Home
ಸುದ್ದಿಜಾಲ

ಇದೇ ಜೂನ್‌ 6 ರಂದು ಒನ್‌ಪ್ಲಸ್‌ನ ಈ ಹೊಸ ಫೋನ್‌ ಖರೀದಿಗೆ ಲಭ್ಯ; ಆಫರ್‌ ಎಷ್ಟು?

ಲೀಡಿಂಗ್ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾದ ಒನ್‌ಪ್ಲಸ್‌ (OnePlus) ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ಒನ್‌ಪ್ಲಸ್‌ 12 ಗ್ಲಾಸಿಯಲ್‌ ವೈಟ್‌ ಕಲರ್‌ ವೇರಿಯಂಟ್‌ (OnePlus 12 Glacial White) ಸ್ಮಾರ್ಟ್‌ಫೋನ್‌ ಗ್ರಾಹಕರ ಗಮನ ಸೆಳೆದಿದೆ. ಇನ್ನು ಪ್ರಥಮ ಸೇಲ್‌ ಇದೇ ಜೂನ್ 6 ರಂದು ಮಧ್ಯಾಹ್ನ 12 ಗಂಟೆಗೆ ಅಮೆಜಾನ್‌ ಇ ಕಾಮರ್ಸ್‌ ತಾಣದ ಮೂಲಕ ಪ್ರಾರಂಭ ಮಾಡಲಿದೆ. ನೂತನ ಕಲರ್‌ನಲ್ಲಿ ಎಂಟ್ರಿ ಕೊಟ್ಟಿರುವ ಫೋನಿನ ಬೆಲೆಯು 64,999ರೂ. ಆಗಿದ್ದು, ಗ್ರಾಹಕರು ಒನ್‌ಪ್ಲಸ್‌ ವೆಬ್‌ಸೈಟ್‌ ಹಾಗೂ ಅಮೆಜಾನ್‌ ತಾಣದ ಮೂಲಕ ಖರೀದಿಸಬಹುದು.

ಹೌದು, ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 12 Glacial White ಕಲರ್ ವೇರಿಯಂಟ್‌ ಜೂನ್‌ 6 ರಂದು ಖರೀದಿಗೆ ಲಭ್ಯವಾಗಲಿದೆ. ಅಮೆಜಾನ್‌ ತಾಣದಲ್ಲಿ ಬ್ಯಾಂಕ್‌ ಆಫರ್‌ ಸೇರಿದಂತೆ ಇತರೆ ಕೊಡುಗೆಗಳು ಲಭ್ಯವಾಗಲಿವೆ. ಅಂದಹಾಗೆ ಈ ಫೋನ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿದ್ದು, ಸ್ನ್ಯಾಪ್‌ಡ್ರಾಗನ್ 8 ಜೆನ್‌ 3 SoC ಪ್ರೊಸೆಸರ್‌ ವೇಗ ಪಡೆದಿದೆ.

ಇದೇ ಜೂನ್‌ 6 ರಂದು ಒನ್‌ಪ್ಲಸ್‌ನ ಈ ಹೊಸ ಫೋನ್‌ ಖರೀದಿಗೆ ಲಭ್ಯ; ಆಫರ್‌ ಎಷ್ಟು?

ಅಂದಹಾಗೆ ಈ ನೂತನ Glacial White ಕಲರ್ ಫೋನ್‌ 5400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಜೊತೆಗೆ 100W SUPERVOOC ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ. ಹಾಗೆಯೇ ಇದು 4 ನೇ ಜನರಲ್ ಹ್ಯಾಸೆಲ್ಬ್ಲಾಡ್ ಕ್ಯಾಮೆರಾ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ಒನ್‌ಪ್ಲಸ್‌ 12 Glacial White ಕಲರ್ ವೇರಿಯಂಟ್‌ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಒನ್‌ಪ್ಲಸ್‌ 12 Glacial White ವೇರಿಯಂಟ್‌ ಫೀಚರ್ಸ್‌

ಒನ್‌ಪ್ಲಸ್‌ 12 ಈ ನೂತನ ಸ್ಮಾರ್ಟ್‌ಫೋನ್‌ 6.82 ಇಂಚಿನ QHD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1440 x 3168 ಪಿಕ್ಸೆಲ್‌ ಸ್ಕ್ರೀನ್‌ ಸೂಪರ್ ಕ್ರಿಸ್ಪ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು LTPO ProXDR 10-ಬಿಟ್ ಅನ್ನು ಒದಗಿಸಲಿದ್ದು, 120Hz ರಿಫ್ರೆಶ್ ರೇಟ್‌ ಬೆಂಬಲವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 8 ಜೆನ್‌ 3 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 12GB RAM + 256 GB ಸ್ಟೋರೇಜ್‌ ವೇರಿಯಂಟ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಅನ್ನು ಪಡೆದಿದೆ.

ಒನ್‌ಪ್ಲಸ್‌ನ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸಲ್‌ನ 4 ನೇ ಜನರಲ್ ಹ್ಯಾಸೆಲ್ಬ್ಲಾಡ್ ಕ್ಯಾಮೆರಾ ಹೊಂದಿದೆ. ದ್ವಿತೀಯ ಕ್ಯಾಮೆರಾ 64 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ, ತೃತೀಯ ಕ್ಯಾಮೆರಾ 48 ಮೆಗಾಪಿಕ್ಸಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್‌ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

OnePlus 12 ಸ್ಮಾರ್ಟ್‌ಫೋನ್‌ 5400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದು 100W ಸೂಪರ್‌ವೂಕ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡಲಿದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ಕೇವಲ 25 ನಿಮಿಷಗಳಲ್ಲಿ 0 ರಿಂದ 100% ವರೆಗೆ ತ್ವತಿತವಾಗಿ ಚಾರ್ಜ್ ಮಾಡಬಹುದಾಗಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ 50W AIRVOOC ರಿವರ್ಸ್ ವಾಯರ್‌ಲೆಸ್ ಚಾರ್ಜಿಂಗ್ ವ್ಯವಸ್ಥೆ ಸಹ ಇದೆ.

Best Mobiles in India

English summary
OnePlus 12 Glacial White first sale starts from June 6 in India. Check Price, offer and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+