನಿಮಗೆ ವ್ಯಾಲಿಡಿಟಿ ಬಗ್ಗೆ ಟೆನ್ಷನ್ ಇರಲ್ಲ!
- 22 hrs ago
LED ಡಿಸ್ಪ್ಲೇ ಹೊಂದಿರುವ ಅತ್ಯುತ್ತಮ ಪವರ್ಬ್ಯಾಂಕ್ಗಳ ಲಿಸ್ಟ್ ಇಲ್ಲಿದೆ!
- 1 day ago
ಇನ್ಸ್ಟಾಗ್ರಾಮ್ನಲ್ಲಿ ಬೇರೆಯವರ ಲಾಸ್ಟ್ ಸೀನ್ ನೋಡುವುದು ಹೇಗೆ?
Don't Miss
- News
ವಿಡಿಯೋ: ಚಾಕು ಹಿಡಿದು ಜನರನ್ನು ಬೆದರಿಸುವ ಕೋತಿ- ಮನೆಬಿಟ್ಟು ಹೊರಬಾರದ ಜನ
- Lifestyle
Today Rashi Bhavishya: ಸೋಮವಾರದ ದಿನ ಭವಿಷ್ಯ: ಮೇಷ, ಕರ್ಕ, ಕನ್ಯಾ, ಧನು ರಾಶಿಯವರು ಆರೋಗ್ಯದ ಬಗ್ಗೆ ಕಾಳಜಿವಹಿಸಿ
- Sports
ಭಾರತ vs ಐರ್ಲೆಂಡ್: ಮೊದಲ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ಗಳ ಭರ್ಜರಿ ಜಯ
- Movies
ರಾಘವೇಂದ್ರ ರಾಜ್ಕುಮಾರ್ ನಿರ್ಮಾಣದಲ್ಲಿ 'ವಿಜಯದಶಮಿ' ಧಾರಾವಾಹಿ: ಯಾವ ಸಿನಿಮಾಗೂ ಕಮ್ಮಿಯಿಲ್ಲ!
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ಭಾರತದಲ್ಲಿ ಒನ್ಪ್ಲಸ್ 10R 5G ಸ್ಮಾರ್ಟ್ಫೋನ್ ಲಾಂಚ್! ವಿಶೇಷತೆ ಏನು?
ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಪ್ರೀಮಿಯಂ ಸ್ಮಾರ್ಟ್ಫೋನ್ಗಳಿಗೆ ಒನ್ಪ್ಲಸ್ ಕಂಪೆನಿ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಗುರುವಾರ ತಡರಾತ್ರಿ ಹೊಸ ಒನ್ಪ್ಲಸ್ 10R 5G ಫೋನ್ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಎರಡು ಆವೃತ್ತಿಗಳಲ್ಲಿ ಬಿಡುಗಡೆ ಮಾಡಲಾಗಿದೆ. 150W SuperVOOC ವೇಗದ ಚಾರ್ಜಿಂಗ್ ಎಂಡ್ಯೂರೆನ್ಸ್ ಆವೃತ್ತಿ ಮತ್ತು 80W SuperVOOC ಚಾರ್ಜಿಂಗ್ ಆವೃತ್ತಿಯಲ್ಲಿ ಪರಿಚಯಿಸಲಾಗಿದೆ.

ಹೌದು, ಒನ್ಪ್ಲಸ್ ಕಂಪೆನಿ ಭಾರತದಲ್ಲಿ ಒನ್ಪ್ಲಸ್ 10R 5G ಫೋನ್ ಲಾಂಚ್ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು 120Hz ಡಿಸ್ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಫೋನ್ ಫಾರೆಸ್ಟ್ ಗ್ರೀನ್ ಮತ್ತು ಸಿಯೆರಾ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ಒನ್ಪ್ಲಸ್ 10R 5G ಸ್ಮಾರ್ಟ್ಫೋನ್ 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಫುಲ್ HD+ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 120Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 720Hz ಟಚ್ ರೆಸ್ಪಾನ್ಸ್ ರೇಟ್ ಅನ್ನು ಹೊಂದಿದೆ. ಜೊತೆಗೆ 2.5D ಕರ್ವ್ಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ಒನ್ಪ್ಲಸ್ 10R 5G ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ OxygenOS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಪ್ರೊಸೆಸರ್ 20% ಸುಧಾರಿತ GPU ಕಾರ್ಯಕ್ಷಮತೆ, 25% ಸುಧಾರಿತ ವಿದ್ಯುತ್ ದಕ್ಷತೆ ಮತ್ತು 80% ಉತ್ತಮ AI ಕಾರ್ಯಕ್ಷಮತೆಯನ್ನು ನೀಡುತ್ತದೆ. ಹೈಪರ್ಬೂಸ್ಟ್ ಗೇಮಿಂಗ್ ಎಂಜಿನ್ ಮತ್ತು ಜನರಲ್ ಪರ್ಫಾರ್ಮೆನ್ಸ್ ಅಡಾಪ್ಟರ್ (ಜಿಪಿಎ) ಫ್ರೇಮ್ ಸ್ಟೆಬಿಲೈಸರ್ ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ
ಒನ್ಪ್ಲಸ್ 10R 5G ಇದು ಸುಗಮ ಗೇಮಿಂಗ್ ಕಾರ್ಯಕ್ಷಮತೆಯನ್ನು ನೀಡುತ್ತದೆ. ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೋನಿ IMX355 ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ GC02M1 ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ ISOCELL S5K3P9 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಒನ್ಪ್ಲಸ್ 10R 5G ಸ್ಮಾರ್ಟ್ಫೋನ್ ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 150W SuperVOOC ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಇನ್ನು 80W SuperVOOC ವೇಗದ ಚಾರ್ಜಿಂಗ್ ಹೊಂದಿರುವ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಒನ್ಪ್ಲಸ್ 10R 5G 80W SuperVOOC ಚಾರ್ಜಿಂಗ್ ಮಾದರಿಯ ಸ್ಮಾರ್ಟ್ಫೋನ್ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 38,999ರೂ.ಬೆಲೆ ಹೊಂದಿದೆ. ಹಾಗೆಯೇ 12GB RAM + 256GB ರೂಪಾಂತರದ ಬೆಲೆ 42,999ರೂ.ಹೊಂದಿದೆ. ಇನ್ನು ಒನ್ಪ್ಲಸ್ 10R 5G ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 12GB RAM + 256GB ಕಾನ್ಫಿಗರೇಶನ್ ಬೆಲೆ 43,999.ರೂ ಆಗಿದೆ. ಇದರಲ್ಲಿ 80W ಚಾರ್ಜಿಂಗ್ ಆಯ್ಕೆಯ ಫೋನ್ ಫಾರೆಸ್ಟ್ ಗ್ರೀನ್ ಮತ್ತು ಸಿಯೆರಾ ಬ್ಲಾಕ್ ಬಣ್ಣಗಳಲ್ಲಿ ಬರಲಿದೆ. ಆದರೆ 150W ಚಾರ್ಜಿಂಗ್ ಹೊಂದಿರುವ ಫೋನ್ ಸಿಯೆರಾ ಬ್ಲ್ಯಾಕ್ ಬಣ್ಣದಲ್ಲಿ ಲಭ್ಯವಾಗಲಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999