ಭಾರತದಲ್ಲಿ ಧೂಳೆಬ್ಬಿಸಲು ಸಜ್ಜಾಗುತ್ತಿದೆ ಒನ್‌ಪ್ಲಸ್‌ನ ಈ ಫೋನ್, 24GB RAM?
ಒನ್‌ಪ್ಲಸ್ ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಅದರಲ್ಲೂ ಕೆಲವು ದಿನಗಳ ಹಿಂದೆ ಒನ್‌ಪ್ಲಸ್ ವಿವಿಧ ಸುಧಾರಿತ ಫೀಚರ್ಸ್‌ನೊಂದಿಗೆ ಹೊಸ ಸ್ಮಾರ್ಟ್‌ಫೋನ್ ಅನ್ನು ಸಹ ಲಾಂಚ್ ಮಾಡಿದೆ. ಈ ನಡುವೆ ಹಲವಾರು ಗ್ರಾಹಕರು ಕುತೂಹಲದಿಂದ ಕಾಯುತ್ತಿರುವ ಫೋನ್ ಇನ್ನೇನು ಕೆಲವೇ ತಿಂಗಳಲ್ಲಿ ಭಾರತದ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲಿದೆ.
ಹೌದು, ಬಹುನಿರೀಕ್ಷಿತ ಒನ್‌ಪ್ಲಸ್ 12 (OnePlus 12) ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಲೀಕ್ ಆಗಿದೆ. ಈ ಫೋನ್ 24GB RAM ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಈ ಮೂಲಕ ಈ ಹಿಂದೆ ಯಾವ ಫೋನ್ ನೀಡಿರದ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಈ ಫೋನ್‌ನಲ್ಲಿ ನಿರೀಕ್ಷೆ ಮಾಡಬಹುದು ಎಂದು ತಿಳಿದುಬಂದಿದೆ. ಜೊತೆಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜನ್ 3 ಪ್ರೊಸೆಸರ್ ಬಲ ಹೊಂದಿರಬಹುದು ಎನ್ನಲಾಗಿದೆ. ಹಾಗಿದ್ರೆ, ಬನ್ನಿ ಲೀಕ್ ಆದ ಮಾಹಿತಿ ಪ್ರಕಾರ ಈ ಫೋನ್ ಏನೆಲ್ಲಾ ಫೀಚರ್ಸ್ ಆಯ್ಕೆ ಪಡೆದಿದೆ ನೋಡೋಣ.

ಒನ್‌ಪ್ಲಸ್ 12 ಲೀಕ್ ಫೀಚರ್ಸ್: ಒನ್‌ಪ್ಲಸ್ ತನ್ನ ಮುಂದಿನ ತಲೆಮಾರಿನ ಪ್ರಮುಖ ಸ್ಮಾರ್ಟ್‌ಫೋನ್ ಆಗಿರುವ ಒನ್‌ಪ್ಲಸ್ 12 (OnePlus 12) ಅನ್ನು ಈ ವರ್ಷದ ನಂತರ ಚೀನಾದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದ್ದು, ಮುಂದಿನ ವರ್ಷದ ಆರಂಭದಲ್ಲಿ ಜಾಗತಿಕವಾಗಿ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಅದಾಗ್ಯೂ ಈ ಫೋನ್‌ನ ಪ್ರಮುಖ ಫೀಚರ್ಸ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಬಹಳ ಸದ್ದು ಮಾಡುತ್ತಿವೆ.
ಇದರೊಂದಿಗೆ ಈ ಫೋನ್ ಆಪ್ಟಿಕಲ್ ಅಂಡರ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಹ್ಯಾಪ್ಟಿಕ್‌ಗಳಿಗಾಗಿ ಹೊಸ ಸೂಪರ್-ಸೈಜ್ x-ಆಕ್ಸಿಸ್ ಮೋಟರ್‌ನೊಂದಿಗೆ ಸಜ್ಜಾಗಲಿದ್ದು, 120Hz ರಿಫ್ರೆಶ್ ರೇಟ್‌ನೊಂದಿಗೆ 6.1 ಇಂಚಿನ ಕ್ವಾಡ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಬಹುದು ಎಂದು ಸೋರಿಕೆಯಾದ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಜೊತೆಗೆ ಕಂಪನಿಯ ಸ್ವಂತ ಕಲರ್ ಓಎಸ್ 14/ ಆಕ್ಸಿಜನ್ ಓಎಸ್ 14 ನೊಂದಿಗೆ ಅಗ್ರಸ್ಥಾನದಲ್ಲಿರುವ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಂ ಅನ್ನು ರನ್ ಮಾಡಲಿದೆ ಎಂದು ಹೇಳಲಾಗುತ್ತಿದೆ.
24GB RAM ಆಯ್ಕೆ: ಈ ಫೋನ್‌ನಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ವಿಷಯ ಏನೆಂದರೆ ಇದು 24GB RAM ನ ಹೊಸ ವೇರಿಯಂಟ್ ಪರಿಚಯಿಸಬಹುದು ಎಂದು. ಈ ಬಗ್ಗೆ ಚೀನೀ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ವೀಬೊದಲ್ಲಿ ಪೋಸ್ಟ್ ಮಾಡಲಾಗಿದೆ. ಅಷ್ಟು ಮಾತ್ರವಲ್ಲದೆ ಈ ಫೋನ್ 16GB RAM ವೇರಿಯಂಟ್ ಆಯ್ಕೆಯನ್ನೂ ಸಹ ನೀಡಲಿದೆ ಎನ್ನಲಾಗಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜನ್ 3 ಪ್ರೊಸೆಸರ್ ಹೊಂದಿರಲಿದೆ ಎಂದು ಊಹಿಸಲಾಗಿದೆ.
ಇದರೊಂದಿಗೆ ಈ ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು 3x ಜೂಮ್‌ನೊಂದಿಗೆ 64 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಲೆನ್ಸ್ ಅನ್ನು ಹೊಂದಿರಬಹುದು ಎನ್ನಲಾಗಿದ್ದು, 100W ವೇಗದ ಚಾರ್ಜಿಂಗ್ ಬೆಂಬಲ ಹಾಗೂ 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲದೊಂದಿಗೆ 5400mAh ಸಾಮರ್ಥ್ಯದ ಬ್ಯಾಟರಿಯಿಂದ ಈ ಫೋನ್ ಕಾಣಿಸಿಕೊಳ್ಳಲಿದೆ ಎನ್ನಲಾಗಿದೆ.
ಒನ್‌ಪ್ಲಸ್ 12 ಲಾಂಚ್ ಟೈಮ್‌ಲೈನ್ : ಮೊದಲೇ ತಿಳಿಸಿದಂತೆ ಈ ಫೋನ್ ಡಿಸೆಂಬರ್ 2023 ರಲ್ಲಿ ಚೀನಾದಲ್ಲಿ ಮೊದಲು ಲಾಂಚ್ ಆಗಲಿದ್ದು, ಇದಾದ ನಂತರದಲ್ಲಿ ಅಂದರೆ ಮುಂದಿನ ವರ್ಷದ ಆರಂಭದಲ್ಲಿ ಭಾರತದಲ್ಲಿ ಲಾಂಚ್ ಆಗಲಿದೆ ಎಂದು ತಿಳಿದುಬಂದಿದೆ. ಆದಾಗ್ಯೂ ಈ ಫೋನ್‌ನ ಬೆಲೆ ಎಷ್ಟಿರಬಹುದು ಹಾಗೂ ಇದು ಯಾವ ಬಣ್ಣದಲ್ಲಿ ಕಾಣಿಸಿಕೊಳ್ಳಲಿದೆ?, ಸೆಲ್ಫಿ ಕ್ಯಾಮೆರಾ ಆಯ್ಕೆ ಏನು ಎಂಬಿತ್ಯಾದಿ ಮಾಹಿತಿ ತಿಳಿದುಬಂದಿಲ್ಲ.

ಇದರೊಂದಿಗೆ ಒನ್‌ಪ್ಲಸ್ ಓಪನ್ ಅನ್ನು ಸಹ ಶೀಘ್ರದಲ್ಲೇ ಲಾಂಚ್ ಆಗುವ ನಿರೀಕ್ಷೆಯಿದೆ. ಈ ಫೋನ್ 2,268 × 2,440 ಪಿಕ್ಸೆಲ್ ರೆಸಲ್ಯೂಶನ್ ಮತ್ತು 426 PPI ನ ಪಿಕ್ಸೆಲ್ ಸಾಂದ್ರತೆಯೊಂದಿಗೆ 7.82 ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಒಪ್ಪೋ ಫೈಂಡ್ N3 ಮತ್ತು ಒನ್‌ಪ್ಲಸ್ ಓಪನ್ ಎರಡೂ ಒಂದೇ ಫೀಚರ್ಸ್ ಆಯ್ಕೆ ಪಡೆದಿರಲಿವೆ ಎನ್ನಲಾಗಿದೆ.


Click it and Unblock the Notifications








