Home
ಸುದ್ದಿಜಾಲ

ಗ್ರಾಹಕರಿಗೆ ಸಿಹಿಸುದ್ದಿ!..ಈ ಒನ್‌ಪ್ಲಸ್‌ ಮೊಬೈಲ್‌ಗೆ ಈಗ ಬಿಗ್‌ ಡಿಸ್ಕೌಂಟ್‌!

ಒನ್‌ಪ್ಲಸ್‌ 10R 5G ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇದೀಗ ಈ ಫೋನ್‌ ಖರೀದಿಸುವ ಗ್ರಾಹಕರಿಗೆ ಅಮೆಜಾನ್‌ ಇ ಕಾಮರ್ಸ್‌ ತಾಣವು ಗುಡ್‌ನ್ಯೂಸ್‌ ನೀಡಿದೆ. ಏಕೆಂದರೆ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಈಗ ಹೆಚ್ಚಿನ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ನಲ್ಲಿ ಒನ್‌ಪ್ಲಸ್‌ 10R 5G ಮೊಬೈಲ್‌ ಸಖತ್‌ ಡಿಸ್ಕೌಂಟ್‌ ಬೆಲೆಗೆ ಖರೀದಿಗೆ ಲಭ್ಯ ಇದೆ. ಈ ಸ್ಮಾರ್ಟ್‌ಫೋನ್‌ 8GB RAM + 128GB ವೇರಿಯಂಟ್‌ 15% ರಷ್ಟು ರಿಯಾಯಿತಿ ಪಡೆದಿದೆ. ಅಂದಹಾಗೆ ಈ ಫೋನ್‌ 38,999ರೂ.ಬೆಲೆ ಹೊಂದಿದ್ದು, ಕೊಡುಗೆಯಲ್ಲಿ 32,999ರೂ. ಗಳಿಗೆ ಖರೀದಿ ಮಾಡಬಹುದು. ಇದರೊಂದಿಗೆ ಬ್ಯಾಂಕ್‌ ಆಫರ್‌ ಸಹ ಪಡೆದುಕೊಳ್ಳಬಹುದಾಗಿದೆ.

ಗ್ರಾಹಕರಿಗೆ ಸಿಹಿಸುದ್ದಿ!..ಈ ಒನ್‌ಪ್ಲಸ್‌ ಮೊಬೈಲ್‌ಗೆ ಈಗ ಬಿಗ್‌ ಡಿಸ್ಕೌಂಟ್‌!

ಇನ್ನು ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 ಮ್ಯಾಕ್ಸ್ SoC ಪ್ರೊಸೆಸರ್‌ ಸಾಮರ್ಥ್ಯದ ಪಡೆದಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದೆ. ಹಾಗಾದ್ರೆ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ 10R 5G ಡಿಸ್‌ಪ್ಲೇ ರಚನೆ ಮಾಹಿತಿ : ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಈ ಫೋನ್‌ ಹೊಂದಿದೆ.

ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಈ ಫೋನ್‌ 120 Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 720 Hz ಟಚ್ ರೆಸ್ಪಾನ್ಸ್ ರೇಟ್‌ ಅನ್ನು ಒಳಗೊಂಡಿದೆ. ಇದರ ಜೊತೆಗೆ 2.5D ಕರ್ವ್ಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಒನ್‌ಪ್ಲಸ್‌ 10R 5G ಪ್ರೊಸೆಸರ್‌ ಕಾರ್ಯವೈಖರಿ ಹೇಗೆ : ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 ಮ್ಯಾಕ್ಸ್ SoC ಪ್ರೊಸೆಸರ್‌ ಪವರ್‌ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಆಧಾರಿತ OxygenOS 12.1 ಬೆಂಬಲದೊಂದಿಗೆ ಕೆಲಸ ಮಾಡಲಿದೆ.

ಹಾಗೆಯೇ ಈ ಫೋನಿನ ಪ್ರೊಸೆಸರ್‌ 20% ಸುಧಾರಿತ GPU ಕಾರ್ಯಕ್ಷಮತೆ, ಶೇ 25% ಸುಧಾರಿತ ವಿದ್ಯುತ್ ದಕ್ಷತೆ ಮತ್ತು ಶೇ 80% ಉತ್ತಮ AI ಕಾರ್ಯಕ್ಷಮತೆ ಅನ್ನು ಒದಗಿಸಲಿದೆ. ಹಾಗೆಯೇ 12 GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಒನ್‌ಪ್ಲಸ್‌ 10R 5G ಕ್ಯಾಮೆರಾ ಸೆನ್ಸಾರ್ ಮಾಹಿತಿ ಇಲ್ಲಿದೆ : ಒನ್‌ಪ್ಲಸ್‌ 10R 5G ಮೊಬೈಲ್‌ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದೆ. ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೋನಿ IMX355 ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ GC02M1 ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL S5K3P9 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಇದೆ.

ಒನ್‌ಪ್ಲಸ್‌ 10R 5G ಬ್ಯಾಟರಿ ಸಾಮರ್ಥ್ಯ ಮತ್ತು ಇತರೆ ಫೀಚರ್ಸ್‌ : ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 150W SuperVOOC ವೇಗದ ಚಾರ್ಜಿಂಗ್ ಸಪೋರ್ಟ್‌ ನೊಂದಿಗೆ ಲಭ್ಯ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್ C ಪೋರ್ಟ್ ಇವೆ.

Best Mobiles in India

English summary
OnePlus 10R price in India Slashed on Amazon. offer price and specifications details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+