OnePlus 13R ಬಿಡುಗಡೆಗೆ ಸಿದ್ಧ; 512GB ಸ್ಟೋರೇಜ್.. 6000mAh ಬ್ಯಾಟರಿ ಖಚಿತ.. ಬೆಲೆ ಎಷ್ಟು ಗೊತ್ತಾ?
ಒನ್‌ಪ್ಲಸ್ ಭಾರತದಲ್ಲಿ ಎರಡು ಹೊಸ ಮೊಬೈಲ್ ಬಿಡುಗಡೆ ಮಾಡಲು ಸಜ್ಜಾಗಿದೆ. ಇವುಗಳೇ ಒನ್‌ಪ್ಲಸ್ 13 (OnePlus 13) ಮತ್ತು ಒನ್‌ಪ್ಲಸ್ 13R (OnePlus 13R) ಫೋನ್‌ಗಳು. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಉತ್ತಮ ಗುಣಮಟ್ಟದ ವೈಶಿಷ್ಟ್ಯಗಳನ್ನು ಹೊಂದಿರುತ್ತವೆ. ಈಗಾಗಲೇ, ಒನ್‌ಪ್ಲಸ್ 13 ಮೊಬೈಲ್ ಚೀನಾದಲ್ಲಿ ಬಿಡುಗಡೆಯಾಗಿದೆ. ಇತ್ತ, ಒನ್‌ಪ್ಲಸ್ 13R ಬಿಡುಗಡೆಗೆ ಸಿದ್ಧವಾಗಿದೆ. ಈ ಫೋನಿನ ಪ್ರಮುಖ ವೈಶಿಷ್ಟ್ಯಗಳನ್ನು ಬಿಡುಗಡೆಗೂ ಮೊದಲೇ, ಬಹಿರಂಗಪಡಿಸಲಾಗಿದೆ. ಬನ್ನಿ, ಮುಂಬರುವ ಹೊಸ ಮೊಬೈಲ್ ಯಾವೆಲ್ಲಾ ವಿಶೇಷತೆಗಳನ್ನು ಹೊಂದಿರಲಿದೆ ತಿಳಿಯೋಣ.
ಒನ್‌ಪ್ಲಸ್ 13R ಫೋನನ್ನು ಬೆಂಚ್‌ಮಾರ್ಕಿಂಗ್ ಸೈಟ್ ಗೀಕ್‌ಬೆಂಚ್‌ನಲ್ಲಿ ಪಟ್ಟಿ ಮಾಡಲಾಗಿದೆ. ಇದು ಮಾಡೆಲ್ ಸಂಖ್ಯೆ OnePlus CPH2645 ನೊಂದಿಗೆ ಕಾಣಿಸಿಕೊಂಡಿದೆ. ಈಗಾಗಲೇ, ಒನ್‌ಪ್ಲಸ್ 13R ಮೊಬೈಲ್‌ನ ಭಾರತದ ಬೆಲೆ ಸೋರಿಕೆಯಾಗಿದೆ. ಈ ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್ ಹೊಂದಿರಲಿದೆ. ಫೋನಿನಲ್ಲಿ 6.78 ಇಂಚಿನ ಡಿಸ್ಪ್ಲೇ ಲಭ್ಯವಿರಲಿದೆ. ಜೊತೆಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾ, 512GB ಸ್ಟೋರೇಜ್, 6500mAh ಬ್ಯಾಟರಿ ಮತ್ತು 100W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ.

ಒನ್‌ಪ್ಲಸ್ 13R ಫೋನಿನ ಬೆಲೆ (ನಿರೀಕ್ಷಿತ)
ಕಂಪನಿಯು ಒನ್‌ಪ್ಲಸ್ 13R ಫೋನನ್ನು ಮೊದಲು ಚೀನಾದಲ್ಲಿ ಬಿಡುಗಡೆ ಮಾಡಲಿದೆ. ಬಳಿಕ, ಮುಂದಿನ ವರ್ಷ (2025) ಭಾರತೀಯ ಮಾರುಕಟ್ಟೆಗೆ ಬರಲಿದೆ. ಇದು ಭಾರತದಲ್ಲಿ ಚೀನಾದ ಬೆಲೆಗಿಂತ ಕಡಿಮೆ ಇರಲಿದೆ. ವರದಿಯ ಪ್ರಕಾರ, ಒನ್‌ಪ್ಲಸ್ 13R ಫೋನನ್ನು 40,000 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ಈ ಫೋನಿನ ಟಾಂಪ್ ವೇರಿಯಂಟ್ ಬೆಲೆ 52,000 ರೂ. ಇರಲಿದೆ.
ಒನ್‌ಪ್ಲಸ್ 13R ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒನ್‌ಪ್ಲಸ್ 13R ಫೋನ್ 6.78 ಇಂಚಿನ 1.5K ಡಿಸ್ಪ್ಲೇ ಹೊಂದಿರಲಿದೆ. ಇದು BOE X2 ತಂತ್ರಜ್ಞಾನದೊಂದಿಗೆ 8T LTPO ಫ್ಲಾಟ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 4,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿರಲಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಗೊರಿಲ್ಲಾ ಗ್ಲಾಸ್ ರಕ್ಷಣೆಯನ್ನು ಹೊಂದಿರಲಿದೆ.
ಪ್ರೊಸೆಸರ್ ಸಾಮರ್ಥ್ಯ
ಮುಂಬರುವ ಒನ್‌ಪ್ಲಸ್ 13R ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಆಕ್ಟಾಕೋರ್ ಪ್ರೊಸೆಸರ್ ಹೊಂದಿರುವ ಸಾಧ್ಯತೆಯಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಒನ್‌ಪ್ಲಸ್ 12R ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡಲಿದೆ.
ಸ್ಟೋರೇಜ್ ಆಯ್ಕೆ
ಒನ್‌ಪ್ಲಸ್ 13R ಮೊಬೈಲ್ 16GB RAM ಮತ್ತು 512GB ಸ್ಟೋರೇಜ್ ಹೊಂದಿರಲಿದೆ. ಇದು ಫೋನಿನ ಟಾಪ್ ವೇರಿಯಂಟ್ ಆಗಿದೆ. ಮೂಲ ರೂಪಾಂತರವು 12GB RAM ಹೊಂದಿರಲಿದೆ.

ಕ್ಯಾಮೆರಾ ಸೆಟಪ್
ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿರುತ್ತದೆ. ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿರಲಿದೆ. ಜೊತೆಗೆ, 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿರಲಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮುಂಬರುವ ಒನ್‌ಪ್ಲಸ್ 13R ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 100W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುವುದು. ಒನ್‌ಪ್ಲಸ್ 12R ಫೋನ್ 5500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಇತರೆ ವೈಶಿಷ್ಟ್ಯಗಳು
ಒನ್‌ಪ್ಲಸ್ 13R ಮೊಬೈಲ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಎನ್‌ಎಫ್‌ಸಿ, ವೈ-ಫೈ, ಬ್ಲೂಟೂತ್ ಮತ್ತು ಡ್ಯುಯಲ್ ಸಿಮ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿರಲಿದೆ.


Click it and Unblock the Notifications








