ಮೇ 29ರಂದು ಒನ್‌ಪ್ಲಸ್ 8 ಸ್ಮಾರ್ಟ್‌ಫೋನ್ ಫ್ಲ್ಯಾಶ್ ಸೇಲ್!
ಒನ್‌ಪ್ಲಸ್ 7 ಸರಣಿಯ ನಂತರ ಒನ್‌ಪ್ಲಸ್ ಸಂಸ್ಥೆಯು ಬಿಡುಗಡೆ ಮಾಡಿರುವ ಒನ್‌ಪ್ಲಸ್ 8 ಸರಣಿ ಗ್ರಾಹಕರ ಗಮನ ಸೆಳೆದಿದೆ. ಒನ್‌ಪ್ಲಸ್ 8 ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್ ಭಾರತದಲ್ಲಿ ಈಗಾಗಲೇ ಒಮ್ಮೆ ಸೇಲ್ ನಡೆಸಿದ್ದು, ಇದೇ ಮೇ 29 ರಂದು ಇ-ಕಾಮರ್ಸ್ ತಾಣ ಅಮೆಜಾನ್‌ನಲ್ಲಿ ಎರಡನೇ ಬಾರಿ ಸೇಲ್ ನಡೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಎರಡು ವೇರಿಯಂಟ್ ಮಾದರಿಗಳನ್ನು ಹೊಂದಿದೆ.

ಹೌದು, ಇದೇ ಮೇ.29ರಂದು ಅಮೆಜಾನ್‌ನಲ್ಲಿ ಒನ್‌ಪ್ಲಸ್ 8 5G ಫೋನಿನ ಎರಡನೇ ಫ್ಲ್ಯಾಶ್ ಸೇಲ್ ನಡೆಯಲಿದೆ. ಗ್ರಾಹಕರು ಎಸ್‌ಬಿಐ ಕಾರ್ಡ್ ಮೂಲಕ ಫೋನ್ ಖರೀದಿಸಿದರೇ ಸುಮಾರು 3,000ರೂ. ರಿಯಾಯಿತಿ ಲಭ್ಯವಾಗಲಿದೆ ಎಂದು ಅಮೆಜಾನ್ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಇನ್ನು ಈ ಒನ್‌ಪ್ಲಸ್ 8 ಸ್ಮಾರ್ಟ್‌ಫೋನ್ 48ಎಂಪಿ ಸೆನ್ಸಾರ್, ಬ್ಯಾಟರಿ, ವೇಗದ ಪ್ರೊಸೆಸರ್‌ಗಳೊಂದಿಗೆ ಹಲವು ಅಪ್‌ಡೇಟ್ ಫೀಚರ್ಸ್‌ಗಳಿಂದ ನೆಕ್ಸ್ಟ್ ಜನರೇಶನ್ ಫೋನ್ ಎಂದು ಬಿಂಬಿತವಾಗಿದೆ. ಇನ್ನುಳಿದ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ
ಒನ್‌ಪ್ಲಸ್ 8 ಸ್ಮಾರ್ಟ್‌ಫೋನ್ 6.55 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್ ಸಹ ಪಡೆದುಕೊಂಡಿದೆ. ಜೊತೆಗೆ 3D ಗೊರಿಲ್ಲಾ ಗ್ಲಾಸ್ ರಕ್ಷಣೆಯನ್ನು ಒಳಗೊಂಡಿದ್ದು, 90Hz ಸ್ಕ್ರೀನ್ ರೀಫ್ರೇಶ್ ರೇಟ್ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಒನ್‌ಪ್ಲಸ್ 8 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್ ಹೊಂದಿದ್ದು, ಜೊತೆಗೆ Adreno 650 GPU ಹೊಂದಿದೆ. ಪ್ರೊಸೆಸರ್‌ಗೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಇದೆ. ಹಾಗೆಯೇ ಈ ಫೋನ್ 8GB/12GB RAM ಮತ್ತು 128GB/256GB ಸ್ಟೋರೇಜ್‌ನ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.

ತ್ರಿವಳಿ ಕ್ಯಾಮೆರಾ
ಒನ್‌ಪ್ಲಸ್ 8 ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 16ಎಂಪಿ ಹಾಗೂ ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಆಕರ್ಷಕ ಎಡಿಟಿಂಗ್ ಫೀಚರ್ಸ್‌ಗಳು ಇವೆ.

ಬ್ಯಾಟರಿ ಲೈಫ್
ಒನ್‌ಪ್ಲಸ್ 8 ಸ್ಮಾರ್ಟ್‌ಫೋನ್ 4,300mAh ಬ್ಯಾಟರಿ ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದರೊಂದಿಗೆ 30W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಜಿಪಿಎಸ್, ಬ್ಲೂಟೂತ್, ವೈಫೈ, IP68 ವಾಟರ್‌ಪ್ರೂಫ್ ರಚನೆ, ಫಿಂಗರ್‌ಪ್ರಿಂಟ್ ಸೆನ್ಸಾರ್, ಡಾಲ್ಬಿ ಸೌಂಡ್ ಸೌಲಭ್ಯ ಸೇರಿದಂದೆ ಇತ್ತೀಚಿಗಿನ ಅಗತ್ಯ ಸೌಲಭ್ಯಗಳು ಸೇರಿವೆ.

ಬೆಲೆ ಮತ್ತು ಲಭ್ಯತೆ
ಅಮೆಜಾನ್‌ನಲ್ಲಿ ಇದೇ ಮೇ. 29ರಂದು ಒನ್‌ಪ್ಲಸ್ 8 ಸ್ಮಾರ್ಟ್‌ಫೋನ್ ಸೇಲ್ ನಡೆಯಲಿದೆ. 8GB/12GB RAM ಸ್ಟೋರೇಜ್ ವೇರಿಯಂಟ್ ಹಾಗೂ 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಭಾರತದಲ್ಲಿ ಆರಂಭಿಕ ಬೆಲೆಯು 41,999ರೂ. ಎನ್ನಲಾಗಿದೆ.


Click it and Unblock the Notifications








