ಒನ್‌ಪ್ಲಸ್‌ 10T ಮಾರ್ವೆಲ್ ಆವೃತ್ತಿ ಬಿಡುಗಡೆ!..160W ವೇಗದ ಚಾರ್ಜಿಂಗ್‌!

|

ಭಾರತದ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಕಂಪೆನಿ ಹೊಸ ಒನ್‌ಪ್ಲಸ್‌ 10T ಮಾರ್ವೆಲ್ ಆವೃತ್ತಿಯನ್ನು ಪರಿಚಯಿಸಿದೆ. ಈ ಮೂಲಕ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಇನ್ನು ಒನ್‌ಪ್ಲಸ್‌ 10T ಮಾರ್ವೆಲ್ ಆವೃತ್ತಿ ಫೋನ್‌ ಸೀಮಿತ ಅವಧಿಗೆ ಮಾತ್ರ ಲಭ್ಯವಾಗಲಿದೆ ಎಂದು ಒನ್‌ಪ್ಲಸ್‌ ಕಂಪೆನಿ ಹೇಳಿಕೊಂಡಿದೆ. ಇದು 16GB RAM ಮತ್ತು 256GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಕಂಪೆನಿ ಹೊಸ ಒನ್‌ಪ್ಲಸ್‌ 10T ಮಾರ್ವೆಲ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 160W ವೇಗದ ಚಾರ್ಜರ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒನ್‌ಪ್ಲಸ್‌ 10T ಮಾರ್ವೆಲ್ ಆವೃತ್ತಿ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080  x  2412  ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 950ನಿಟ್ಸ್‌ ಬ್ರೈಟ್‌ನೆಸ್ ಅನ್ನು ಹೊಂದಿದೆ. ಜೊತಗೆ HDR10+ ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ 10T ಮಾರ್ವೆಲ್ ಆವೃತ್ತಿ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 256GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದು ಮೆಮೊರಿ ಕಾರ್ಡ್‌ ಅನ್ನು ಬೆಂಬಲಿಸುವುದಿಲ್ಲ ಎಂದು ಹೇಳಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಒನ್‌ಪ್ಲಸ್‌ 10T ಮಾರ್ವೆಲ್ ಆವೃತ್ತಿ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX769 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒನ್‌ಪ್ಲಸ್‌ 10T ಮಾರ್ವೆಲ್ ಆವೃತ್ತಿ ಸ್ಮಾರ್ಟ್‌ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 160W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ ಕೇವಲ 19 ನಿಮಿಷಗಳಲ್ಲಿ 100% ಚಾರ್ಜ್‌ ಮಾಡಲಿದೆ.ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌,ವೈಫೈ, ಅನ್ನು ಬೆಂಬಲಿಸಲಿದೆ. ಇನ್ನು ಮಾರ್ವೆಲ್ ಎಡಿಷನ್ ಬಾಕ್ಸ್ ಐರನ್ ಮ್ಯಾನ್ ಫೋನ್ ಕವರ್, ಕ್ಯಾಪ್ಟನ್ ಅಮೆರಿಕದ ಶೀಲ್ಡ್ ಆಕಾರದ ಸಾಕೆಟ್ ಮತ್ತು ಬ್ಲಾಂಕ್ ಪ್ಯಾಂಥರ್ ಸ್ಟೈಲಿಂಗ್‌ನೊಂದಿಗೆ ಮೊಬೈಲ್ ಸ್ಟ್ಯಾಂಡ್ ಅನ್ನು ಒಳಗೊಂಡಿರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಅನ್ನು ಒನ್‌ಪ್ಲಸ್‌ ರೆಡ್ ಕೇಬಲ್ ಚಂದಾದಾರರು ಖರೀದಿಸಿದರೆ 3,000 ರೂಪಾಯಿಗಳ ರಿಯಾಯಿ ಪಡೆಯಬಹುದಾಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ಬೆಲೆ 55,999 ರೂಪಾಯಿ ಆಗಿದೆ. ಇದು ಭಾರತದಲ್ಲಿ ಡಿಸೆಂಬರ್ 17 ಮತ್ತು ಡಿಸೆಂಬರ್ 19 ರ ನಡುವೆ ಮಾರಾಟವಾಗಲಿದೆ. ಇದು ಸೀಮಿತ ಅವಧಿಯ ಕೊಡುಗೆಯಾಗಿದ್ದು, ಎಷ್ಟು ದಿನಗಳ ವರೆಗೆ ಲಭ್ಯವಾಗಲಿದೆ ಎಂಬುದರ ಮಾಹಿತಿಯಿಲ್ಲ.

Best Mobiles in India

English summary
OnePlus 10T Marvel Edition launched in India: Specifiations

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X