OnePlus 12R: ಭಾರತಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಒನ್‌ಪ್ಲಸ್ 12R: ಸ್ಟೈಲಿಶ್ ಲುಕ್, ಜಬರ್ದಸ್ತ್ ಫೀಚರ್ಸ್!
ಭಾರತದಲ್ಲಿ ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್ ಬಿಡುಗಡೆಯ ಜೊತೆಗೆ OnePlus 12R ಕೂಡ ಬಿಡುಗಡೆ ಆಗಿದೆ. ಇದು ಪ್ರೀಮಿಯಂ ವಿಶೇಷಣಗಳೊಂದಿಗೆ ಬರುವ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದು ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್ ಅನ್ನು ಹೊಂದಿದೆ.
ಹೌದು, OnePlus 12R ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 12 ಮಾದರಿಯ ವಿನ್ಯಾಸವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಆಲರ್ಟ್ ಸ್ಲೈಡರ್ ಡಿವೈಸ್‌ನ ಎಡಭಾಗದಲ್ಲಿದೆ. ಜೊತೆಗೆ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ನೀಡಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

OnePlus 12R ಡಿಸ್‌ಪ್ಲೇ ರಚನೆ ಹೇಗಿದೆ?
OnePlus 12R ಸ್ಮಾರ್ಟ್‌ಫೋನ್ 6.78 ಇಂಚಿನ BOE X1 OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1,264x2,780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ProXDR ರಿಫ್ರೆಶ್ ರೇಟ್ ಜೊತೆಗೆ LTPO 4.0 ತಂತ್ರಜ್ಞಾನವನ್ನು ಹೊಂದಿದೆ. ಜೊತೆಗೆ ಸೀಮಿತ ರಿಫ್ರೆಶ್ ರೇಟ್‌ಗಳ ಬದಲಿಗೆ ಹೊಸ 90Hz ಮತ್ತು 72Hz ಸೇರಿದಂತೆ ವ್ಯಾಪಕ ಶ್ರೇಣಿಯ ನಡುವೆ ರಿಫ್ರೆಶ್ ರೇಟ್‌ಗಳನ್ನು ಬದಲಾಯಿಸುವುದನ್ನು ಸಕ್ರಿಯಗೊಳಿಸುತ್ತದೆ. ಇನ್ನು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ನೊಂದಿಗೆ ಲೇಯರ್ಡ್ ಆಗಿದೆ.
OnePlus 12R ಪ್ರೊಸೆಸರ್ ಯಾವುದು?
OnePlus 12R ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14-ಆಧಾರಿತ OxygenOS 14 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM + 128GB ಮತ್ತು 16GB RAM + 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

OnePlus 12R ಕ್ಯಾಮೆರಾ ಸೆಟಪ್ ಏನಿದೆ?
OnePlus 12R ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ 112-ಡಿಗ್ರಿ ಫೀಲ್ಡ್-ಆಫ್-ವ್ಯೂ, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.
OnePlus 12R ಬ್ಯಾಟರಿ ಮತ್ತು ಇತರೆ
OnePlus 12R ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 100W SuperVOOC ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.3, 5G ಬೆಂಬಲ, Wi-Fi 6E, ಬ್ಲೂಟೂತ್ 5.3, NFC, USB-C 3.2 ಜೆನ್ 2, GPS, GLONASS ಅನ್ನು ಸಪೋರ್ಟ್ ಮಾಡಲಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಇ-ಕಾಪಾಸ್ ಒಳಗೊಂಡಿದೆ.

OnePlus 12R ಬೆಲೆ ಮತ್ತು ಲಭ್ಯತೆ
OnePlus 12R ಸ್ಮಾರ್ಟ್‌ಫೋನ್ ಭಾರತದಲ್ಲಿ 8GB + 128GB ಸ್ಟೋರೇಜ್ ಆಯ್ಕೆಗೆ 39,999ರೂ ಮತ್ತು 16GB + 256GB ಸ್ಟೋರೇಜ್ ಆಯ್ಕೆಗೆ 45,999ರೂ ಬೆಲೆಯನ್ನು ಹೊಂದಿದೆ. ಇದನ್ನು ನೀವು ಐರನ್ ಗ್ರೇ ಮತ್ತು ಕೋಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು. ಈ ಸ್ಮಾರ್ಟ್‌ಫೋನ್ ಇಂದಿನಿಂದಲೇ (ಜನವರಿ 23 ರಿಂದ) ಮುಂಗಡ-ಆರ್ಡರ್‌ಗಳಿಗೆ ಹೋಗುತ್ತದೆ. ಅಲ್ಲದೆ ಫೆಬ್ರವರಿ 6 ರಿಂದ ಮುಕ್ತ ಮಾರಾಟ ಪ್ರಾರಂಭವಾಗಲಿದೆ. ಜೊತೆಗೆ ಫಸ್ಟ್ ಸೇಲ್ ಮೇಲೆ ವಿವಿಧ ಕೊಡುಗೆಗಳು ಮತ್ತು ರಿಯಾಯಿತಿಗಳು ಕೂಡ ದೊರೆಯಲಿವೆ.


Click it and Unblock the Notifications








