ಭರ್ಜರಿ ಡಿಸ್ಕೌಂಟ್‌ನಲ್ಲಿ 'ಒನ್‌ಪ್ಲಸ್ 7T ಪ್ರೊ' ಫೋನ್ ಖರೀದಿಸಬಹುದು!
ದೇಶಿಯ ಮಾರುಕಟ್ಟೆಯಲ್ಲಿ 'ಒನ್‌ಪ್ಲಸ್' ಸಂಸ್ಥೆಯ ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಇತ್ತೀಚಿಗಿನ ಒನ್‌ಪ್ಲಸ್ 7 ಸರಣಿಯ ಫೋನ್‌ಗಳು ಫ್ಲ್ಯಾಗ್‌ಶಿಪ್ ಫೀಚರ್ಸ್‌ಗಳಿಂದ ಗ್ರಾಹಕರನ್ನು ಅಟ್ರ್ಯಾಕ್ಟ್ ಮಾಡಿವೆ. ಆ ಪೈಕಿ ದೈತ್ಯ 'ಒನ್‌ಪ್ಲಸ್ 7T ಪ್ರೊ' ಫೋನ್ ಸದ್ಯ ಗ್ರಾಹಕರಿಗೆ ಬೆಸ್ಟ್ ಅನಿಸಿದೆ. ಆದರೆ ಇದೀಗ 'ಒನ್‌ಪ್ಲಸ್ 7 ಪ್ರೊ' ಫೋನ್ ಬೆಲೆ ಡಿಸ್ಕೌಂಟ್ ಪಡೆದಿದ್ದು, ಗ್ರಾಹಕರಿಗೆ ಮತ್ತಷ್ಟು ಖುಷಿ ತಂದಿದೆ.

ಹೌದು, ಜನಪ್ರಿಯ ಒನ್‌ಪ್ಲಸ್ 7T ಪ್ರೊ ಸ್ಮಾರ್ಟ್‌ಫೋನ್ ಖರೀದಿಸುವುದಕ್ಕೆ ಇದುವೇ ಅತ್ಯುತ್ತಮ ಸಮಯ. ಏಕೆಂದರೇ ಗ್ರಾಹಕರು ಅಮೆಜಾನ್ ಇ-ಕಾಮರ್ಸ್ ತಾಣದಲ್ಲಿ ಒನ್‌ಪ್ಲಸ್ 7T ಪ್ರೊ ಫೋನಿಗೆ 7,000ರೂ ಡಿಸ್ಕೌಂಟ್ ಪಡೆಯಬಹುದಾಗಿದೆ. ಅಮೆಜಾನ್ ತಾಣವು ಈ ಫೋನಿಗೆ 2000ರೂ ಕ್ಯಾಶ್‌ಬ್ಯಾಕ್ ಕೊಡುಗೆ ನೀಡಿದ್ದು, ಇದರೊಂದಿಗೆ ಎಕ್ಸ್‌ಚೇಂಜ್ ಡಿಸ್ಕೌಂಟ್, ಎಸ್‌ಬಿಐ ಕಾರ್ಡ್ ಡಿಸ್ಕೌಂಟ್ ಮತ್ತು ಅಮೆಜಾನ್ ಪೇ ಡಿಸ್ಕೌಂಟ್ ಸೇರಿ ಸುಮಾರು 7000ರೂ. ವರೆಗೂ ರಿಯಾಯಿತಿ ಪಡೆಯಬಹುದಾಗಿದೆ.

ಪ್ರಸ್ತುತ ಅಮೆಜಾನ್ ತಾಣದಲ್ಲಿ ಒನ್‌ಪ್ಲಸ್ 7T ಪ್ರೊ ಸ್ಮಾರ್ಟ್‌ಫೋನ್ 53,999ರೂ.ಗಳಿಗೆ ಲಭ್ಯವಿದೆ. ಲಭ್ಯವಿರುವ ಡಿಸ್ಕೌಂಟ್‌ಗಳನ್ನು ಪಡೆದುಕೊಂಡರೆ 46,999ರೂ.ಗೆ ಖರೀದಿಸಬಹುದಾಗಿದೆ. ಹಾಗೆಯೇ ಆಕರ್ಷಕ ಇಎಮ್‌ಐ ಆಯ್ಕೆಗಳು ಸಹ ಲಭ್ಯವಾಗಲಿವೆ. ಹಾಗಾದರೆ ಒನ್‌ಪ್ಲಸ್ 7T ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳೆನು ಎನ್ನುವುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ
'ಒನ್‌ಪ್ಲಸ್ 7T ಪ್ರೊ' ಸ್ಮಾರ್ಟ್‌ಫೋನ್ 1,440 x 3,120 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ QHD ಫ್ಲ್ಯುಡ್ AMOLED ಡಿಸ್‌ಪ್ಲೇ ಪ್ಯಾನೆಲ್ ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.5:9 ಆಗಿದ್ದು, 90Hz ರೀಫ್ರೆಶ್ ರೇಟ್ ಹೊಂದಿದೆ. ಡಿಸ್‌ಪ್ಲೇಯು HDR10+ ಮತ್ತು DCI-P3 ಸೌಲಭ್ಯಗಳ ಸಪೋರ್ಟ್ ಪಡೆದುಕೊಂಡಿದೆ. ಡಿಸ್‌ಪ್ಲೇ ಅತ್ಯುತ್ತಮ ಪ್ರಖರತೆ ಹೊಂದಿದ್ದು, ಗೇಮಿಂಗ್‌ಗೆ ಮತ್ತು ವಿಡಿಯೊ ವೀಕ್ಷಣೆಗೆ ಉತ್ತಮ ಎನಿಸಿಲಿದೆ.

ಪ್ರೊಸೆಸರ್ ಸಾಮರ್ಥ್ಯ
'ಒನ್‌ಪ್ಲಸ್ 7T ಪ್ರೊ' ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855 ಪ್ಲಸ್ ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಇತ್ತೀಚಿನ ಹೊಸ ಆಂಡ್ರಾಯ್ಡ್ 10 ಆಕ್ಸಿಜನ್ ಓಎಸ್ ಬೆಂಬಲವನ್ನು ಹೊಂದಿದೆ. ಇದರೊಂದಿಗೆ ಅಡ್ರಿನೊ 640 GPU ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನಿನಲ್ಲಿ 8GB RAM ಸಾಮರ್ಥ್ಯದ ಜೊತೆಗೆ 256GB ಆಂತರಿಕ ಸಂಗ್ರಹ ಅವಕಾಶವನ್ನು ಕಾಣಬಹುದಾಗಿದೆ.

ವಿಶೇಷ ಕ್ಯಾಮೆರಾ
'ಒನ್‌ಪ್ಲಸ್ 7T ಪ್ರೊ' ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದ್ದು, ಮುಖ್ಯ ಕ್ಯಾಮೆರಾವು f/1.6 ಅಪರ್ಚರ್ನೊಂದಿಗೆ OIS ಸಹಿತ 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು f/2.2 ಅಪರ್ಚರ್ನೊಂದಿಗೆ 16ಎಂಪಿ ಸೆನ್ಸಾರ್ ಹೊಂದಿದ್ದು, ತೃತೀಯ ಕ್ಯಾಮೆರಾವು f/2.4 ಅಪರ್ಚರ್ನೊಂದಿಗೆ 8ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು f/2.0 ಅಪರ್ಚರ್ನೊಂದಿಗೆ 16ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿದೆ.

ಬ್ಯಾಟರಿ ಪವರ್
'ಒನ್‌ಪ್ಲಸ್ 7T ಪ್ರೊ' ಸ್ಮಾರ್ಟ್‌ಫೋನ್ 4085mAh ಸಾಮರ್ಥ್ಯದ ಬ್ಯಾಟರಿ ಲೈಫ್ ಅನ್ನು ಪಡೆದಿದ್ದು, 30W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಇದರೊಂದಿಗೆ ವೈಫೈ, ಬ್ಲೂಟೂತ್ 5, ಜಿಪಿಎಸ್, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ, ಯುಎಸ್‌ಬಿ 3.1 ಪ್ರೊಟೊಕಾಲ್, ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳನ್ನು ಸಹ ಪಡೆದಿದೆ.


Click it and Unblock the Notifications








