Home
ಸುದ್ದಿಜಾಲ

ಒನ್‌ಪ್ಲಸ್‌ 12 ಡಿಸ್‌ಪ್ಲೇ ಟೆಕ್ನಾಲಜಿ ಬಹಿರಂಗ!..ಇದರ ವಿನ್ಯಾಸ ಕೇಳಿದ್ರೆ ವಾವ್ಹ್‌ ಅಂತೀರಾ!

ಒನ್‌ಪ್ಲಸ್‌ ಕಂಪೆನಿ ಪ್ರೀಮಿಯಂ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿದೆ. ಇತ್ತೀಚಿಗೆ ತನ್ನ ಮೊದಲ ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ ಒನ್‌ಪ್ಲಸ್‌ ಓಪನ್‌ ಮೂಲಕ ಭಾರತದಲ್ಲಿ ಸಖತ್‌ ಸೌಂಡ್‌ ಮಾಡ್ತಿದೆ. ಇದರ ನಡುವೆ ಒನ್‌ಪ್ಲಸ್‌ ಹೊಸ ಸ್ಮಾರ್ಟ್‌ಫೋನ್‌ ಒನ್‌ಪ್ಲಸ್‌ 12ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಹೌದು, ಒನ್‌ಪ್ಲಸ್‌ 12 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧವಾಗಿದೆ. ಈ ಸ್ಮಾರ್ಟ್‌ಫೋನ್‌ನ ಬಿಡುಗಡೆ ದಿನಾಂಕ ಇನ್ನು ಕೂಡ ಅಧಿಕೃತವಾಗಿಲ್ಲ, ಆದರೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳ ಬಗ್ಗೆ ಸಾಕಷ್ಟು ಕುತೂಹಲ ಗರಿಗೆದರಿದೆ. ಈಗಾಗಲೇ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇಮೇಟ್‌ನಿಂದ A+ ಪ್ರಮಾಣೀಕರಣವನ್ನು ಪಡೆದುಕೊಂಡಿದೆ ಎಂದು ಸುದ್ದಿಯಾಗಿತ್ತು. ಇದೀಗ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ವಿನ್ಯಾಸದ ಮಾಹಿತಿ ಬಹಿರಂಗವಾಗಿದೆ. ಹಾಗಾದ್ರೆ ಈ ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್‌ 12 ಡಿಸ್‌ಪ್ಲೇ ಟೆಕ್ನಾಲಜಿ ಬಹಿರಂಗ!..ವಾವ್ಹ್‌ ಅಂತೀರಾ!

ಒನ್‌ಪ್ಲಸ್ 12 ಡಿಸ್‌ಪ್ಲೇ ವಿನ್ಯಾಸ ಹೇಗಿದೆ?
ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್‌ ಈಗಾಗಲೇ ಡಿಸ್‌ಪ್ಲೇಮೇಟ್‌ ನಿಂದ A+ ಪ್ರಮಾಣೀಕರಣವನ್ನು ಪಡೆದುಕೊಂಡಿದೆ ಎಂದು ವರದಿಯಾಗಿದೆ. ಇದು ಡಿಸ್ಪ್ಲೇಮೇಟ್ A+ ರೇಟಿಂಗ್ ಪಡೆಯುವ ಮೊದಲ 2K ರೆಸಲ್ಯೂಶನ್ ಡಿಸ್‌ಪ್ಲೇ ಇದಾಗಿದೆ ಎನ್ನಲಾಗಿದೆ. ಇದರಿಂದ ಡಿಸ್‌ಪ್ಲೇ ಸ್ಕ್ರೀನ್‌ಗಳು ಬ್ರೈಟ್‌ನೆಸ್‌, ಐ ಪ್ರೊಟೆಕ್ಷನ್‌ ಅನ್ನು ನೀಡಲಿದೆ ಎಂದು ಒನ್‌ಪ್ಲಸ್‌ ಕಂಪೆನಿ ಹೇಳಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7-ಇಂಚಿನ BOE X1 OLED ಡಿಸ್‌ಪ್ಲೇ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಡಿಸ್‌ಪ್ಲೇ ಟೆಕ್ನಾಲಜಿಯಲ್ಲಿ ಏನಿದೆ ವಿಶೇಷತೆ?
ಈ ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇಯಲ್ಲಿ ಓರಿಯೆಂಟಲ್ ಸ್ಕ್ರೀನ್‌ಗಳು ಮಲ್ಟಿ-ಚಾನೆಲ್ ಲೋಡ್ ಕಡಿತ ಟೆಕ್ನಾಲಜಿಯನ್ನು ಹೊಂದಿವೆ. ಇನ್ನು ಓರಿಯೆಂಟಲ್ ಸ್ಕ್ರೀನ್‌ಗಳಿಗಾಗಿ ಸೂರ್ಯನ ಬೆಳಕನ್ನು ಹೈಲೈಟ್ ಅಲ್ಗಾರಿದಮ್ ಅನ್ನು ಅಭಿವೃದ್ಧಿಪಡಿಸಿದೆ. ಇದರಿಂದಾಗಿ ಓರಿಯೆಂಟಲ್ ಸ್ಕ್ರೀನ್‌ 90% ಕಾರ್ಯಕ್ಷಮತೆ ಸುಧಾರಣೆ ಮತ್ತು 13% ವಿದ್ಯುತ್ ಕಡಿತವನ್ನು ಸಾಧಿಸಲು ಅವಕಾಶ ಮಾಡಿಕೊಡುತ್ತದೆ. ಇದು ಬ್ರ್ಯಾಂಡ್‌ಗೆ 2600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ನೀಡುವುದಕ್ಕೆ ಅನುವು ಮಾಡಿಕೊಡಲಿದೆ ಎಂದು ಒನ್‌ಪ್ಲಸ್‌ ಹೇಳಿದೆ.

ಒನ್‌ಪ್ಲಸ್‌ 12 ಡಿಸ್‌ಪ್ಲೇ ಟೆಕ್ನಾಲಜಿ ಬಹಿರಂಗ!..ವಾವ್ಹ್‌ ಅಂತೀರಾ!

ಒನ್‌ಪ್ಲಸ್ 12 ಪ್ರೊಸೆಸರ್‌ ನಿರೀಕ್ಷೆ ಏನು?
ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3 SoC ಪ್ರೊಸೆಸರ್‌ ಹೊಂದಿರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರ ಸ್ಟೋರೇಜ್‌ ವೇರಿಯೆಂಟ್‌ಗಳ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಟಾಪ್‌ ಎಂಡ್‌ ಮಾಡೆಲ್‌ ಆಯ್ಕೆಯಲ್ಲಿ ಲಭ್ಯವಾಗುವ ನಿರೀಕ್ಷೆಯನ್ನು ಇಡಲಾಗಿದೆ.

ಒನ್‌ಪ್ಲಸ್ 12 ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?
ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿರುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೋನಿ IMX966 ಸೆನ್ಸಾರ್‌, 84° ಫೀಲ್ಡ್ ಆಫ್ ವ್ಯೂ ಹೊಂದಿರಲಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೋನಿ IMX581 ಸೆನ್ಸಾರ್‌ ಹಾಗೂ ಮೂರನೇ ಕ್ಯಾಮೆರಾ 64 ಮೆಗಾಪಿಕ್ಸೆಲ್‌ OmniVision OV64B ಸೆನ್ಸಾರ್ ಇರಲಿದೆ. ಇದರ ಸೆಲ್ಫಿ ಕ್ಯಾಮೆರಾ ವಿವರಗಳು ಕೂಡ ಬಹಿರಂಗವಾಗಿಲ್ಲ.

ಒನ್‌ಪ್ಲಸ್‌ 12 ಡಿಸ್‌ಪ್ಲೇ ಟೆಕ್ನಾಲಜಿ ಬಹಿರಂಗ!..ವಾವ್ಹ್‌ ಅಂತೀರಾ!

ಒನ್‌ಪ್ಲಸ್ 12 ಬ್ಯಾಟರಿ ಮತ್ತು ಇತರೆ ಸೌಲಭ್ಯ

ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯಲ್ಲಿ ಬರಲಿದೆ. ಇದು 100W ವೇಗದ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುವ ನಿರೀಕ್ಷೆಯನ್ನು ಇಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ನೊಂದಿಗೆ ಬರಲಿದೆ ಎನ್ನಲಾಗಿದೆ.

ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ, ಆದರೆ ಇದು ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ಸಾಧ್ಯತೆಯಿದೆ.

Best Mobiles in India

English summary
OnePlus 12 Smartphone Confirmed to Feature 2K X1 OLED Display: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+