Just In
Don't Miss
- News
'ಈ ಬಾರಿ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ' ಕೊಡಿಶ್ರೀಗಳ ರಾಜಕೀಯ ಭವಿಷ್ಯ
- Sports
ಲೂನಾ ಸವಾರಿ ಮಾಡುವುದನ್ನು ನಿಲ್ಲಿಸು ಎಂದು ಚೇತೇಶ್ವರ ಪೂಜಾರಗೆ ಹೇಳಿದ್ದ ರವಿಶಾಸ್ತ್ರಿ
- Automobiles
ವೇಗವಾಗಿ ಮುನ್ನುಗ್ಗುತ್ತಿವೆ ಹೀರೋ, ಹೋಂಡಾ... ಹಿಂದೆಯೇ ಬಂತು ಟಿವಿಎಸ್!
- Movies
Lakshana Seria: ಶ್ವೇತಾಗೆ ಎಚ್ಚರಿಕೆ ಕೊಟ್ಟ ಭೂಪತಿ, ನಕ್ಷತ್ರ ಜೊತೆ ಚೆಲ್ಲಾಟ
- Lifestyle
Horoscope Today 4 Feb 2023: ಶನಿವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅದಾನಿ ಕಳೆದುಕೊಂಡಿದ್ದು ಎಷ್ಟು ಲಕ್ಷ ಕೋಟಿ? ಕುಸಿಯುತ್ತಿವೆ ಷೇರುಗಳು- ಭಾರತದ ಶ್ರೀಮಂತನಿಗೆ ಮಂದೇನು ಕಾದಿದೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಒನ್‌ಪ್ಲಸ್ 11 ಲಾಂಚ್ ಡೇಟ್ ಫಿಕ್ಸ್!..ಮಾರುಕಟ್ಟೆಯಲ್ಲಿ ಕ್ಯೂ ಪಕ್ಕಾ!
ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಒನ್‌ಪ್ಲಸ್ 11 ಸ್ಮಾರ್ಟ್‌ಫೋನ್ ಇದೇ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗುವ ಸಾದ್ಯತೆಯಿದೆ. ಒನ್‌ಪ್ಲಸ್ ಕಂಪೆನಿ ತನ್ನ 9ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಈ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲಿದೆ ಎನ್ನಲಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಇದೇ ಡಿಸೆಂಬರ್ 17ಕ್ಕೆ ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್ ಒನ್‌ಪ್ಲಸ್ ಕಂಪೆನಿಯ ಪ್ರಮುಖ ಫೋನ್‌ಗಳಲ್ಲಿ ಒಂದಾಗಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಒನ್‌ಪ್ಲಸ್ 11 ಸ್ಮಾರ್ಟ್‌ಫೋನ್ ಡಿಸೆಂಬರ್ 17ಕ್ಕೆ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಒನ್‌ಪ್ಲಸ್ ಕಂಪೆನಿಯ ಒಂಬತ್ತನೇ ವರ್ಷದ ವಾರ್ಷಿಕೋತ್ಸವದ ಸಮಯದಲ್ಲಿ ಇದು ಅನಾವರಣಗೊಳ್ಳಲಿದೆ ಎಂಬ ಸುದ್ದಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಆದರೆ ಇದುವರೆಗೂ ಒನ್‌ಪ್ಲಸ್ ಕಂಪೆನಿ ತನ್ನ ಫೋನ್ ಲಾಂಚ್ ಡೇಟ್ ಅನ್ನು ಅಧಿಕೃತಗೊಳಿಸಿಲ್ಲ ಅನ್ನೊದು ಕೂಡ ಗಮನಿಸಬೇಕಾದ ವಿಚಾರವಾಗಿದೆ. ಇದರ ನಡುವೆ ಒನ್‌ಪ್ಲಸ್ 11 ಸ್ಮಾರ್ಟ್‌ಫೋನ್ ಫೀಚರ್ಸ್ ಆನಲೈನ್‌ನಲ್ಲಿ ಸೋರಿಕೆಯಾಗಿದೆ. ಹಾಗಾದ್ರೆ ಒನ್‌ಪ್ಲಸ್ 11 ಸ್ಮಾರ್ಟ್‌ಫೋನ್ ಮೇಲಿನ ನಿರೀಕ್ಷೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್ 11 ಸ್ಮಾರ್ಟ್‌ಫೋನ್ 6.7-ಇಂಚಿನ ಹೆಚ್‌ಡಿ ಪ್ಲಸ್ LTPO AMOLED ಡಿಸ್‌ಪ್ಲೇ ಹೊಂದಿದೆ. ಇದು 3216 x 1440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರುವ ನಿರೀಕ್ಷೆಯಿದೆ. ಈ ಡಿಸ್‌ಪ್ಲೇ 120Hz ನ ರಿಫ್ರೆಶ್ ರೇಟ್ ಅನ್ನು ಹೊಂದಿದೆ ಎಂದು ಹೇಳಲಾಗಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್ ಯಾವುದು?
ಒನ್‌ಪ್ಲಸ್ 11 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 13, OxygenOS 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 256GB ಇಂಟರ್ ಸ್ಟೋರೇಜ್ ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಕ್ಯಾಮೆರಾ ಸೆಟ್‌ಅಪ್ ನಿರೀಕ್ಷೆ ಏನು?
ಒನ್‌ಪ್ಲಸ್ 11 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಬಹುದು ಎಂಬ ಅಂದಾಜಿಸಲಾಗಿದೆ.

ಬ್ಯಾಟರಿ ಬ್ಯಾಕ್ ಅಪ್ ಏನಿರಬಹುದು?
ಒನ್‌ಪ್ಲಸ್ 11 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 100W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂಬ ಸುದ್ದಿಯಿದೆ. ಅಲ್ಲದೆ ಇದು ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಆಯ್ಕೆಯೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂಥ,್ ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿರುವ ನಿರೀಕ್ಷೆಯಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ ಬೆಲೆಯ ಬಗ್ಗೆ ಒನ್‌ಪ್ಲಸ್ ಕಂಪೆನಿ ಇಲ್ಲಿಯವರೆಗೂ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಐವತ್ತು ಸಾವಿರ ರೂ. ಒಳಗೆ ಇರುವ ಸಾಧ್ಯತೆಯಿದೆ.

ಇತರೆ
ಒನ್‌ಪ್ಲಸ್ 11 ಸ್ಮಾರ್ಟ್‌ಫೋನ್ ಭಾರತದಲ್ಲಿ ಡಿಸೆಂಬರ್ 17ಕ್ಕೆ ಬಿಡುಗಡೆಯಾಗುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲ. ಏಕೆಂದರೆ ಇಲ್ಲಿಯವರೆಗೂ ಯಾವುದೇ ಲಾಂಚ್ ಟೀಸರ್ ಕೂಡ ಬಂದಿಲ್ಲ. ಆದರೂ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡ ಕೆಲ ದಿನಗಳ ಅಂತರದಲ್ಲಿ ಭಾರತಕ್ಕೆ ಬರೋದು ಪಕ್ಕಾ ಆಗಿದೆ.
— Abhishek Yadav (@yabhishekhd) December 14, 2022
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470