ಒನ್‌ಪ್ಲಸ್ 12R ಓಪೆನ್ ಸೇಲ್ ಪ್ರಾರಂಭ..ಏನಾದ್ರೂ ಡಿಸ್ಕೌಂಟ್ ಇದೆಯಾ?
ಒನ್‌ಪ್ಲಸ್ ಸಂಸ್ಥೆಯ ಹೊಸ ಒನ್‌ಪ್ಲಸ್ 12R ಸ್ಮಾರ್ಟ್‌ಫೋನ್ ಓಪೆನ್ ಸೇಲ್ ಇಂದು ಅಮೆಜಾನ್ ಇ ಕಾಮರ್ಸ್ ತಾಣದ ಮೂಲಕ ಪ್ರಾರಂಭ ಆಗಿದೆ. ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಈ ಫೋನ್ ಈಗಾಗಲೇ ಮೊಬೈಲ್ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ.
ಒನ್‌ಪ್ಲಸ್ 12R ಸ್ಮಾರ್ಟ್‌ಫೋನಿನ ಓಪೆನ್ ಸೇಲ್ (ಇಂದು) ಫೆಬ್ರವರಿ 13 ರಂದು ಶುರುವಾಗಿದ್ದು, ಗ್ರಾಹಕರು ಒನ್‌ಪ್ಲಸ್ ಇಂಡಿಯಾ ವೆಬ್‌ಸೈಟ್, ಅಮೆಜಾನ್ ಇ ಕಾಮರ್ಸ್ ಹಾಗೂ ರಿಟೇಲ್ ಸ್ಟೋರ್‌ಗಳ ಮೂಲಕ ಖರೀದಿ ಮಾಡಬಹುದಾಗಿದೆ. ಈ ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಸೌಲಭ್ಯ ಅನ್ನು ಪಡೆದುಕೊಂಡಿದೆ.

ಒನ್‌ಪ್ಲಸ್ 12R ಮೊಬೈಲ್‌ನ ಆರಂಭಿಕ 8GB + 128GB ವೇರಿಯಂಟ್ ಬೆಲೆಯು 39,999ರೂ. ಆಗಿದೆ. ಈ ಫೋನ್ ಅನ್ನು ಐರನ್ ಗ್ರೇ ಮತ್ತು ಕೋಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇನ್ನುಳಿದಂತೆ ಒನ್‌ಪ್ಲಸ್ 12R ಫೋನಿನ ಇತರೆ ಫೀಚರ್ಸ್ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಒನ್‌ಪ್ಲಸ್ 12R ಫೀಚರ್ಸ್ ಮಾಹಿತಿ
ಒನ್‌ಪ್ಲಸ್‌ನ ಈ ಫೋನ್ 6.78 ಇಂಚಿನ BOE X1 OLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 1,264 x 2,780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಪಡೆದುಕೊಂಡಿದೆ. ಅಲ್ಲದೇ ಇದು 120Hz ProXDR ರಿಫ್ರೆಶ್ ರೇಟ್ ಪಡೆದಿರುವ ಜೊತೆ LTPO 4.0 ತಂತ್ರಜ್ಞಾನವನ್ನು ಪಡೆದುಕೊಂಡಿದೆ. ಇದು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ನೊಂದಿಗೆ ಲೇಯರ್ಡ್ ಆಗಿದೆ.

ಒನ್‌ಪ್ಲಸ್ 12R ಮೊಬೈಲ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಪಡೆದಿದ್ದು, ಇದು ಆಂಡ್ರಾಯ್ಡ್ 14 ಆಧಾರಿತ Oxygen OS 14 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕೆಲಸ ಮಾಡುತ್ತದೆ. ಹಾಗೆಯೇ ಈ ಫೋನ್ 8GB RAM + 128GB ಮತ್ತು 16GB RAM + 256GB ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಗಳನ್ನು ಒಳಗೊಂಡಿರುವುದು ಆಕರ್ಷಕ ಎನಿಸಿದೆ.
ಒನ್‌ಪ್ಲಸ್ 12R ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾವನ್ನು ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಮೊಬೈಲ್ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.
ಒನ್‌ಪ್ಲಸ್‌ನ ಈ ಹೊಸ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 100W SuperVOOC ವೈರ್ಡ್ ಚಾರ್ಜಿಂಗ್ ಅನ್ನು ಸಪೋರ್ಟ್ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್ 5.3, 5G ಬೆಂಬಲ, ವೈ-ಫೈ 6E, ಬ್ಲೂಟೂತ್ 5.3, NFC, USB-C 3.2 ಜೆನ್ 2, ಜಿಪಿಎಸ್ ಅನ್ನು ಸಪೋರ್ಟ್ ಹೊಂದಿದೆ.
ಈ ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಇ-ಕಾಪಾಸ್ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನ್ ಮಾರುಕಟ್ಟೆಯಲ್ಲಿ 8GB + 128GB ಆಯ್ಕೆ ಹಾಗೂ 16GB + 256GB ಆಯ್ಕೆ ಪಡೆದಿದೆ. ಈ ಫೋನ್ ಐರನ್ ಗ್ರೇ ಮತ್ತು ಕೋಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








