ಭಾರತದಲ್ಲಿ ಸಂಚಲನ ಸೃಷ್ಟಿಸಿದ ಒನ್‌ಪ್ಲ್‌ಸ್ 11R! ಫೀಚರ್ಸ್ ಏನಿದೆ? ಬೆಲೆ ಎಷ್ಟು?
ಹೊಸ ವರ್ಷದ ಆರಂಭದಲ್ಲಿ ಫುಲ್ ಸೈಲೆಂಟ್ ಆಗಿದ್ದ ಒನ್‌ಪ್ಲಸ್ ಕಂಪೆನಿ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಜನವರಿಯಲ್ಲಿ ಯಾವುದೇ ಮೊಬೈಲ್ ಲಾಂಚ್ ಮಾಡದ ಒನ್‌ಪ್ಲಸ್ ಇದೀಗ ತನ್ನ ಒನ್‌ಪ್ಲಸ್ 11 ಸರಣಿ ಮೂಲಕ ಸಿಕ್ಕಾಪಟ್ಟೆ ಹಲ್‌ಚಲ್ ಎಬ್ಬಿಸಿದೆ. ಈ ಮೂಲಕ ಮೊಬೈಲ್ ಮಾರುಕಟ್ಟೆಯಲ್ಲಿ ಒನ್‌ಪ್ಲಸ್ ಕಂಪೆನಿಯ ದರ್ಭಾರ್ ಜೋರಾಗಿದೆ. ಇನ್ನು ಒನ್‌ಪ್ಲಸ್ 11 ಸರಣಿಯಲ್ಲಿ ಒನ್‌ಪ್ಲ್‌ಸ್ 11R ವಿಶೇಷ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್ ಹೊಂದಿದೆ.

ಹೌದು, ಒನ್‌ಪ್ಲಸ್ ಕಂಪೆನಿ ಭಾರತದಲ್ಲಿ ಹೊಸದಾಗಿ ಒನ್‌ಪ್ಲಸ್ 11R ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.74 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಒನ್‌ಪ್ಲ್‌ಸ್ 11R ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಒನ್‌ಪ್ಲಸ್ 11R ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್ 11R ಸ್ಮಾರ್ಟ್‌ಫೋನ್ 6.74 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 2772x1240 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 40Hz-120Hz ಅಡಾಪ್ಟಿವ್ ಡೈನಾಮಿಕ್ ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು 1000Hz ವರೆಗೆ ಟಚ್ ರೆಸ್ಪಾನ್ಸ್, 4450 ppi ಬ್ರೈಟ್‌ನೆಸ್ ಮತ್ತು 1,450 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.

ಒನ್‌ಪ್ಲಸ್ 11R ಪ್ರೊಸೆಸರ್ ಯಾವುದು?
ಒನ್‌ಪ್ಲಸ್ 11R ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+256GB ಹಾಗೂ 18GB RAM ಮತ್ತು 256GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಒನ್‌ಪ್ಲಸ್ 11R ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒನ್‌ಪ್ಲಸ್ 11R ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 4cm ಮ್ಯಾಕ್ರೋ ಲೆನ್ಸ್ ಹೊಂದಿದ್ದು, 120-ಡಿಗ್ರಿ ಅಲ್ಟ್ರಾ-ವೈಡ್ ಲೆನ್ಸ್ ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ.

ಒನ್‌ಪ್ಲಸ್ 11R ಬ್ಯಾಟರಿ ಮತ್ತು ಇತರೆ
ಒನ್‌ಪ್ಲಸ್ 11R ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W SUPERVOOC S ಫ್ಲಾಶ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, Wi-Fi, ಬ್ಲೂಟೂತ್ 5.3 ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಉತ್ತಮ ಡಿಸ್ಚಾರ್ಜ್ ಮತ್ತು ಸುರಕ್ಷಿತ ರೀಬೂಟ್ ಅನ್ನು ಖಾತ್ರಿಗೊಳಿಸುತ್ತದೆ.
ಒನ್‌ಪ್ಲಸ್ 11R ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್ 11R ಸ್ಮಾರ್ಟ್‌ಫೋನ್ ಭಾರತದಲ್ಲಿ 8GB+256GB ರೂಪಾಂತರದ ಆಯ್ಕೆಗೆ 39,999ರೂ. ಬೆಲೆ ಹೊಂದಿದೆ. ಇದರ 16GB+256GB ರೂಪಾಂತರದ ಆಯ್ಕೆಯು 44,999ರೂ. ಬೆಲೆ ಪಡೆದಿದೆ. ಈ ಸ್ಮಾರ್ಟ್‌ಫೋನ್ ಸೋನಿಕ್ ಬ್ಲ್ಯಾಕ್ ಮತ್ತು ಗಾಲಾಟಿಕ್ ಸಿಲ್ವರ್ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಇದೇ ಫೆಬ್ರವರಿ 28 ರಂದು ಅಮೆಜಾನ್, ಒನ್‌ಪ್ಲಸ್ ವೆಬ್‌ಸೈಟ್ ಮೂಲಕ ಸೇಲ್‌ಗೆ ಬರಲಿದೆ.


Click it and Unblock the Notifications








