Home
ಸುದ್ದಿಜಾಲ

ಇಂದು OnePlus 12 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಪ್ರಾರಂಭ: ಏನೆಲ್ಲಾ ಆಫರ್‌ ಲಭ್ಯ

ಕಳೆದ ವಾರ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡುವ ಮೂಲಕ OnePlus 12 ಸ್ಮಾರ್ಟ್‌ಫೋನ್‌ ಸಾಕಷ್ಟು ಸಂಚಲನ ಸೃಷ್ಟಿಸಿದೆ. ತನ್ನ ವಿಶೇಷ ಫೀಚರ್ಸ್‌ ಹಾಗೂ ಕ್ಯಾಮೆರಾ ರಚನೆಯ ಮೂಲಕ ಗಮನಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್‌ನ ಫಸ್ಟ್‌ ಸೇಲ್‌ ಇಂದಿನಿಂದ (ಜನವರಿ 30) ಶುರುವಾಗಲಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ಸೇಲ್‌ ಆರಂಭವಾಗಲಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಖರೀದಿಸಬಹುದಾಗಿದೆ.

ಹೌದು, OnePlus 12 ಸ್ಮಾರ್ಟ್‌ಫೋನ್‌ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್‌ನಲ್ಲಿ ಇಂದು ಫಸ್ಟ್‌ ಸೇಲ್‌ ಶುರು ಮಾಡಲಿದೆ. ಇನ್ನು ಫೋನ್ ಆರಂಭಿಕ 12GB RAM + 256GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆ ಹೊಂದಿದ್ದು, ಇದರ ಬೆಲೆಯು 64,999ರೂ ಆಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಫಸ್ಟ್‌ ಸೇಲ್‌ ಪ್ರಯುಕ್ತ ಏನೆಲ್ಲಾ ಆಫರ್‌ ಲಭ್ಯವಾಗಲಿದೆ. ಇದರ ಫೀಚರ್ಸ್‌ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇಂದು OnePlus 12 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಪ್ರಾರಂಭ:ಏನೆಲ್ಲಾ ಆಫರ್‌ ಲಭ್ಯ

ಫಸ್ಟ್‌ ಸೇಲ್‌ ಆಫರ್‌ ಏನು?
OnePlus 12 ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌ ಇಂದಿನಿಂದ ಶುರುವಾಗಲಿದೆ. ಇದರ ಆರಂಭಿಕ ಆಯ್ಕೆಯು 12GB RAM + 256GB ಸ್ಟೋರೇಜ್‌ ವೇರಿಯೆಂಟ್‌ 64,999ರೂ ಬೆಲೆಯನ್ನು ಹೊಂದಿದೆ. ಇದರ 16GB RAM + 512GB ಸ್ಟೋರೇಜ್‌ ಆಯ್ಕೆಯು 69,999ರೂ ಬೆಲೆಯಲ್ಲಿ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ OnePlus ಇಂಡಿಯಾ ವೆಬ್‌ಸೈಟ್, OnePlus ಸ್ಟೋರ್ ಮೊಬೈಲ್ ಅಪ್ಲಿಕೇಶನ್ ಮತ್ತು ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್‌ ಮೂಲಕ ಖರೀದಿಸಬಹುದಾಗಿದೆ.

ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಅನ್ನು ಆಫ್‌ಲೈನ್‌ನಲ್ಲಿ, ಸ್ಮಾರ್ಟ್‌ಫೋನ್ OnePlus ಎಕ್ಸ್‌ಪೀರಿಯೆನ್ಸ್ ಸ್ಟೋರ್‌ಗಳು, ರಿಲಯನ್ಸ್ ಡಿಜಿಟಲ್, ಕ್ರೋಮಾ ಮತ್ತು ಇತರ ಆಯ್ದ ಚಿಲ್ಲರೆ ಅಂಗಡಿಗಳಲ್ಲಿ ಲಭ್ಯವಿರಲಿದೆ. ಇದನ್ನು OnePlus ICICI ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 2,000ರೂ ವರೆಗೆ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ, ಟ್ರೇಡ್-ಇನ್ ಡೀಲ್‌ಗಳಲ್ಲಿ ಕಂಪನಿಯು ನೀಡುವ 10,000 ರೂಪಾಯಿಗಳವರೆಗೆ ಎಕ್ಸ್‌ಚೇಂಜ್‌ ಬೋನಸ್ ಕೂಡ ದೊರೆಯಲಿದೆ.

ಇಂದು OnePlus 12 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಪ್ರಾರಂಭ:ಏನೆಲ್ಲಾ ಆಫರ್‌ ಲಭ್ಯ

OnePlus 12 ಫೀಚರ್ಸ್‌ ಹೇಗಿದೆ?
ಒನ್‌ಪ್ಲಸ್‌ 12 ಸ್ಮಾರ್ಟ್‌ಫೋನ್‌ 6.82 ಇಂಚಿನ QHD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1440 x 3168 ಪಿಕ್ಸೆಲ್‌ ಸ್ಕ್ರೀನ್‌ ಸೂಪರ್ ಕ್ರಿಸ್ಪ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು LTPO ProXDR 10-ಬಿಟ್ ಅನ್ನು ಒದಗಿಸಲಿದ್ದು, 120Hz ರಿಫ್ರೆಶ್ ರೇಟ್‌ ಬೆಂಬಲವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಹೊಂದಿದೆ.

OnePlus 12 ಪ್ರೊಸೆಸರ್‌ ಯಾವುದು?
OnePlus 12 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 8 ಜೆನ್‌ 3 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಓಎಸ್‌ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM + 256GB ಹಾಗೂ 16GB RAM + 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳನ್ನು ಪಡೆದಿದೆ.

ಇಂದು OnePlus 12 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಪ್ರಾರಂಭ:ಏನೆಲ್ಲಾ ಆಫರ್‌ ಲಭ್ಯ

OnePlus 12 ಕ್ಯಾಮೆರಾ ಸೆಟಪ್‌ ಏನಿದೆ?
OnePlus 12 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸಲ್‌ನ ಸೋನಿ LYT 808 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 64 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ, ಮೂರನೇ ಕ್ಯಾಮೆರಾ 48 ಮೆಗಾಪಿಕ್ಸಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್‌ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

OnePlus 12 ಬ್ಯಾಟರಿ ಮತ್ತು ಇತರೆ
OnePlus 12 ಸ್ಮಾರ್ಟ್‌ಫೋನ್‌ 5400mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 100W ಸೂಪರ್‌ವೂಕ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ಕೇವಲ 25 ನಿಮಿಷಗಳಲ್ಲಿ 0 ರಿಂದ 100% ವರೆಗೆ ಚಾರ್ಜ್‌ ಮಾಡಬಹುದಾಗಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ 50W AIRVOOC ರಿವರ್ಸ್ ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್‌, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಇ-ಕಂಪಾಸ್‌ ಒಳಗೊಂಡಿದೆ.

Best Mobiles in India

English summary
OnePlus 12 Smartphone First sale today via Amazon: price and offers Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+