ಭಾರತದಲ್ಲಿ 'ಒನ್‌ಪ್ಲಸ್‌ 7T' ಲಾಂಚ್!.ಬೆಲೆ, ಫೀಚರ್ ಕೇಳಿದ್ರೆ ಅಚ್ಚರಿ ಆಗ್ತಿರಾ!

|

ಗ್ರಾಹಕರು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ಒನ್‌ಪ್ಲಸ್‌ 7T ಸ್ಮಾರ್ಟ್‌ಫೋನ್ ನಿನ್ನೆ(ಸೆ.26) ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಈಗಾಗಲೇ ಜನಪ್ರಿಯವಾಗಿರುವ ಒನ್‌ಪ್ಲಸ್‌ 7 ಫೋನಿನ ಅಪ್‌ಡೇಟ್ ವರ್ಷನ ಆಗಿದ್ದು, ಫೀಚರ್ಸ್‌ಗಳು ಸಹ ಸಂಪೂರ್ಣ ಹೈ ಎಂಡ್ ಮಾದರಿಯಲ್ಲಿವೆ. ಈ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನಿನ 8GB RAM ಸಾಮರ್ಥ್ಯ, 48ಎಂಪಿ ಕ್ಯಾಮೆರಾ ಸೆನ್ಸಾರ್ ಫೀಚರ್‌ಗಳು ಗ್ರಾಹಕರನ್ನು ಸೆಳೆಯುತ್ತಿವೆ.

ಒನ್‌ಪ್ಲಸ್‌ 7T

ಹೌದು, ಜನಪ್ರಿಯ ಒನ್‌ಪ್ಲಸ್‌ ಕಂಪನಿಯು ನಿನ್ನೆ (ಸೆಪ್ಟೆಂಬರ್ 26 ರಂದು) ದೇಶದಲ್ಲಿ 'ಒನ್‌ಪ್ಲಸ್‌ 7T' ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದ್ದು, ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 855 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ತ್ರಿವಳಿ ಕ್ಯಾಮೆರಾ ಜೊತೆಗೆ 8GB RAM ಮತ್ತು 256GB ಸ್ಟೋರೇಜ್ ಸ್ಥಳಾವಕಾಶ ರೀಚ್ ಫೀಚರ್ಸ್‌ಗಳಿಂದ ಮಾರುಕಟ್ಟೆಯಲ್ಲಿ ಸೌಂಡ್‌ ಮಾಡುವ ಲಕ್ಷಣಗಳನ್ನು ನೀಡಿದೆ. ಹಾಗಾದರೇ ಒನ್‌ಪ್ಲಸ್‌ 7T ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ಒನ್‌ಪ್ಲಸ್‌ 7T' ಸ್ಮಾರ್ಟ್‌ಫೋನ್ 2,400 x 1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 ಇಂಚಿನ ಫ್ಲ್ಯೂಡ್‌ AMOLED ಡಿಸ್‌ಪ್ಲೇಯನ್ನು ಒಳಗೊಂಡಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಇದರೊಂದಿಗೆ ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 402 PPI ಆಗಿದ್ದು, ಡಿಸ್‌ಪ್ಲೇಯ ರಿಫ್ರೇಶ್‌ ರೇಟ್ 90Hz ಆಗಿದೆ. ಹಾಗೆಯೇ 3D ಕಾರ್ನಿಂಗ್ ಗೊರಿಲ್ಲಾ ಗ್ಲಾಸ್‌ ಅನ್ನು ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ಪ್ರೊಸೆಸರ್ ಸಾಮರ್ಥ್ಯ

ಒನ್‌ಪ್ಲಸ್‌ 7T' ಸ್ಮಾರ್ಟ್‌ಫೋನ್ ಆಕ್ಟಾಕೋರ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್‌ 10 ಆಧಾರಿತ ಆಕ್ಸಿಜನ್ ಓಎಸ್‌ 10 ಬೆಂಬಲವನ್ನು ಒಳಗೊಂಡಿದೆ. ಜೊತೆಗೆ ಆಂಡ್ರಿನೊ 640 GPU ಸಹ ನೀಡಲಾಗಿದೆ. ಇನ್ನು ಎರಡು ವೇರಿಯಂಟ್‌ ಆಯ್ಕೆಗಳನ್ನು ಹೊಂದಿದ್ದು, ಅವುಗಳು 8GB RAM ಮತ್ತು 128GB ಆಂತರಿಕ ಸ್ಟೋರೇಜ್ ಹಾಗೂ 8GB RAM ಮತ್ತು 256GB ಆಂತರಿಕ ಸ್ಟೋರೇಜ್ ಆಗಿದೆ.

ಮೂರು ಕ್ಯಾಮೆರಾ

ಮೂರು ಕ್ಯಾಮೆರಾ

ಒನ್‌ಪ್ಲಸ್‌ 7T' ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 48ಎಂಪಿ ಸೋನಿಯ IMX586 ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್‌ ಟೆಲಿಪೋಟೋ ಲೆನ್ಸ್‌ ಪಡೆದಿದ್ದು, ತೃತೀಯ ಕ್ಯಾಮೆರಾವು 16ಎಂಪಿಯ ಅಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16ಎಂಪಿ ಸಾಮರ್ಥ್ಯದಲ್ಲಿದ್ದು, ಸೋನಿಯ IMX471 ಸೆನ್ಸಾರ್ ಪಡೆದಿದೆ. 4K ವಿಡಿಯೊ ಬೆಂಬಲಿಸುತ್ತದೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

ಒನ್‌ಪ್ಲಸ್‌ 7T' ಸ್ಮಾರ್ಟ್‌ಫೋನ್ 3,800mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆ ಹೊಂದಿದ್ದು, ಇದರೊಂದಿಗೆ ವ್ರಾಪ್‌ ಚಾರ್ಜ್‌ 30T ಫಾಸ್ಟ್‌ ಚಾರ್ಜಿಂಗ್ ತಂತ್ರಜ್ಞಾನದ ಸೌಲಭ್ಯವನ್ನು ಒಳಗೊಂಡಿದೆ. ಈ ಚಾರ್ಜರ್ ನೆರವಿನಿಂದ ಕೇವಲ 30 ನಿಮಿಷದಲ್ಲಿ ಸ್ಮಾರ್ಟ್‌ಫೋನ್ 0 ಯಿಂದ 70 ಪರ್ಸೆಂಟ್ ವರೆಗೂ ಚಾರ್ಜ್ ಪಡೆದುಕೊಳ್ಳುತ್ತದೆ. ಬ್ಯಾಟರಿ ಬ್ಯಾಕ್‌ಅಪ್‌ ಸಹ ಅತ್ಯುತ್ತಮವಾಗಿ ನೀಡಬಲ್ಲದು.

ಇತರೆ ಫೀಚರ್ಸ್‌

ಇತರೆ ಫೀಚರ್ಸ್‌

ಒನ್‌ಪ್ಲಸ್‌ 7T' ಸ್ಮಾರ್ಟ್‌ಫೋನ್ ವರ್ಕ್‌ ಲೈಫ್ ಬ್ಯಾಲೆನ್ಸ್‌ ಹೆಸರಿನ ಸಾಫ್ಟ್‌ವೇರ್ ಫೀಚರ್‌ ಹೊಂದಿದ್ದು, ಸ್ಮಾರ್ಟ್‌ ಎಸ್‌ಎಮ್‌ಎಸ್ ಫೀಚರ್ ಮತ್ತು ಒನ್‌ಪ್ಲಸ್‌ ಮೆಸೆಜ್ ಆಪ್‌ಗಳನ್ನು ಒಳಗೊಂಡಿದೆ. ಹಾಗೆಯೇ ಒನ್‌ಪ್ಲಸ್‌ ಕ್ಲೌಡ್‌ ಗ್ಯಾಲರಿ ಸ್ಟೋರೇಜ್ ಆಯ್ಕೆಯನ್ನು ಒದಗಿಸಿಲಾಗಿದ್ದು, ಇದರೊಂದಿಗೆ ಬ್ಲೂಟೂತ್, ವೈಫೈ, ಎಲೆಕ್ಟ್ರಿಕ್ ಕಂಪಾಸ್, ಆಂಬಿಯಂಟ್ ಲೈಟ್‌, ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಕೋರ್ ಸೆನ್ಸಾರ್‌ ಆಯ್ಕೆಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಬಹುನಿರೀಕ್ಷಿತ 'ಒನ್‌ಪ್ಲಸ್‌ 7T' ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ವೇರಿಯಂಟ್ ಮಾದರಿಗಳಲ್ಲಿ ಬಿಡುಗಡೆಯಾಗಿದೆ. 8GB RAM ಮತ್ತು 128GB ವೇರಿಯಂಟ್ ಬೆಲೆಯು 37,999ರೂ.ಗಳಾಗಿದ್ದು, ಹಾಗೆಯೇ 8GB RAM ಮತ್ತು 256GB ವೇರಿಯಂಟ್ ಬೆಲೆಯು 39,999ರೂ.ಗಳಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸಿಲ್ವರ್ ಮತ್ತು ಬ್ಲೂ ಬಣ್ಣಗಳ ಆಯ್ಕೆ ಹೊಂದಿದ್ದು, ಇದೆ ಸೆಪ್ಟೆಂಬರ್ 28ರಿಂದ ಅಮೆಜಾನ್ನಲ್ಲಿ ಸೇಲ್ ಆರಂಭಿಸಲಿದೆ. (ಸೆ.28 ರಂದು ಪ್ರೈಮ್ ಗ್ರಾಹಕರಿಗೆ ಖರೀದಿಗೆ ಲಭ್ಯ )

Most Read Articles
Best Mobiles in India

English summary
OnePlus has finally launched its latest flagship smartphone, the OnePlus 7T in the Indian market. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more