Home
ಸುದ್ದಿಜಾಲ

ಹೊಸ OnePlus 13 ಫೋನಿಗೆ ನೇರ ಪೈಪೋಟಿ ನೀಡುವ ಬೆಸ್ಟ್‌ ಮೊಬೈಲ್‌ಗಳು ಇವು!

ಲೀಡಿಂಗ್‌ ಸ್ಮಾರ್ಟ್‌ಫೋನ್‌ ಸಂಸ್ಥೆಗಳಲ್ಲಿ ಒಂದೆನಿಸಿರುವ ಒನ್‌ಪ್ಲಸ್‌ (OnePlus) ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗಿ ಒನ್‌ಪ್ಲಸ್‌ 13 (OnePlus 13) ಫೋನ್‌ ಅನ್ನು ಬಿಡುಗಡೆ ಮಾಡಿದ್ದು, ಮಾರುಕಟ್ಟೆಯಲ್ಲಿ ಸಖತ್ ಗಮನ ಸೆಳೆದಿದೆ. ಕಂಪನಿಯ ಹೊಸ ಒನ್‌ಪ್ಲಸ್‌ 13 (OnePlus 13) ಫ್ಲ್ಯಾಗ್‌ಶಿಪ್‌ ರೇಂಜ್‌ನಲ್ಲಿ ಕಾಣಿಸಿಕೊಂಡಿದ್ದು, ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್‌ ಪ್ರಿಯರನ್ನು ಸೆಳೆದಿದೆ. ಅದಾಗ್ಯೂ, ನಿಮಗೆ ಒನ್‌ಪ್ಲಸ್‌ 13 (OnePlus 13) ಮೊಬೈಲ್‌ಗೆ ಸಮಾನವಾದ ಇತರೆ ಪರ್ಯಾಯ ಫೋನ್‌ಗಳು ಮಾರುಕಟ್ಟೆಯಲ್ಲಿ ಖರಿದಿಗೆ ಲಭ್ಯ ಇವೆ.

ಹೌದು, ಮೊಬೈಲ್‌ ಮಾರುಕಟ್ಟೆಯಲ್ಲಿ ಹೈ ಎಂಡ್‌ ಮಾದರಿಯ ಫೋನ್‌ಗಳಿಗೂ ಕೂಡಾ ಹೆಚ್ಚಿನ ಡಿಮ್ಯಾಂಡ್‌ ಇದೆ. ಈ ನಿಟ್ಟಿನಲ್ಲಿ ಮೊಬೈಲ್‌ ಸಂಸ್ಥೆಗಳು ಕೂಡಾ ಈ ವಿಭಾಗದಲ್ಲಿ ಅತ್ಯುತ್ತಮ ಮೊಬೈಲ್‌ಗಳನ್ನು ಪರಿಚಯಿಸುತ್ತ ಮುನ್ನಡೆದಿವೆ. ಈ ಸಾಲಿಗೆ ಒನ್‌ಪ್ಲಸ್‌ ಸಂಸ್ಥೆಯ ನೂತನ ಒನ್‌ಪ್ಲಸ್‌ 13 (OnePlus 13) ಸಹ ಸೇರ್ಪಡೆ ಆಗಿದೆ. ಆದರೆ ಮಾರುಕಟ್ಟೆಯಲ್ಲಿ ಈ ಫೋನಿಗೆ ನೇರ ಪೈಪೋಟಿ ನೀಡುವ ಇತರೆ ಪರ್ಯಾಯ ಮೊಬೈಲ್‌ಗಳ ಆಯ್ಕೆ ಕೂಡಾ ಗ್ರಾಹಕರಿಗೆ ಲಭ್ಯ ಇವೆ. ಹಾಗಾದರೇ ಒನ್‌ಪ್ಲಸ್‌ 13 ಫೋನ್ ಪರ್ಯಾಯ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಹೊಸ OnePlus 13 ಫೋನಿಗೆ ನೇರ ಪೈಪೋಟಿ ನೀಡುವ ಬೆಸ್ಟ್‌ ಮೊಬೈಲ್‌ಗಳು ಇವು!

ಆಪಲ್‌ ಐಫೋನ್‌ 16

ಆಪಲ್‌ ಐಫೋನ್‌ 16 ಮೊಬೈಲ್‌ 6.1 ಇಂಚಿನ ಡಿಸ್‌ಪ್ಲೇ ರಚನೆ ಅನ್ನು ಪಡೆದುಕೊಂಡಿದ್ದು, ಇದನ್ನು ಅನ್ನು ಏರೋಸ್ಪೇಸ್ ದರ್ಜೆಯ ಅಲ್ಯೂಮಿನಿಯಂನಿಂದ ತಯಾರಿಸಲಾಗಿದೆ. ಅಲ್ಲದೇ ಐಫೋನ್‌ 16 ಮೊಬೈಲ್‌ A18 ಬಯೋನಿಕ್ ಚಿಪ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಈ ಚಿಪ್ ಎರಡು ಪಟ್ಟು ವೇಗದ ನ್ಯೂರಲ್ ಎಂಜಿನ್ ಮತ್ತು 17 ಪ್ರತಿಶತ ಹೆಚ್ಚು ಬ್ಯಾಂಡ್‌ವಿಡ್ತ್‌ನೊಂದಿಗೆ ನವೀಕರಿಸಿದ ಮೆಮೊರಿ ಉಪವ್ಯವಸ್ಥೆಯನ್ನು ಪಡೆದುಕೊಂಡಿದೆ.

ಹಾಗೆಯೇ ಇತ್ತೀಚಿನ ಐಫೋನ್‌ 16 ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಅವುಗಳಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ 12 ಮೆಗಾ ಪಿಕ್ಸಲ್‌ನ ಟೆಲಿಫೋಟೋ ಲೆನ್ಸ್‌ ಸಹ ಒಳಗೊಂಡಿದೆ. ಇದು ಅತ್ಯುತ್ತಮ ಫೋಟೋ ಸೆರೆಹಿಡಿಯಲು ಪೂರಕವಾಗಿ ಕೆಲಸ ನಿರ್ವಹಿಸಲಿದೆ.

ಐಕ್ಯೂ 13 ಮೊಬೈಲ್‌

ಐಕ್ಯೂ 13 ಮೊಬೈಲ್ 6.82 ಇಂಚಿನ ಡಿಸ್‌ಪ್ಲೇ ರಚನೆ ಪಡೆದಿದ್ದು, ಡಿಸ್‌ಪ್ಲೇಯು 1,440 x 3,168 ಪಿಕ್ಸೆಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಹಾಗೆಯೇ ಈ ಸ್ಕ್ರೀನ್‌ 2K ಸಪೋರ್ಟ್‌, BOE Q10 8T LTPO 2.0 OLED ಡಿಸ್‌ಪ್ಲೇ ಹೊಂದಿದೆ. ಅಲ್ಲದೇ ಹೊಸ ಸ್ನಾಪ್‌ಡ್ರಾಗನ್ 8 ಎಲೈಟ್ SoC ಪ್ರೊಸೆಸರ್‌ ಸಾಮರ್ಥ್ಯದ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ Android 15 ಸಪೋರ್ಟ್‌ ಪಡೆದಿದೆ.

ಇನ್ನು ಈ ಫೋನ್‌ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಒಳಗೊಂಡಿದ್ದು, ಜೊತೆಗೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಹಾಗೆಯೇ ಈ ಫೋನ್‌ 6,150mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಅನುಗುಣವಾಗಿ 120W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ.

ಆಪಲ್‌ ಐಫೋನ್‌ 15

ಐಫೋನ್‌ 15 ಮೊಬೈಲ್‌ 6.1 ಇಂಚಿನ ಡಿಸ್‌ಪ್ಲೇ ರಚನೆ ಅನ್ನು ಹೊಂದಿದ್ದು, 1600 nits ಬ್ರೈಟ್ನಸ್‌ ಸಪೋರ್ಟ್‌ ಸಹ ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ A16 ಬಯೋನಿಕ್ ಚಿಪ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಈ ಐಫೋನ್‌ ios 16 ಓಎಸ್‌ ಸಪೋರ್ಟ್ ಇದೆ. ಅಲ್ಲದೇ ಇದು 128 GB, 256 GB, 512 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಜೊತೆಗೆ 12 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

Best Mobiles in India

English summary
OnePlus 13 Alternatives: iPhone 15, iQOO 13, iPhone 16 and more. check best Alternatives phones and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+