Home
ಸುದ್ದಿಜಾಲ

ಇಂದು OnePlus 12R ಫಸ್ಟ್‌ ಸೇಲ್‌!..ಗ್ರಾಹಕರಿಗೆ ಭರ್ಜರಿ ಆಫರ್‌ ಇದೆ!

ಮೊಬೈಲ್‌ ಪ್ರಿಯರ ಫೇವರೇಟ್‌ ಬ್ರ್ಯಾಂಡ್‌ಗಳಲ್ಲಿ ಒಂದಾದ ಒನ್‌ಪ್ಲಸ್‌ ಸಂಸ್ಥೆಯು ನೂತನವಾಗಿ ಬಿಡುಗಡೆ ಮಾಡಿರುವ 'ಒನ್‌ಪ್ಲಸ್‌ 12R' ಸ್ಮಾರ್ಟ್‌ಫೋನ್ ಈಗಾಗಲೇ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ ಇಂದು (ಫೆಬ್ರವರಿ 6 ರಂದು) ಅಧಿಕೃತ ಒನ್‌ಪ್ಲಸ್‌ ಆನ್‌ಲೈನ್ ಸ್ಟೋರ್ ಹಾಗೂ ಅಮೆಜಾನ್ ಇಂಡಿಯಾ ಪ್ಲಾಟ್‌ಫಾರ್ಮ್ ಮೂಲಕ ಫಸ್ಟ್‌ ಸೇಲ್‌ ಪ್ರಾರಂಭಿಸಲಿದೆ.

ಹೌದು, ಒನ್‌ಪ್ಲಸ್‌ 12R ಸ್ಮಾರ್ಟ್‌ಫೋನ್‌ ಇಂದು ಫಸ್ಟ್‌ ಸೇಲ್‌ ಶುರು ಮಾಡಲಿದ್ದು, ಭರ್ಜರಿ ಆಫರ್‌ ಸಹ ಲಭ್ಯವಾಗಲಿದೆ. ಈ ಫೋನ್‌ 8GB RAM + 128GB ಮತ್ತು 16GB RAM + 256GB ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಈ ಫೋನ್‌ ಖರೀದಿಯೊಂದಿಗೆ ಒನ್‌ಪ್ಲಸ್‌ ಬಡ್ಸ್ Z2 ಉಚಿತವಾಗಿ ಲಭ್ಯ.

ಇಂದು OnePlus 12R ಫಸ್ಟ್‌ ಸೇಲ್‌!..ಗ್ರಾಹಕರಿಗೆ ಭರ್ಜರಿ ಆಫರ್‌ ಇದೆ!

ಇನ್ನು ಈ ಫೋನಿನ 8GB + 128GB ವೇರಿಯಂಟ್‌ ಬೆಲೆಯು 39,999ರೂ. ಆಗಿದ್ದು, 16GB RAM + 256GB ಸ್ಟೋರೇಜ್‌ ವೇರಿಯಂಟ್‌ ದರವು 45,999ರೂ. ಆಗಿದೆ. ಹಾಗೆಯೇ ಅಮೆಜಾನ್‌ ತಾಣದಲ್ಲಿ ಕೆಲವು ರಿಯಾಯಿತಿ ಆಫರ್‌ ಪ್ರಯೋಜನ ಕೂಡಾ ಖರೀದಿದಾರರಿಗೆ ಲಭ್ಯ ಆಗಲಿವೆ. ಹಾಗಾದರೆ ಒನ್‌ಪ್ಲಸ್‌ 12R ಫೋನಿನ ಇತರೆ ಫೀಚರ್ಸ್‌ ಯಾವುವು ಹಾಗೂ ಆಫರ್‌ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ 12R ಫೀಚರ್ಸ್‌

ಒನ್‌ಪ್ಲಸ್‌ 12R ಮೊಬೈಲ್‌ 6.78 ಇಂಚಿನ BOE X1 OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1,264x2,780 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 120Hz ProXDR ರಿಫ್ರೆಶ್ ರೇಟ್ ಜೊತೆಗೆ LTPO 4.0 ತಂತ್ರಜ್ಞಾನವನ್ನು ಹೊಂದಿದೆ. ಇದು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ನೊಂದಿಗೆ ಲೇಯರ್ಡ್ ಆಗಿದೆ.

ಇಂದು OnePlus 12R ಫಸ್ಟ್‌ ಸೇಲ್‌!..ಗ್ರಾಹಕರಿಗೆ ಭರ್ಜರಿ ಆಫರ್‌ ಇದೆ!

ಒನ್‌ಪ್ಲಸ್‌ 12R ಮೊಬೈಲ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14-ಆಧಾರಿತ OxygenOS 14 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM + 128GB ಮತ್ತು 16GB RAM + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳನ್ನು ಒಳಗೊಂಡಿದೆ.

ಒನ್‌ಪ್ಲಸ್‌ 12R ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ 112-ಡಿಗ್ರಿ ಫೀಲ್ಡ್-ಆಫ್-ವ್ಯೂ, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಒನ್‌ಪ್ಲಸ್‌ ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದು 100W SuperVOOC ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್ 5.3, 5G ಬೆಂಬಲ, ವೈ-ಫೈ 6E, ಬ್ಲೂಟೂತ್ 5.3, NFC, USB-C 3.2 ಜೆನ್‌ 2, ಜಿಪಿಎಸ್‌ ಅನ್ನು ಸಪೋರ್ಟ್ ಮಾಡಲಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್‌, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಇ-ಕಾಪಾಸ್‌ ಒಳಗೊಂಡಿದೆ.

ಒನ್‌ಪ್ಲಸ್‌ 12R (OnePlus 12R) ಮೊಬೈಲ್‌ ಭಾರತದಲ್ಲಿ 8GB + 128GB ಸ್ಟೋರೇಜ್‌ ಮತ್ತು 16GB + 256GB ಸ್ಟೋರೇಜ್‌ ಆಯ್ಕೆ ಹೊಂದಿದೆ. ಗ್ರಾಹಕರು ಈ ಫೋನ್‌ ಅನ್ನು ಐರನ್ ಗ್ರೇ ಮತ್ತು ಕೋಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು.

Best Mobiles in India

English summary
OnePlus 12R first sale today via Amazon India website. Check Price, offer and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+