Home
ಸುದ್ದಿಜಾಲ

ಭಾರೀ ಡಿಸ್ಕೌಂಟ್‌ನಲ್ಲಿ ಒನ್‌ಪ್ಲಸ್‌ 11R ಖರೀದಿಸಲು ಇದುವೇ ಸಕಾಲ!

ಒನ್‌ಪ್ಲಸ್‌ ಮೊಬೈಲ್‌ ಸಂಸ್ಥೆಯು ಭಾರತದಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಈಗಾಗಲೇ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಈ ಸ್ಮಾರ್ಟ್‌ಫೋನ್‌ ಸಖತ್‌ ಡಿಸ್ಕೌಂಟ್‌ ಪಡೆದಿದ್ದು, ಗ್ರಾಹಕರು ಕುತೂಹಲದಿಂದ ಸ್ಮಾರ್ಟ್‌ಫೋನಿನತ್ತ ತಿರುಗಿ ನೀಡುವಂತಾಗಿದೆ.

ಹೌದು, ಜನಪ್ರಿಯ ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿ ಪಡೆದಿದೆ. ಹೆಚ್‌ಎಸ್‌ಬಿಸಿ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ 2,000ರೂ. ಡಿಸ್ಕೌಂಟ್‌ ಲಭ್ಯವಾಗಲಿದೆ. ಅಂದಹಾಗೆ ಈ ಫೋನ್ 8GB RAM + 128GB ಮತ್ತು 16GB RAM + 256GB ಸ್ಟೋರೇಜ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ಭಾರೀ ಡಿಸ್ಕೌಂಟ್‌ನಲ್ಲಿ ಒನ್‌ಪ್ಲಸ್‌ 11R ಖರೀದಿಸಲು ಇದುವೇ ಸಕಾಲ!

ಇನ್ನು ಈ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್‌ ಹೊಂದಿದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ಒಳಗೊಂಡಿದೆ. ಹಾಗಾದರೆ ಒನ್‌ಪ್ಲಸ್‌ 11R ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ 11R : ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 2772x1240 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 40Hz-120Hz ಅಡಾಪ್ಟಿವ್ ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು 1000Hz ವರೆಗೆ ಟಚ್ ರೆಸ್ಪಾನ್ಸ್, 4450 ppi ಬ್ರೈಟ್‌ನೆಸ್ ಮತ್ತು 1,450 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ.

ಭಾರೀ ಡಿಸ್ಕೌಂಟ್‌ನಲ್ಲಿ ಒನ್‌ಪ್ಲಸ್‌ 11R ಖರೀದಿಸಲು ಇದುವೇ ಸಕಾಲ!

ಒನ್‌ಪ್ಲಸ್‌ 11R : ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+256GB ಹಾಗೂ 16GB RAM ಮತ್ತು 256GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಒನ್‌ಪ್ಲಸ್‌ 11R : ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 4cm ಮ್ಯಾಕ್ರೋ ಲೆನ್ಸ್‌ ಹೊಂದಿದ್ದು, 120-ಡಿಗ್ರಿ ಅಲ್ಟ್ರಾ-ವೈಡ್ ಲೆನ್ಸ್‌ ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ.

ಭಾರೀ ಡಿಸ್ಕೌಂಟ್‌ನಲ್ಲಿ ಒನ್‌ಪ್ಲಸ್‌ 11R ಖರೀದಿಸಲು ಇದುವೇ ಸಕಾಲ!

ಒನ್‌ಪ್ಲಸ್‌ 11R : ಬ್ಯಾಟರಿ ಮತ್ತು ಇತರೆ

ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W SUPERVOOC S ಫ್ಲಾಶ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, Wi-Fi, ಬ್ಲೂಟೂತ್ 5.3 ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಉತ್ತಮ ಡಿಸ್ಚಾರ್ಜ್ ಮತ್ತು ಸುರಕ್ಷಿತ ರೀಬೂಟ್ ಅನ್ನು ಖಾತ್ರಿಗೊಳಿಸುತ್ತದೆ.


ಒನ್‌ಪ್ಲಸ್‌ 11R : ಮೆಮೊರಿ ಮತ್ತು ಕಲರ್‌ ಆಯ್ಕೆ

ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB + 256GB ಮತ್ತು 16GB+256GB ರೂಪಾಂತರದ ಆಯ್ಕೆಗಳನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಸೋನಿಕ್‌ ಬ್ಲ್ಯಾಕ್‌ ಮತ್ತು ಗಾಲಾಟಿಕ್‌ ಸಿಲ್ವರ್‌ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
OnePlus 11R Smartphone Available with 2,000 discount on bank offer on Amazon. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+