ಒನ್‌ಪ್ಲಸ್‌ ಪ್ರಿಯರಿಗೆ ಮತ್ತೆ ಭರ್ಜರಿ ಸಿಹಿಸುದ್ದಿ!..ಈ ಚಾನ್ಸ್‌ ಕಳ್ಕೋಬೇಡಿ!

|

ಮೊಬೈಲ್‌ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಬ್ರ್ಯಾಂಡ್‌ ಭಿನ್ನ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಒನ್‌ಪ್ಲಸ್‌ ಸಂಸ್ಥೆಯ ಕೆಲವು ಫ್ಲ್ಯಾಗ್‌ಶಿಪ್‌ ಮಾದರಿಯ ಫೋನ್‌ಗಳು ಈಗಾಗಲೇ ಗ್ರಾಹಕರಿಗೆ ಇಷ್ಟವಾಗಿವೆ. ಆ ಪೈಕಿ ಒನ್‌ಪ್ಲಸ್‌ 10T 5G (OnePlus 10T 5G) ಸ್ಮಾರ್ಟ್‌ಫೋನ್‌ ಸಹ ಒಂದಾಗಿದ್ದು, ಈ ಫೋನ್‌ ಸಹ ಡಿಮ್ಯಾಂಡ್‌ ಹೊಂದಿದೆ. ಇನ್ನು ಈ ಫೋನ್‌ ಖರೀದಿಸುವ ಗ್ರಾಹಕರಿಗೆ ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ ಬಡ್ಸ್‌ ಪ್ರೊ ಇಯರ್‌ಬಡ್ಸ್‌ ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯವಾಗಲಿದೆ.

ಒನ್‌ಪ್ಲಸ್‌ 10T 5G ಸ್ಮಾರ್ಟ್‌ಫೋನ್‌

ಹೌದು, ಒನ್‌ಪ್ಲಸ್‌ 10T 5G ಸ್ಮಾರ್ಟ್‌ಫೋನ್‌ ಅನ್ನು ಖರೀದಿಸುವ ಗ್ರಾಹಕರಿಗೆ 9990ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಹೊಂದಿರುವ ಒನ್‌ಪ್ಲಸ್‌ ಬಡ್ಸ್‌ ಪ್ರೊ (OnePlus buds pro) ಇಯರ್‌ಬಡ್ಸ್‌ 5,999ರೂ. ಗಳಿಗೆ ಲಭ್ಯವಾಗಲಿದೆ. ಹಾಗೆಯೇ ಒನ್‌ಪ್ಲಸ್‌ ಬಡ್ಸ್‌ Z2 ಡಿವೈಸ್‌ 2,699ರೂ. ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಅಂದಹಾಗೆ ಒನ್‌ಪ್ಲಸ್‌ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಮೂಲಕ ಖರೀದಿಸುವ ಗ್ರಾಹಕರಿಗೆ ಈ ಕೊಡುಗೆ ಅನ್ವಯವಾಗಲಿದೆ.

ಸ್ಮಾರ್ಟ್‌ಫೋನ್‌

ಇನ್ನು ಒನ್‌ಪ್ಲಸ್‌ 10T 5G ಸ್ಮಾರ್ಟ್‌ಫೋನ್‌ 8GB RAM + 128 GB, 12GB RAM + 256 GB ಮತ್ತು 16GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಆರಂಭಿಕ (8GB + 128GB) ವೇರಿಯಂಟ್‌ ಬೆಲೆಯು ಭಾರತದಲ್ಲಿ 49,999ರೂ. ಆಗಿದೆ. ಹಾಗಾದರೆ ಒನ್‌ಪ್ಲಸ್‌ 10T 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 2,412x1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಬಲವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 10-ಬಿಟ್ ಕಲರ್‌, RGB ಬಣ್ಣದ ಹರವು ಮತ್ತು HDR10+ ಬೆಂಬಲಿಸಲಿದೆ. ಇದು 120hz ಸ್ಕ್ರೀನ್ ರಿಫ್ರೆಶ್ ರೇಟ್‌ ಅನ್ನು ಸಹ ನೀಡಲಿದೆ. ಇದಲ್ಲದೆ 394ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರುವ ಈ ಡಿಸ್‌ಪ್ಲೇ 360Hz ವರೆಗಿನ ಹಾರ್ಡ್‌ವೇರ್ ಟಚ್‌ ರೆಸ್ಪಾನ್ಸ್‌ ಮತ್ತು 720Hz ನ ಸಾಫ್ಟ್‌ವೇರ್ ಟಚ್‌ ರೆಸ್ಪಾನ್ಸ್‌ ಅನ್ನು ನೀಡಲಿದೆ.

ಪ್ರೊಸೆಸರ್‌ ಬಲವೇನು?

ಪ್ರೊಸೆಸರ್‌ ಬಲವೇನು?

ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಕ್ಸಿಜನ್ OS 12.1 ಜೊತೆಗೆ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ರನ್‌ ಆಗಲಿದೆ. ಈ ವರ್ಷದ ಅಂತ್ಯದ ವೇಳೆಗೆ ಈ ಫೋನ್‌ OxygenOS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌16GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಡ್ಯುಯಲ್ LED ಫ್ಲ್ಯಾಷ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಹೊಂದಿದ್ದು, ಇದು 119.9 ಡಿಗ್ರಿಗಳ ಫೀಲ್ಡ್‌-ವ್ಯೂನೊಂದಿಗೆ f/2.2 ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ.

ಬ್ಯಾಟರಿ ಬ್ಯಾಕ್‌ಅಪ್‌ ಏನು?

ಬ್ಯಾಟರಿ ಬ್ಯಾಕ್‌ಅಪ್‌ ಏನು?

ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ 4800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 150W SUPERVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಚಾರ್ಜರ್ ಕೇವಲ 19 ನಿಮಿಷಗಳಲ್ಲಿ ಫೋನ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಸ್ಮಾರ್ಟ್ ಬ್ಯಾಟರಿ ಹೆಲ್ತ್ ಅಲ್ಗಾರಿದಮ್, ಬ್ಯಾಟರಿ ಹೀಲಿಂಗ್ ಟೆಕ್ನಾಲಜಿ, ದಕ್ಷತೆಯನ್ನು ಸುಧಾರಿಸಲು VFC ಟ್ರಿಕಲ್ ಚಾರ್ಜಿಂಗ್ ಆಪ್ಟಿಮೈಸೇಶನ್ ಅಲ್ಗಾರಿದಮ್, ಚಾರ್ಜಿಂಗ್ ನಿರ್ವಹಿಸಲು ಕಸ್ಟಮೈಸ್ ಮಾಡಿದ ಸ್ಮಾರ್ಟ್ ಚಿಪ್ ಮತ್ತು 13 ಟೆಂಪ್‌ರೇಚರ್‌ ಸೆನ್ಸಾರ್‌ ಒಳಗೊಂಡ ಬ್ಯಾಟರಿ-ಸಂಬಂಧಿತ ಫೀಚರ್ಸ್‌ಗಳನ್ನು ಒಳಗೊಂಡಿದೆ.

Best Mobiles in India

English summary
OnePlus 10T 5G Offer: Get OnePlus Buds Pro at Discount Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X