Home
ಸುದ್ದಿಜಾಲ

ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಮೇಲೆ ಭರ್ಜರಿ ಡಿಸ್ಕೌಂಟ್‌: ಕೂಡಲೇ ಖರೀದಿಸಿ

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ 11R ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ವಿಭಿನ್ನ ಶೈಲಿಯ ಫೀಚರ್ಸ್‌ಗಳಿಂದ ಗಮನಸೆಳೆದಿರುವ ಈ ಸ್ಮಾರ್ಟ್‌ಫೋನ್‌ ಇದೀಗ ಡಿಸ್ಕೌಂಟ್‌ ಬೆಲೆಯಲ್ಲಿ ಸೇಲ್‌ ಆಗುತ್ತಿದೆ. ಈ ಸ್ಮಾರ್ಟ್‌ಫೋನ್‌ನ 16GB RAM ರೂಪಾಂತರದ ಮೇಲೆ 3000ರೂ ಗಳ ರಿಯಾಯಿತಿ ದೊರೆಯುತ್ತಿದೆ. ಇದಲ್ಲದೆ 8 GB RAM ರೂಪಾಂತರದ ಮೇಲೆ 2000ರೂ. ರಿಯಾಯಿತಿಯನ್ನು ನೀಡುತ್ತಿದೆ.

ಹೌದು, ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನಿನ ಮೇಲೆ ರಿಯಾಯಿತಿ ನೀಡಲಾಗುತ್ತಿದೆ. ಇದರಿಂದ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಕಡಿತವಾಗಿದ್ದು, ಮೊಬೈಲ್‌ ಪ್ರಿಯರ ಹುಬ್ಬೇರುವಂತೆ ಆಗಿದೆ. ಈ ರಿಯಾಯಿತಿಯು ಸೀಮಿತ ಅವಧಿಗೆ ಲಭ್ಯವಾಗಲಿದೆಯಾ ಇಲ್ಲವೇ ಎಂಬುದರ ಬಗ್ಗೆ ಯಾವುದೇ ಮಾಹಿತಿ ದೃಢೀಕರಿಸಲಾಗಿಲ್ಲ. ಹಾಗಾದ್ರೆ ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಡಿಸ್ಕೌಂಟ್‌ ನಂತರದ ಬೆಲೆ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಮೇಲೆ ಭರ್ಜರಿ ಡಿಸ್ಕೌಂಟ್‌: ಕೂಡಲೇ ಖರೀದಿಸಿ

ಒನ್‌ಪ್ಲಸ್‌ 11R ರಿಯಾಯಿತಿ ವಿವರಗಳು
OnePlus 11R ಸ್ಮಾರ್ಟ್‌ಫೋನ್‌ ಮೇಲಿನ ರಿಯಾಯಿತಿಯು ಅಮೆಜಾನ್‌, ಕ್ರೋಮಾ ಮತ್ತು ಒನ್‌ಪ್ಲಸ್‌ ಆನ್‌ಲೈನ್ ಸ್ಟೋರ್‌ನಲ್ಲಿ ಲಭ್ಯವಿದೆ. ರಿಯಾಯಿತಿಯ ನಂತರ, OnePlus 11R ಸ್ಮಾರ್ಟ್‌ಫೋನ್‌ನ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯು 37,999ರೂ ಬೆಲೆಗೆ ಲಭ್ಯವಿದೆ. ಇದರ 16GB RAM ಮತ್ತು 256GB ಸ್ಟೋರೇಜ್‌ ಆಯ್ಕೆಯು 41,999ರೂ ಬೆಲೆಗೆ ಲಭ್ಯವಿದೆ. ಇದು ಗ್ಯಾಲಕ್ಟಿಕ್ ಸಿಲ್ವರ್ ಮತ್ತು ಸೋನಿಕ್ ಕಪ್ಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

ಇದಲ್ಲದೆ ICICI ಬ್ಯಾಂಕ್ ಮತ್ತು OneCard ನೊಂದಿಗೆ 1000 ರೂಪಾಯಿಗಳ ಹೆಚ್ಚುವರಿ ಕಾರ್ಡ್ ರಿಯಾಯಿತಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ. ಇದರಿಂದ ಸ್ಮಾರ್ಟ್‌ಫೋನ್‌ನ ಬೆಲೆಯು ಕ್ರಮವಾಗಿ 36,999ರೂ ಮತ್ತು 37,999ರೂ. ಇರಲಿದೆ.

OnePlus 11R ಫೀಚರ್ಸ್‌ ಹೇಗಿದೆ?
OnePlus 11R ಸ್ಮಾರ್ಟ್‌ಫೋನ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 2772 X 1240 ಪಿಕ್ಸೆಲ್‌ ರೆಸಲ್ಯೂಶನ್ ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹಾಗೂ 360 Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಒಳಗೊಂಡಿದೆ. ಇದು HDR10+ ಅನ್ನು ಬೆಂಬಲಿಸಲಿದ್ದು, ಐ ಕಂಫರ್ಟರ್, ಇಮೇಜ್ ಶಾರ್ಪನರ್ ಸೇರಿದಂತೆ ಹಲವು ಆಕರ್ಷಕ ಫೀಚರ್ಸ್‌ಗಳನ್ನು ಹೊಂದಿದೆ.

OnePlus 11R ಪ್ರೊಸೆಸರ್‌ ಯಾವುದು?
OnePlus 11R ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 ಪ್ಲಸ್ ಜನ್ 1 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಪರೇಟಿಂಗ್ ಸಿಸ್ಟಮ್‌ನಲ್ಲಿ ರನ್‌ ಆಗಲಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 16GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

OnePlus 11R ಕ್ಯಾಮೆರಾ ರಚನೆ
ಒನ್‌ಪ್ಲಸ್ 11R 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೋನಿ IMX890 ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಹಾಗೂ ಮೂರನೇ ಕ್ಯಾಮೆರಾ 8 ಮೆಗಾ ವೈಡ್ ಆಂಗಲ್ ಲೆನ್ಸ್ ಆಯ್ಕೆಯನ್ನು ಪಡೆದುಕೊಂಡಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

OnePlus 11R ಬ್ಯಾಟರಿ ಮತ್ತು ಇತರೆ ಸೌಲಭ್ಯ
OnePlus 11R ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W ಸೂಪರ್‌ವೂಕ್ + ಚಾರ್ಜರ್ ಅನ್ನು ಬೆಂಬಲಿಸಲಿದೆ. ಇದರಿಂದ ಕೇವಲ 25 ನಿಮಿಷಗಳಲ್ಲಿ ಫೋನ್‌ ಅನ್ನು ಬ್ಯಾಟರಿಯನ್ನು ಭರ್ತಿ ಮಾಡಬಹುದಾಗಿದೆ.

Best Mobiles in India

English summary
OnePlus 11R 5G smartphone gets massive discount in amazon; Offer Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+