ಒನ್‌ಪ್ಲಸ್‌ 7T ಪ್ರೊ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ!

|

ಒನ್‌ಪ್ಲಸ್‌ ಸಂಸ್ಥೆಯು ಫ್ಲ್ಯಾಗ್‌ಶಿಪ್ ಮಾದರಿಯ ಸ್ಮಾರ್ಟ್‌ಫೋನ್ ಸರಣಿಗಳನ್ನು ಪರಿಚಯಿಸುವುದರ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಹಲವು ಹೈ ಎಂಡ್‌ ಫೀಚರ್ಸ್‌ಗಳೊಂದಿಗೆ ಸ್ಮಾರ್ಟ್‌ಫೋನ್ ಪ್ರಿಯರನ್ನು ಸೆಳೆದಿರುವ ಸಂಸ್ಥೆಯ ಒನ್‌ಪ್ಲಸ್‌ 7T ಪ್ರೊ ಸ್ಮಾರ್ಟ್‌ಫೋನ್ ಮಾರ್ಚ್‌ನಲ್ಲಿ ಭಾರಿ ಬೆಲೆ ಇಳಿಕೆ ಕಂಡಿತ್ತು. ಇದೀಗ ಈ ಸ್ಮಾರ್ಟ್‌ಫೋನ್‌ ಪ್ರೈಸ್‌ನಲ್ಲಿ ಮತ್ತೊಮ್ಮೆ ಇಳಿಕೆ ಆಗಿದೆ.

ಒನ್‌ಪ್ಲಸ್‌ 7T ಪ್ರೊ

ಹೌದು, ಒನ್‌ಪ್ಲಸ್‌ ಸಂಸ್ಥೆಯು ಒನ್‌ಪ್ಲಸ್‌ 7T ಪ್ರೊ ಸ್ಮಾರ್ಟ್‌ಫೋನ್ ಬೆಲೆಯಯಲ್ಲಿ ಈಗ 4000ರೂ ಕಡಿತ ಮಾಡಲಾಗಿದೆ. ಒನ್‌ಪ್ಲಸ್‌ 7T ಪ್ರೊ 8GB + 256GB ಸ್ಟೋರೇಜ್‌ ವೇರಿಯಂಟ್‌ ಮಾಡೆಲ್ 43,999ರೂ. ದರದಲ್ಲಿ ಲಭ್ಯವಾಗಲಿದೆ. ಮಾರ್ಚ್‌ನಲ್ಲಿ ಈ ಸ್ಮಾರ್ಟ್‌ಫೋನ್ ಬೆಲೆ ಇಳಿಕೆ ಆದಾಗ 47,999ರೂ.ಗಳ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿತ್ತು. ಇನ್ನು ಈ ಸ್ಮಾರ್ಟ್‌ಫೋನ್ 48ಎಂಪಿ ಸೆನ್ಸಾರ್ ಕ್ಯಾಮೆರಾವನ್ನು ಹೊಂದಿದೆ. ಇನ್ನುಳಿದಂತೆ ಒನ್‌ಪ್ಲಸ್‌ 7T ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಒನ್‌ಪ್ಲಸ್‌ 7T ಪ್ರೊ ಸ್ಮಾರ್ಟ್‌ಫೋನ್ 1,440 x 3,120 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ QHD ಫ್ಲ್ಯುಡ್‌ AMOLED ಡಿಸ್‌ಪ್ಲೇ ಪ್ಯಾನೆಲ್‌ ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.5:9 ಆಗಿದ್ದು, 90Hz ರೀಫ್ರೆಶ್‌ ರೇಟ್‌ ಹೊಂದಿದೆ. ಡಿಸ್‌ಪ್ಲೇಯು HDR10+ ಮತ್ತು DCI-P3 ಸೌಲಭ್ಯಗಳ ಸಪೋರ್ಟ್ ಪಡೆದುಕೊಂಡಿದೆ. ಡಿಸ್‌ಪ್ಲೇ ಅತ್ಯುತ್ತಮ ಪ್ರಖರತೆ ಹೊಂದಿದ್ದು, ಗೇಮಿಂಗ್‌ಗೆ ಮತ್ತು ವಿಡಿಯೊ ವೀಕ್ಷಣೆಗೆ ಉತ್ತಮ ಎನಿಸಿಲಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಒನ್‌ಪ್ಲಸ್‌ 7T ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855 ಪ್ಲಸ್‌ ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಇತ್ತೀಚಿನ ಹೊಸ ಆಂಡ್ರಾಯ್ಡ್ 10 ಆಕ್ಸಿಜನ್ ಓಎಸ್‌ ಬೆಂಬಲವನ್ನು ಹೊಂದಿದೆ. ಇದರೊಂದಿಗೆ ಅಡ್ರಿನೊ 640 GPU ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನಿನಲ್ಲಿ 8GB RAM ಸಾಮರ್ಥ್ಯದ ಜೊತೆಗೆ 256GB ಆಂತರಿಕ ಸಂಗ್ರಹ ಅವಕಾಶವನ್ನು ಕಾಣಬಹುದಾಗಿದೆ.

ವಿಶೇಷ ಕ್ಯಾಮೆರಾ

ವಿಶೇಷ ಕ್ಯಾಮೆರಾ

ಒನ್‌ಪ್ಲಸ್‌ 7T ಪ್ರೊ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದ್ದು, ಮುಖ್ಯ ಕ್ಯಾಮೆರಾವು f/1.6 ಅಪರ್ಚರ್ನೊಂದಿಗೆ OIS ಸಹಿತ 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು f/2.2 ಅಪರ್ಚರ್ನೊಂದಿಗೆ 16ಎಂಪಿ ಸೆನ್ಸಾರ್‌ ಹೊಂದಿದ್ದು, ತೃತೀಯ ಕ್ಯಾಮೆರಾವು f/2.4 ಅಪರ್ಚರ್ನೊಂದಿಗೆ 8ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು f/2.0 ಅಪರ್ಚರ್ನೊಂದಿಗೆ 16ಎಂಪಿ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

ಒನ್‌ಪ್ಲಸ್‌ 7T ಪ್ರೊ ಸ್ಮಾರ್ಟ್‌ಫೋನ್ 4085mAh ಸಾಮರ್ಥ್ಯದ ಬ್ಯಾಟರಿ ಲೈಫ್‌ ಅನ್ನು ಪಡೆದಿದ್ದು, 30W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಇದರೊಂದಿಗೆ ವೈಫೈ, ಬ್ಲೂಟೂತ್ 5, ಜಿಪಿಎಸ್‌, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್‌-ಸಿ, ಯುಎಸ್‌ಬಿ 3.1 ಪ್ರೊಟೊಕಾಲ್, ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳನ್ನು ಸಹ ಪಡೆದಿದೆ.

Best Mobiles in India

English summary
OnePlus 7T Pro price in India has been slashed by Rs. 4,000. The phone is listed for Rs. 43,999 on both Amazon.in and OnePlus.in sites.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X