Home
ಸುದ್ದಿಜಾಲ

ಇಂದು ಎಂಟ್ರಿ ಕೊಡಲಿದೆ ಒನ್‌ಪ್ಲಸ್‌ 12 ಸರಣಿ!..ಅಚ್ಚರಿಯ ಫೀಚರ್ಸ್‌!

ಜನಪ್ರಿಯ ಒನ್‌ಪ್ಲಸ್‌ ಕಂಪೆನಿಯ ಈಗಾಗಲೇ ಕೆಲವು ದೈತ್ಯ ಮಾದರಿಯ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸಂಸ್ಥೆಯು ಅದರ ಮುಂದುವರಿದ ಭಾಗವಾಗಿ ಇದೀಗ ಒನ್‌ಪ್ಲಸ್‌ 12 ಸರಣಿ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಬಹುನಿರೀಕ್ಷಿತ ಸ್ಮಾರ್ಟ್‌ಫೋನ್‌ ಸರಣಿಯು ಇಂದು (ಜ. 23 ರಂದು) ಅಧಿಕೃತವಾಗಿ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ.

ಹೌದು, ಒನ್‌ಪ್ಲಸ್‌ ಸಂಸ್ಥೆಯು ತನ್ನ ನೂತನ ಒನ್‌ಪ್ಲಸ್‌ 12 ಸ್ಮಾರ್ಟ್‌ಫೋನ್‌ ಸರಣಿಯನ್ನು ಇಂದು ದೇಶಿಯ ಮಾರಕಟ್ಟೆಗೆ ಲಾಂಚ್ ಮಾಡಲಿದೆ. ಇನ್ನು ಈ ಸರಣಿಯು ಒನ್‌ಪ್ಲಸ್‌ 12 ಹಾಗೂ ಒನ್‌ಪ್ಲಸ್‌ 12R ಮಾಡೆಲ್‌ಗಳನ್ನು ಒಳಗೊಂಡಿರುವುದು ಬಹುತೇಕ ಖಚಿತ ಆಗಿದೆ. ಹಾಗೆಯೇ ಒನ್‌ಪ್ಲಸ್‌ ಬಡ್ಸ್‌ 3 ಡಿವೈಸ್‌ ಕೂಡಾ ಬಿಡುಗಡೆ ಆಗುವ ಸಾಧ್ಯತೆಗಳು ಇವೆ. ಹಾಗಾದರೇ ಈ ಫೋನ್‌ಗಳ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇಂದು ಎಂಟ್ರಿ ಕೊಡಲಿದೆ ಒನ್‌ಪ್ಲಸ್‌ 12 ಸರಣಿ!..ಅಚ್ಚರಿಯ ಫೀಚರ್ಸ್‌!

ಒನ್‌ಪ್ಲಸ್‌ 12 - ಫೀಚರ್ಸ್‌

ಒನ್‌ಪ್ಲಸ್‌ 12 ಮೊಬೈಲ್‌ 6.82 ಇಂಚಿನ ಫ್ಲೂಯಿಡ್ AMOLED ಟೆಕ್ನಾಲಜಿ ಒಳಗೊಂಡ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1440 x 3168 ಪಿಕ್ಸೆಲ್‌ ಸ್ಕ್ರೀನ್‌ ಸೂಪರ್ ಕ್ರಿಸ್ಪ್ ರೆಸಲ್ಯೂಶನ್ ಅನ್ನು ನೀಡುತ್ತದೆ. ಇದು 120Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದ್ದು, HDR10+ ಅನ್ನು ಸಹ ಸಪೋರ್ಟ್ ಮಾಡುತ್ತದೆ. ಇದರ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಹೊಂದಿರಲಿದೆ.

ಇಂದು ಎಂಟ್ರಿ ಕೊಡಲಿದೆ ಒನ್‌ಪ್ಲಸ್‌ 12 ಸರಣಿ!..ಅಚ್ಚರಿಯ ಫೀಚರ್ಸ್‌!

ಹಾಗೆಯೇ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 8 ಜೆನ್‌ 3 SoC ಪ್ರೊಸೆಸರ್‌ ಪವರ್‌ ಪವರ್‌ ಅನ್ನು ಪಡೆದಿರಲಿದ್ದು, CPU, 3.2GHz ನಲ್ಲಿ ಪ್ರೈಮ್ ಕೋರ್ ಅನ್ನು ಒಳಗೊಂಡಿದೆ. ಇನ್ನು ಮೊಬೈಲ್‌ ಆಂಡ್ರಾಯ್ಡ್‌ 13 ಆಧಾರಿತ OxygenOS 13 ನಲ್ಲಿ ಕೆಲಸ ನಿರ್ವಹಿಸಲಿದೆ.

ಇದರ ಜೊತೆಗೆ 12GB RAM ಮತ್ತು 256GB, 16GB RAM ಮತ್ತು 256GB, 24GB RAM ಮತ್ತು 512GB ಆಂತರೀಕ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗ ಪಡೆದಿರಲಿದೆ.

ಒನ್‌ಪ್ಲಸ್‌ 12 ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50ಎಂಪಿ ಸೆನ್ಸಾರ್‌, ಎರಡನೇ ಕ್ಯಾಮೆರಾ 48ಎಂಪಿ ಅಲ್ಟ್ರಾವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 64ಎಂಪಿ ಟೆಲಿಫೋಟೋ ಲೆನ್ಸ್‌ 2x ಆಪ್ಟಿಕಲ್ ಜೂಮ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಒನ್‌ಪ್ಲಸ್‌ 12 ಮೊಬೈಲ್‌ 5400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 100W ಸೂಪರ್‌ವೂಕ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇದು ಕೇವಲ 25 ನಿಮಿಷಗಳಲ್ಲಿ 0 ರಿಂದ 100% ವರೆಗೆ ಚಾರ್ಜ್‌ ಒದಗಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಇನ್ನು ಕನೆಕ್ಟಿವಿಟಿ ಸೌಲಭ್ಯ 5G ಬೆಂಬಲ, Wi-Fi 6E, ಬ್ಲೂಟೂತ್ 5.3, NFC, USB-C 3.2 ಜೆನ್‌ 2, GPS, GLONASS ಅನ್ನು ಬೆಂಬಲಿಸಲಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್‌, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಇ-ಕಾಪಾಸ್‌ ಪಡೆದಿರಲಿದೆ.

ಒನ್‌ಪ್ಲಸ್‌ 12R ಮೊಬೈಲ್‌ - ಫೀಚರ್ಸ್‌

ಈ ಮೊಬೈಲ್‌ ಒನ್‌ಪ್ಲಸ್‌ 12R ಫೋನ್‌ 6.78 ಇಂಚಿನ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 120Hz ರಿಫ್ರೆಶ್ ರೇಟ್‌ ಸೌಲಭ್ಯ. ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 ಪ್ರೊಸೆಸರ್‌ ಸೌಲಭ್ಯ ಒಳಗೊಂಡಿರಲಿದೆ. ಹಾಗೆಯೇ ಈ ಫೋನ್‌ 5000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 100W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಸಹ ಒಳಗೊಂಡಿದೆ.

Best Mobiles in India

English summary
OnePlus 12 series india launch today. camera, battery and other specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+