Home
ಸುದ್ದಿಜಾಲ

ಒನ್‌ಪ್ಲಸ್‌ 10R ಫೋನಿನ ಮೊದಲ ಮಾರಾಟ ಇಂದು!..ಫೀಚರ್ಸ್‌ ಹೇಗಿವೆ?

ಒನ್‌ಪ್ಲಸ್‌ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಲಾಂಚ್ ಮಾಡಿರುವ 'ಒನ್‌ಪ್ಲಸ್‌ 10R' ಸ್ಮಾರ್ಟ್‌ಫೋನ್ ಈಗಾಗಲೇ ಆಕರ್ಷಕ ಫೀಚರ್ಸ್‌ ಗಳಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಸ್ಮಾರ್ಟ್‌ಫೋನ್ ಇಂದು (ಮೇ 4) ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಮಧ್ಯಾಹ್ನ 12ಕ್ಕೆ ಮೊದಲ ಸೇಲ್‌ ಪ್ರಾರಂಭಿಸಲಿದೆ. ಇನ್ನು ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌ ಹೊಂದಿದೆ.

ಒನ್‌ಪ್ಲಸ್‌ 10R ಫೋನಿನ ಮೊದಲ ಮಾರಾಟ ಇಂದು!..ಫೀಚರ್ಸ್‌ ಹೇಗಿವೆ?

ಹೌದು, ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 10R ಸ್ಮಾರ್ಟ್‌ಫೋನ್ ಮಾರಾಟ ಇಂದು ಇ ಕಾಮರ್ಸ್ ದೈತ್ಯ ಅಮೆಜಾನ್ ನಡೆಯಲಿದೆ. ಈ ಫೋನ್ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿರುವುದು ಪ್ಲಸ್‌ ಪಾಯಿಂಟ್ ಆಗಿ ಕಾಣಿಸಿಕೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗಾದರೇ ಒನ್‌ಪ್ಲಸ್‌ 10R ಸ್ಮಾರ್ಟ್‌ಫೋನಿನ ಬೆಲೆ ಎಷ್ಟು? ಹಾಗೂ ಈ ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 120Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 720Hz ಟಚ್ ರೆಸ್ಪಾನ್ಸ್ ರೇಟ್‌ ಅನ್ನು ಹೊಂದಿದೆ. ಜೊತೆಗೆ 2.5D ಕರ್ವ್ಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?
ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ OxygenOS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಪ್ರೊಸೆಸರ್‌ 20% ಸುಧಾರಿತ GPU ಕಾರ್ಯಕ್ಷಮತೆ, 25% ಸುಧಾರಿತ ವಿದ್ಯುತ್ ದಕ್ಷತೆ ಮತ್ತು 80% ಉತ್ತಮ AI ಕಾರ್ಯಕ್ಷಮತೆಯನ್ನು ನೀಡುತ್ತದೆ. ಹೈಪರ್‌ಬೂಸ್ಟ್ ಗೇಮಿಂಗ್ ಎಂಜಿನ್ ಮತ್ತು ಜನರಲ್ ಪರ್ಫಾರ್ಮೆನ್ಸ್ ಅಡಾಪ್ಟರ್ (ಜಿಪಿಎ) ಫ್ರೇಮ್ ಸ್ಟೆಬಿಲೈಸರ್ ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್
ಒನ್‌ಪ್ಲಸ್‌ 10R 5G ಇದು ಸುಗಮ ಗೇಮಿಂಗ್ ಕಾರ್ಯಕ್ಷಮತೆಯನ್ನು ನೀಡುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೋನಿ IMX355 ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ GC02M1 ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL S5K3P9 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಒನ್‌ಪ್ಲಸ್‌ 10R ಫೋನಿನ ಮೊದಲ ಮಾರಾಟ ಇಂದು!..ಫೀಚರ್ಸ್‌ ಹೇಗಿವೆ?

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 150W SuperVOOC ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಇನ್ನು 80W SuperVOOC ವೇಗದ ಚಾರ್ಜಿಂಗ್ ಹೊಂದಿರುವ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಒನ್‌ಪ್ಲಸ್‌ 10R 5G 80W SuperVOOC ಚಾರ್ಜಿಂಗ್‌ ಮಾದರಿಯ ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 38,999ರೂ.ಬೆಲೆ ಹೊಂದಿದೆ. ಹಾಗೆಯೇ 12GB RAM + 256GB ರೂಪಾಂತರದ ಬೆಲೆ 42,999ರೂ.ಹೊಂದಿದೆ. ಇನ್ನು ಒನ್‌ಪ್ಲಸ್‌ 10R 5G ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 12GB RAM + 256GB ಕಾನ್ಫಿಗರೇಶನ್‌ ಬೆಲೆ 43,999.ರೂ ಆಗಿದೆ. ಇದರಲ್ಲಿ 80W ಚಾರ್ಜಿಂಗ್‌ ಆಯ್ಕೆಯ ಫೋನ್‌ ಫಾರೆಸ್ಟ್ ಗ್ರೀನ್ ಮತ್ತು ಸಿಯೆರಾ ಬ್ಲಾಕ್ ಬಣ್ಣಗಳಲ್ಲಿ ಬರಲಿದೆ. ಆದರೆ 150W ಚಾರ್ಜಿಂಗ್ ಹೊಂದಿರುವ ಫೋನ್‌ ಸಿಯೆರಾ ಬ್ಲ್ಯಾಕ್‌ ಬಣ್ಣದಲ್ಲಿ ಲಭ್ಯವಾಗಲಿದೆ.

Best Mobiles in India

English summary
OnePlus 10R Goes for First Sale Today Via Amazon: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+