ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ! ಪ್ರೊಸೆಸರ್‌ ಯಾವುದು?

|

ಒನ್‌ಪ್ಲಸ್‌ ಕಂಪೆನಿ ತನ್ನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ಒನ್‌ಪ್ಲಸ್‌ ಇದೀಗ ಒನ್‌ಪ್ಲಸ್‌ 11 ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ 2023ರ ಪ್ರಾರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಮೊದಲಿಗೆ ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ಪ್ರೊ ಲೆವೆಲ್‌ ಫೀಚರ್ಸ್‌ಗಳನ್ನು ಹೊಂದಿರಲಿದೆ ಎಂದು ವರದಿಯಾಗಿದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಕಂಪೆನಿ ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ತಯಾರಿಕೆಯಲ್ಲಿ ಕಾರ್ಯನಿರತವಾಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen2 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಆದರಿಂದ ಈ ಫೋನ್‌ನ ಫೀಚರ್ಸ್‌ಗಳಲ್ಲಿ ಸಾಕಷ್ಟು ಬದಲಾವಣೆಯನ್ನು ಕಾಣಬಹುದು ಎನ್ನಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಬಹಿರಂಗವಾಗಿದ್ದು, ಇದರ ವಿನ್ಯಾಸ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿರಲಿದೆ?

ಡಿಸ್‌ಪ್ಲೇ ರಚನೆ ಹೇಗಿರಲಿದೆ?

ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ 6.7 ಇಂಚಿನ QHD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1440 x 3216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್ ಹೊಂದಿದ್ದು, 526 ppi ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಆಲ್‌ವೇಸ್‌ ಆನ್‌ ಡಿಸ್‌ಪ್ಲೇ ಇದಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್‌ ಬಲವನ್ನು ಪಡೆದಿರಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಇನ್ನು ಬಹಿರಂಗವಾಗಿಲ್ಲ.

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿರಲಿದೆ. ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ 2x ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿರಲಿದೆ ಎಂದಯ ಹೇಳಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಗಳೇನು?

ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿರಲಿದೆ. ಇದು 100W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈಫೈ 6E, ಬ್ಲೂಟೂತ್‌ 5.2, GPS, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಂಡರ್‌ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸೆಲೆರೊಮೀಟರ್, ಗೈರೊ, ಪ್ರಾಕ್ಸಿಮಿಟಿ ಸೆನ್ಸಾರ್‌, ಇ ಕಂಪಾಸ್‌, ಕಲರ್‌ ಸ್ಪೆಕ್ಟ್ರಂ ಅನ್ನು ಒಳಗೊಂಡಿರಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನಿನ ಬೆಲೆ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ 2023ರ ಪ್ರಾರಂಭದಲ್ಲಿ ಬಿಡುಗಡೆಯಾಗುವುದು ಪಕ್ಕಾ ಆಗಿದೆ. ಮೊದಲಿಗೆ ಒನ್‌ಪ್ಲಸ್‌ ಕಂಪೆನಿ ಮುಂಬರುವ ಫೋನ್‌ ಒನ್‌ಪ್ಲಸ್‌ 11 ಪ್ರೊ ಎನ್ನಲಾಗಿತ್ತು. ಆದರೆ ಮೊದಲಿಗೆ ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ಲಾಂಚ್‌ ಆಗಲಿದೆ ಎಂದು ಹೇಳಲಾಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ಕೂಡ ಪ್ರೊ ಮಾದರಿಯ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಬಣ್ಣದ ಆಯ್ಕೆಯಲ್ಲಿ ದೊರೆಯಲಿದೆ ಎಂಬುದರ ಬಗ್ಗೆ ಇನ್ನು ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
OnePlus 11 Pro to launch by early 2023: Features, specs, and more

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X