OnePlus: ಭಾರತದಲ್ಲಿ ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್ ಬೆಲೆ ಎಷ್ಟಿರಲಿದೆ ಗೊತ್ತಾ? ಫೀಚರ್ಸ್ ನಿರೀಕ್ಷೆ ಏನು?
ಒನ್‌ಪ್ಲಸ್ ಫೋನ್‌ಗಳಿಗೆ (OnePlus phone) ಭಾರತ ಎಂದಿಗೂ ಕಾತುರದಿಂದ ಕಾಯುತ್ತಿರುತ್ತದೆ. ಅದರಂತೆ ಇನ್ನೇನು ಕೆಲವೇ ದಿನಗಳಲ್ಲಿ ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್ (OnePlus 12 smartphone) ಅನಾವರಣ ಆಗಲಿದ್ದು, ಇದಕ್ಕೂ ಮೊದಲೇ ಈ ಫೋನ್ ಇಲ್ಲಿ ದೊಡ್ಡ ಸಂಚಲನವನ್ನೇ ಉಂಟು ಮಾಡಿದೆ. ಈ ಬೆಳವಣಿಗೆ ನಡುವೆ ಈ ಫೋನ್ ಬೆಲೆ ಬಗ್ಗೆ ಮಾಹಿತಿ ತಿಳಿದುಬಂದಿದೆ.
ಹೌದು, ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್ ಮೊದಲೇ ತಿಳಿಸಿದಂತೆ ಭಾರತದಲ್ಲಿ ಬಹಳ ಕುತೂಹಲ ಉಂಟು ಮಾಡಿದೆ. ಈ ಕಾರಣಕ್ಕೆ ಸಾಕಷ್ಟು ಜನರು ಈ ಫೋನ್ ಖರೀದಿ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಈ ಫೋನ್‌ನ ಪ್ರಮುಖ ಫೀಚರ್ಸ್ ಲೀಕ್ ಆಗಿದ್ದು, ಗ್ರಾಹಕರು ಈ ಫೀಚರ್ಸ್‌ಗೆ ಮಾರುಹೋಗಿದ್ದಾರೆ. ಹಾಗಿದ್ರೆ, ಈ ಫೋನ್‌ನ ಬೆಲೆ ಭಾರತದಲ್ಲಿ ಎಷ್ಟಿರಬಹುದು?, ಯಾವ ಫೋನ್‌ನೊಂದಿಗೆ ಇದು ಸೆಣಸಲಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್: ಕೆಲವೇ ವಾರಗಳಲ್ಲಿ ಒನ್‌ಪ್ಲಸ್ ಭಾರತದಲ್ಲಿ ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಲಿದೆ. ಈ ಸರಣಿಯಲ್ಲಿ ಒನ್‌ಪ್ಲಸ್ 12 ಮತ್ತು ಒನ್‌ಪ್ಲಸ್ 12R ಸ್ಮಾರ್ಟ್‌ಫೋನ್‌ಗಳನ್ನು (OnePlus 12, OnePlus 12R smartphone) ಅನಾವರಣ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಈಗಾಗಲೇ ಈ ಫೋನ್ ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಆಗಿದ್ದು, ಅಲ್ಲಿನ ಬೆಳವಣಿಗೆ ಪರಿಗಣಿಸಿ, ಭಾರತದ ವೇರಿಯಂಟ್ ಬಗ್ಗೆ ಏನನ್ನೆಲ್ಲಾ ನಿರೀಕ್ಷೆ ಮಾಡಬಹುದು ಎಂಬುದರ ಕುರಿತು ಇಲ್ಲಿದೆ ನೋಡಿ ಮಾಹಿತಿ.
ಈಗಾಗಲೇ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಐಕ್ಯೂ 12, ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಸರಣಿಗಳು ಮತ್ತು ವಿವೋ X100 ಸರಣಿಗಳು ಸೇರಿದಂತೆ ಕಳೆದ ಎರಡು ತಿಂಗಳುಗಳಿಂದ ಸಾಕಷ್ಟು ಸ್ಮಾರ್ಟ್ ಫ್ಲ್ಯಾಗ್‌ಶಿಪ್‌ಗಳ ಸ್ಮಾರ್ಟ್‌ಫೋನ್‌ಗಳು ಭರ್ಜರಿ ಸೌಂಡ್ ಮಾಡುತ್ತಿವೆ. ಈ ಮೂಲಕ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವ ಗ್ರಾಹಕರಿಗೆ ಬೆಲೆ ಹಾಗೂ ಇನ್ನಿತರೆ ವಿಚಾರದಲ್ಲಿ ಬಹಳ ನಿರ್ಣಾಯಕ ನಿರ್ಧಾರವಾಗಿದೆ.

ಇನ್ನು ಒನ್‌ಪ್ಲಸ್ 12 ಭಾರತದಲ್ಲಿ ಎಷ್ಟು ಬೆಲೆ ಹೊಂದಿರಬಹುದು ಎಂಬುದರ ಕುರಿತು ಕೆಲವು ಮಾಹಿತಿಗಳು ಲೀಕ್ ಆಗಿವೆ. ಅದರಂತೆ ಒನ್‌ಪ್ಲಸ್ 12R ನ ಆರಂಭಿಕ ಬೆಲೆಯು ಸುಮಾರು 35,000 ರೂಪಾಯಿಗಳಾಗಿರಬಹುದು ಎಂದು ತಿಳಿದುಬಂದಿದೆ. ಜೊತೆಗೆ ಟಾಪ್ ಮಾಡೆಲ್‌ಗೆ 42,000 ರೂಪಾಯಿ ಬೆಲೆ ಇರಲಿದೆ ಎಂದು ಹೇಳಲಾಗಿದೆ. ಇನ್ನೊಂದು ಕಡೆ ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್ 65,000 ರೂ.ಗಳಿಂದ ಪ್ರಾರಂಭವಾಗಲಿದ್ದು, ಅತ್ಯಧಿಕ ವೇರಿಯಂಟ್ 75,000 ರೂ.ಗಳ ಬೆಲೆ ಹೊಂದಿರಬಹುದು ಎಂದು ತಿಳಿದುಬಂದಿದೆ. ಈ ನಡುವೆ ಒನ್‌ಪ್ಲಸ್ 11 ರ ಆರಂಭಿಕ ಬೆಲೆಯ 56,999 ರೂ.ಗಳಾಗಿದ್ದನ್ನು ಈ ವೇಳೆ ನೆನಪಿಸಿಕೊಳ್ಳಬಹುದು.
ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜನ್ 3 ಪ್ರೊಸೆಸರ್‌ನಲ್ಲಿ ಕಾಣಿಸಿಕೊಳ್ಳಲಿದ್ದು, LTPO ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 120Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿರಲಿದೆ ಎಂದು ತಿಳಿದುಬಂದಿದೆ. ಅಲ್ಲದೆ ಈ ಫೋನ್ 6.82 ಇಂಚಿನ QHD+ ಡಿಸ್‌ಪ್ಲೇ ಹೊಂದಿರಲಿದ್ದು, 4,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ.

ಅಲ್ಲದೆ ಈ ಫೋನ್ 50W ವೈರ್‌ಲೆಸ್ ಚಾರ್ಜಿಂಗ್ ಮತ್ತು 100W ವೈರ್ಡ್ ಚಾರ್ಜಿಂಗ್ ಬೆಂಬಲದೊಂದಿಗೆ 5,400 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ. ಅಲ್ಲದೆ ಸೋನಿ LYT-808 ಮತ್ತು OIS ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 3x ಆಪ್ಟಿಕಲ್ ಜೂಮ್‌ನೊಂದಿಗೆ 64 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಕ್ಯಾಮೆರಾ ಮತ್ತು 48 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾವನ್ನು ಹೊಂದಿರಲಿದೆ. ಸೆಲ್ಫಿಗಾಗಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆಯನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.


Click it and Unblock the Notifications








