Home
ಸುದ್ದಿಜಾಲ

ಗ್ರಾಹಕರಿಗೆ ಸಿಹಿಸುದ್ದಿ: ಒನ್‌ಪ್ಲಸ್‌ ಫೋನ್‌ ಖರೀದಿಸುವ ಪ್ಲ್ಯಾನ್‌ ಇದ್ರೆ, ಇಲ್ಲಿ ನೋಡಿ!

ಜನಪ್ರಿಯ ಒನ್‌ಪ್ಲಸ್‌ ಸ್ಮಾರ್ಟ್‌ಫೋನ್‌ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ಒನ್‌ಪ್ಲಸ್‌ 11R ಮೊಬೈಲ್‌ ಈಗಾಗಲೇ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಈ ಮೊಬೈಲ್‌ ಭಾರೀ ಡಿಸ್ಕೌಂಟ್‌ ಪಡೆದಿದ್ದು, ಗ್ರಾಹಕರು ಕುತೂಹಲದಿಂದ ಮೊಬೈಲ್‌ನತ್ತ ಹಿಂದೆ ತಿರುಗಿ ನೀಡುವಂತಾಗಿದೆ.

ಹೌದು, ದೈತ್ಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ನಲ್ಲಿ ಒನ್‌ಪ್ಲಸ್‌ 11R ಮೊಬೈಲ್‌ ಆಕರ್ಷಕ ರಿಯಾಯಿತಿ ಪಡೆದಿದೆ. 8GB RAM + 128GB ವೇರಿಯಂಟ್‌ನ ಫೋನ್‌ ಅನ್ನು ಗ್ರಾಹಕರು 38,849ರೂ. ಗಳಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಲ್ಲಿ ಹೆಚ್ಚುವರಿ ರಿಯಾಯಿತಿ ಸಹ ದೊರೆಯುತ್ತದೆ.

ಗ್ರಾಹಕರಿಗೆ ಸಿಹಿಸುದ್ದಿ: ಒನ್‌ಪ್ಲಸ್‌ ಫೋನ್‌ ಖರೀದಿಸುವ ಪ್ಲ್ಯಾನ್‌ ಇದ್ರೆ, ನೋಡಿ

ಅಂದಹಾಗೆ ಒನ್‌ಪ್ಲಸ್‌ 11R ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ ಜೆನ್‌ 1 5G SoC ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹೊತೆಗೆ ಇದು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ಪಡೆದುಕೊಂಡಿದೆ. ಹಾಗಾದರೆ ಒನ್‌ಪ್ಲಸ್‌ 11R ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ 11R ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಮಾಹಿತಿ :
ಒನ್‌ಪ್ಲಸ್‌ 11R ಮೊಬೈಲ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಪಡೆದುಕೊಂಡಿದೆ. ಈ ಡಿಸ್‌ಪ್ಲೇ 2772x1240 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 40Hz-120Hz ಅಡಾಪ್ಟಿವ್ ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದು 1000Hz ವರೆಗೆ ಟಚ್ ರೆಸ್ಪಾನ್ಸ್, 4450 ppi ಬ್ರೈಟ್‌ನೆಸ್ ಮತ್ತು 1,450 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒದಗಿಸಲಿದೆ.

ಒನ್‌ಪ್ಲಸ್‌ 11R ಪ್ರೊಸೆಸರ್‌ ಕಾರ್ಯವೈಖರಿ :
ಒನ್‌ಪ್ಲಸ್‌ 11R ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದ್ದು, ಇದು ಆಂಡ್ರಾಯ್ಡ್ 13 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 256GB ಹಾಗೂ 16GB RAM ಮತ್ತು 256GB ವೇರಿಯೆಂಟ್‌ ಆಯ್ಕೆಯ ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಒನ್‌ಪ್ಲಸ್‌ 11R ಕ್ಯಾಮೆರಾ ರಚನೆ ಮಾಹಿತಿ ಇಲ್ಲಿದೆ :
ಒನ್‌ಪ್ಲಸ್‌ 11R ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾ 4cm ಮ್ಯಾಕ್ರೋ ಲೆನ್ಸ್‌ ಹೊಂದಿದ್ದು, 120-ಡಿಗ್ರಿ ಅಲ್ಟ್ರಾ-ವೈಡ್ ಲೆನ್ಸ್‌ ಪಡೆದಿದೆ. ಇದರ ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ಒನ್‌ಪ್ಲಸ್‌ 11R ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು :
ಒನ್‌ಪ್ಲಸ್‌ 11R ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 100W SUPERVOOC S ಫ್ಲಾಶ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G, Wi-Fi, ಬ್ಲೂಟೂತ್ 5.3 ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಉತ್ತಮ ಡಿಸ್ಚಾರ್ಜ್ ಮತ್ತು ಸುರಕ್ಷಿತ ರೀಬೂಟ್ ಅನ್ನು ಪಡೆದಿದೆ.

ಒನ್‌ಪ್ಲಸ್‌ 11R ಮೆಮೊರಿ ಆಯ್ಕೆ :
ಒನ್‌ಪ್ಲಸ್‌ 11R ಮೊಬೈಲ್‌ ಭಾರತದಲ್ಲಿ 8GB + 256GB ಮತ್ತು 16GB + 256GB ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಸೋನಿಕ್‌ ಬ್ಲ್ಯಾಕ್‌ ಮತ್ತು ಗಾಲಾಟಿಕ್‌ ಸಿಲ್ವರ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
oneplus 11R 5G available at big discount on flipkart. specifications, camera and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+