Just In
- 11 min ago
ನಿಮ್ಮ ಉಂಗುರದ ಗಾತ್ರವನ್ನು ಫೋನ್ ಮೂಲಕವೇ ಅಳತೆ ಮಾಡಿ: ಹೇಗೆ ಗೊತ್ತಾ?
- 29 min ago
ಫೈರ್-ಬೋಲ್ಟ್ನ ಈ ಸ್ಮಾರ್ಟ್ವಾಚ್ ಖರೀದಿಗೆ ಲಭ್ಯ!..ಇದರ ಲುಕ್ಗೆ ನೀವು ಕ್ಲೀನ್ ಬೋಲ್ಡ್!
- 1 hr ago
ಸೋನಿ ಸಂಸ್ಥೆಯಿಂದ ಹೊಸ ಮಾದರಿಯ ವಾಕ್ಮ್ಯಾನ್ ಲಾಂಚ್!..ಜಬರ್ದಸ್ತ್ ಫೀಚರ್ಸ್!
- 2 hrs ago
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಬೆಲೆಯಲ್ಲಿ ಏಕಾಏಕಿ ಭಾರೀ ಇಳಿಕೆ!..ಸಖತ್ ಆಫರ್!
Don't Miss
- News
ಗೋರಖನಾಥ ದೇಗುಲ ದಾಳಿ: ಆರೋಪಿ ಮುರ್ತಾಜಾ ಅಬ್ಬಾಸಿಗೆ ಮರಣದಂಡನೆ!
- Movies
Muddumanigalu Serial: ಜಾಹ್ನವಿಯೇ ತನ್ನ ತಾಯಿ ಎಂದು ದೃಷ್ಟಿಗೆ ತಿಳಿಯುತ್ತಾ?
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Finance
ಅದಾನಿ ಗ್ರೂಪ್ನ ಷೇರು ಕುಸಿತವು ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಹೋಲಿಸಿದ ಅದಾನಿ ಗ್ರೂಪ್ ಸಿಎಫ್ಒ- ಕಾರಣ
- Sports
ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ವಿಶೇಷ ಅಭಿನಂದನೆ ತಿಳಿಸಿದ ಹಿರಿಯರ ಕ್ರಿಕೆಟ್ ತಂಡ
- Lifestyle
ಸಮಂತಾ ಮಯೋಸೈಟಿಸ್ನಿಂದ ಚೇತರಿಸಿಕೊಳ್ಳಲು ಪಾಲಿಸುತ್ತಿರುವ ಡಯಟ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಮೆಜಾನ್‌ನಲ್ಲಿ ಒನ್‌ಪ್ಲಸ್ ಫೋನ್ ಖರೀದಿಸಿದರೆ ಸಿಗುತ್ತೆ ಬಿಗ್ ಡಿಸ್ಕೌಂಟ್
ಒನ್‌ಪ್ಲಸ್ ಸ್ಮಾರ್ಟ್‌ಫೋನ್ ಪ್ರಿಯರಿಗೆ ಅಮೆಜಾನ್ ಗುಡ್‌ನ್ಯೂಸ್ ನೀಡಿದೆ. ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ ಸೇಲ್‌ನಲ್ಲಿ ಒನ್‌ಪ್ಲಸ್ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್ ನೀಡುತ್ತಿದೆ. ಇದರಲ್ಲಿ ಒನ್‌ಪ್ಲಸ್ 10T ಸ್ಮಾರ್ಟ್‌ಫೋನ್ ಭಾರಿ ರಿಯಾಯಿತಿಯನ್ನು ಪಡೆದುಕೊಂಡಿದೆ. 49,999ರೂ. ಆರಂಭಿಕ ಬೆಲೆಯಲ್ಲಿ ಬಿಡುಗಡೆಯಾಗಿದ್ದ ಈ ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ ಇದೀಗ 44,999ರೂ. ಬೆಲೆಯಲ್ಲಿ ಲಭ್ಯವಾಗುತ್ತಿದೆ. ಇದರೊಂದಿಗೆ ಕ್ರೆಡಿಟ್ ಕಾರ್ಡ್ ಇಎಂಐ ವಹಿವಾಟುಗಳನ್ನು ನಡೆಸಿದರೆ ಹೆಚ್ಚುವರಿ ರಿಯಾಯಿತಿ ಕೂಡ ಲಭ್ಯವಾಗಲಿದೆ.

ಹೌದು, ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ ಸೇಲ್‌ನಲ್ಲಿ ಒನ್‌ಪ್ಲಸ್ 10T ರಿಯಾಯಿತಿ ಪಡೆದುಕೊಂಡಿದೆ. ಈ ಸೇಲ್ ಡಿಸೆಂಬರ್ 31 ರ ಅಂತ್ಯದವರೆಗೆ ಮುಂದುವರಿಯುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಜನಪ್ರಿಯ 5Gಫೋನ್‌ಗಳಲ್ಲಿ ಒಂದಾಗಿದೆ. ಇದು ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗಾದ್ರೆ ಒನ್‌ಪ್ಲಸ್ 10T ಮೇಲೆ ಏನೆಲ್ಲಾ ಆಫರ್ ಲಭ್ಯವಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಏನೆಲ್ಲಾ ಡಿಸ್ಕೌಂಟ್ ಲಭ್ಯ!
ಒನ್‌ಪ್ಲಸ್ 10T ಅಮೆಜಾನ್‌ಲ್ಲಿ 5,000ರೂ.ಗಳ ಡಿಸ್ಕೌಂಟ್ ದೊರೆಯಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ಇದೀಗ ಕೇವಲ 44,999ರೂ. ಬೆಲೆಯಲ್ಲಿ ಲಭ್ಯವಾಗುತ್ತಿದೆ. ಇದು 8GB RAM ಮತ್ತು 128GB ಸ್ಟೋರೇಜ್ ಮಾದರಿಗೆ ಅನ್ವಯಿಸಲಿದೆ. ಇದಲ್ಲದೆ ಎಕ್ಸ್‌ಚೇಂಜ್ ಆಫರ್‌ನಲ್ಲಿ (ಫೋನ್ ಗುಣಮಟ್ಟದ ಆಧಾರದ ಮೇಲೆ) 13,300 ವರೆಗೆ ರಿಯಾಯಿತಿ ಕೂಡ ದೊರೆಯಲಿದೆ. ಯೆಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಇಎಂಐ ವಹಿವಾಟು ನಡೆಸುವವರಿಗೆ ಕೂಡ ಹೆಚ್ಚುವರಿ ರಿಯಾಯಿತಿ ದೊರೆಯಲಿದೆ.

ಫೀಚರ್ಸ್ ಹೇಗಿದೆ?
ಒನ್‌ಪ್ಲಸ್ 10T ಸ್ಮಾರ್ಟ್‌ಫೋನ್ 6.7 ಇಂಚಿನ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 2,412x1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಬಲವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 10-ಬಿಟ್ ಕಲರ್, RGB ಬಣ್ಣದ ಹರವು ಮತ್ತು HDR10+ ಬೆಂಬಲಿಸಲಿದೆ. ಈ ಡಿಸ್‌ಪ್ಲೇ 360Hz ವರೆಗಿನ ಹಾರ್ಡ್‌ವೇರ್ ಟಚ್ ರೆಸ್ಪಾನ್ಸ್ ಮತ್ತು 720Hz ನ ಸಾಫ್ಟ್‌ವೇರ್ ಟಚ್ ರೆಸ್ಪಾನ್ಸ್ ಅನ್ನು ನೀಡಲಿದೆ.

ಪ್ರೊಸೆಸರ್ ಕಾರ್ಯದಕ್ಷತೆ ಏನಿದೆ?
ಒನ್‌ಪ್ಲಸ್ 10T ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಕ್ಸಿಜನ್ OS 12.1 ಜೊತೆಗೆ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ರನ್ ಆಗಲಿದೆ. ಈ ವರ್ಷದ ಅಂತ್ಯದ ವೇಳೆಗೆ ಈ ಫೋನ್ OxygenOS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್16GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ ಹೇಗಿದೆ?
ಒನ್‌ಪ್ಲಸ್ 10T ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ಯಾಮೆರಾ ಡ್ಯುಯಲ್ LED ಫ್ಲ್ಯಾಷ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದ್ದು, ಇದು 119.9 ಡಿಗ್ರಿಗಳ ಫೀಲ್ಡ್-ವ್ಯೂನೊಂದಿಗೆ f/2.2 ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ.

ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ಒನ್‌ಪ್ಲಸ್ 10T ಸ್ಮಾರ್ಟ್‌ಫೋನ್ 4800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 150W SUPERVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಚಾರ್ಜರ್ ಕೇವಲ 19 ನಿಮಿಷಗಳಲ್ಲಿ ಫೋನ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಸ್ಮಾರ್ಟ್ ಬ್ಯಾಟರಿ ಹೆಲ್ತ್ ಅಲ್ಗಾರಿದಮ್, ಬ್ಯಾಟರಿ ಹೀಲಿಂಗ್ ಟೆಕ್ನಾಲಜಿ, ದಕ್ಷತೆಯನ್ನು ಸುಧಾರಿಸಲು VFC ಟ್ರಿಕಲ್ ಚಾರ್ಜಿಂಗ್ ಆಪ್ಟಿಮೈಸೇಶನ್ ಅಲ್ಗಾರಿದಮ್, ಚಾರ್ಜಿಂಗ್ ನಿರ್ವಹಿಸಲು ಕಸ್ಟಮೈಸ್ ಮಾಡಿದ ಸ್ಮಾರ್ಟ್ ಚಿಪ್ ಮತ್ತು 13 ಟೆಂಪ್‌ರೇಚರ್ ಸೆನ್ಸಾರ್ ಒಳಗೊಂಡ ಬ್ಯಾಟರಿ-ಸಂಬಂಧಿತ ಫೀಚರ್ಸ್‌ಗಳನ್ನು ಒಳಗೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470