ಬಹುನಿರೀಕ್ಷಿತ ಒನ್‌ಪ್ಲಸ್‌ 11 5G ಫೋನ್ ಲಾಂಚ್‌!..ಅಚ್ಚರಿಯ 100W ಫಾಸ್ಟ್‌ ಚಾರ್ಜಿಂಗ್‌!

|

ಒನ್‌ಪ್ಲಸ್‌ ಕಂಪೆನಿಯ ಬಹಿನಿರೀಕ್ಷಿತ ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಈಗ ಬಿಡುಗಡೆ ಆಗಿದೆ. ಈ ನೂತನ ಫೋನ್ ಈ ಹಿಂದಿನ ಒನ್‌ಪ್ಲಸ್‌ 10 ಫೋನಿನ ಅಪ್‌ಗ್ರೇಡ್‌ ಆವೃತ್ತಿಯಾಗಿದ್ದು, ಹಲವು ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ. ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ.

ರಚನೆಯನ್ನು

ಹೌದು, ಒನ್‌ಪ್ಲಸ್‌ ಕಂಪೆನಿ ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ QHD+ E4 OLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಒಳಗೊಂಡಿದೆ. ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ರಚನೆಯನ್ನು ಪಡೆದಿದೆ. ಇದರೊಂದಿಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗಾದರೆ ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ 1,440 x 3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ QHD+ E4 OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೂರನೇ ತಲೆಮಾರಿನ ಲೋ-ಟೆಂಪ್‌ರೇಚರ್‌ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ತಂತ್ರಜ್ಞಾನವನ್ನು ಆಧರಿಸಿದೆ. ಪ್ರತಿ ಇಂಚಿನ ಪಿಕ್ಸೆಲ್ ಸಾಂದ್ರತೆ 525ppi ಆಗಿದ್ದು, 50,00,000:1 ಕಾಂಟ್ರಾಸ್ಟ್ ಅನುಪಾತ ಪಡೆದಿದೆ. ಇದರೊಂದಿಗೆ 1300 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಇದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 13 ನಲ್ಲಿ OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB + 256GB, 12GB + 512GB ಮತ್ತು 16GB + 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗಳನ್ನು ಇದು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ರಚನೆ

ಕ್ಯಾಮೆರಾ ಸೆನ್ಸಾರ್ ರಚನೆ

ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಅದಕ್ಕೆ ಪೂರಕವಾಗಿ ಇದು 100W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಸಹ ಬೆಂಬಲಿಸಲಿದೆ. ಹಾಗೆಯೇ ಯುಎಸ್‌ಬಿ 2.0 ಟೈಪ್-ಸಿ ಪೋರ್ಟ್ ಅನ್ನು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಬಳಸುತ್ತದೆ. ಜೊತೆಗೆ ಡಾಲ್ಬಿ ಅಟ್ಮೋಸ್‌, ಸ್ಟಿರಿಯೋ ಸ್ಪೀಕರ್ ಸೆಟ್‌ಅಪ್‌ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 5G, ವೈಫೈ 6 802.11 a/b/g/n/ac/ax, ಬ್ಲೂಟೂತ್ 5.3 ಸೌಲಭ್ಯ ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ 12GB + 256GB - RMB 3999 (ಭಾರತದಲ್ಲಿ ಅಂದಾಜು 48,080ರೂ)
ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ 12GB + 512GB - RMB 4399 (ಭಾರತದಲ್ಲಿ ಅಂದಾಜು 52,890ರೂ)
ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ 16GB + 512GB - RMB 4899 (ಭಾರತದಲ್ಲಿ ಅಂದಾಜು 58,890ರೂ)

ಅಂದಹಾಗೆ ಒನ್‌ಪ್ಲಸ್‌ 11 (OnePlus 11) ಸ್ಮಾರ್ಟ್‌ಫೋನ್ ಎರಡು ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಅವುಗಳು ಕ್ರಮವಾಗಿ ಕಪ್ಪು ಮತ್ತು ಹಸಿರು ಆಗಿವೆ.

Best Mobiles in India

English summary
OnePlus 11 5G with 100W fast charger Launched in China: Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X