ಭಾರತದಲ್ಲಿ ಒನ್‌ಪ್ಲಸ್ 8 ಮತ್ತು ಒನ್‌ಪ್ಲಸ್ 8 ಪ್ರೊ ಪ್ರೀ-ಆರ್ಡರ್ ಆರಂಭ!

|

ಇತ್ತೀಚಿಗೆ ಬಿಡುಗಡೆ ಆಗಿರುವ ಹೊಸ ಒನ್‌ಪ್ಲಸ್‌ 8 ಸ್ಮಾರ್ಟ್‌ಫೋನ್ ಸರಣಿಯು ಈಗಾಗಲೆ ಗ್ರಾಹಕರ ಗಮನ ಸೆಳೆದಿದ್ದು, ಈ ಸರಣಿಯು ಒನ್‌ಪ್ಲಸ್‌ 8 ಮತ್ತು ಒನ್‌ಪ್ಲಸ್‌ 8 ಪ್ರೊ ಮಾದರಿಗಳನ್ನು ಹೊಂದಿದೆ. ಈ ಫ್ಲ್ಯಾಗ್‌ಶಿಪ್‌ ಸ್ಮಾರ್ಟ್‌ಫೋನ್‌ಗಳ ಖರೀದಿಗಾಗಿ ಎದುರುನೋಡುತ್ತಿರುವ ಗ್ರಾಹಕರಿಗೆ ಈಗ ಸಿಹಿಸುದ್ದಿ ಲಭ್ಯವಾಗಿದೆ. ದೇಶದಲ್ಲಿ ಒನ್‌ಪ್ಲಸ್‌ 8 ಸರಣಿಯ ಫೋನ್‌ಗಳ ಪ್ರೀ ಆರ್ಡರ್ ಆರಂಭವಾಗಿದೆ.

ಹೌದು

ಹೌದು, ಇ-ಕಾಮರ್ಸ್ ದೈತ್ಯ ಅಮೆಜಾನ್‌ನಲ್ಲಿ ಏಪ್ರಿಲ್ 28ರಿಂದ ಒನ್‌ಪ್ಲಸ್ 8 ಮತ್ತು ಒನ್‌ಪ್ಲಸ್ 8 ಪ್ರೊ ಫೋನ್‌ಗಳ ಪ್ರೀ ಆರ್ಡರ್ ಶುರುವಾಗಿದೆ, ಇನ್ನು ಇದೇ ಮೇ 11ರಂದು ಖರೀದಿಗೆ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಸದ್ಯ ಲಾಕ್‌ಡೌನ್ ಜಾರಿಯಲ್ಲಿದ್ದು, ಮೇ 3ರ ಬಳಿಕ ಲಾಕ್‌ಡೌನ್ ಮುಂದುವರಿವುವ ಬಗ್ಗೆ ಮಾಹಿತಿ ಇಲ್ಲ. ಹೀಗಾಗಿ ಮೇ 3ರ ನಂತರ ಮೊಬೈಲ್ ಮಾರಾಟಕ್ಕೆ ಅನುಮತಿ ದೊರೆಯುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಒನ್‌ಪ್ಲಸ್‌ 8 ಫೋನ್‌ ಸರಣಿಯ ಫೀಚರ್ಸ್‌ಗಳು ಹೇಗಿವೆ ಮತ್ತು ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯಿರಿ.

ಒನ್‌ಪ್ಲಸ್ 8 ಫೋನ್‌ಗಳ ಬೆಲೆ

ಒನ್‌ಪ್ಲಸ್ 8 ಫೋನ್‌ಗಳ ಬೆಲೆ

* 6 GB RAM ಮತ್ತು 128 GB ಮೆಮೊರಿ ಹೊಂದಿರುವ ಒನ್‌ಪ್ಲಸ್ 8 ಸ್ಮಾರ್ಟ್‌ಫೋನ್‌ನ ಬೆಲೆ 41,999ರೂ. ಆಗಿದೆ.
* 8 GB RAM ಮತ್ತು 256 GB ಮೆಮೊರಿ ಹೊಂದಿರುವ ಒನ್‌ಪ್ಲಸ್ 8 ಸ್ಮಾರ್ಟ್‌ಫೋನ್ ಬೆಲೆ 44,998ರೂ. ಆಗಿದೆ.
* 12 GB RAM ಮತ್ತು 256 GB ಮೆಮೊರಿ ಹೊಂದಿರುವ ಒನ್‌ಪ್ಲಸ್ 8 ಸ್ಮಾರ್ಟ್‌ಫೋನ್ ಬೆಲೆ 49,999ರೂ.ಆಗಿದೆ.
* 8 GB RAM ಮತ್ತು 128 GB ಮೆಮೊರಿ ಹೊಂದಿರುವ ಒನ್‌ಪ್ಲಸ್ 8 ಪ್ರೊ ಸ್ಮಾರ್ಟ್‌ಫೋನ್‌ನ ಬೆಲೆ 54,999ರೂ. ಆಗಿದೆ.
* 12 GB RAM ಮತ್ತು 256 GB ಮೆಮೊರಿ ಹೊಂದಿರುವ ಒನ್‌ಪ್ಲಸ್ 8 ಪ್ರೊ ಸ್ಮಾರ್ಟ್‌ಫೋನ್‌ನ ಬೆಲೆ 59,999ರೂ. ಆಗಿದೆ.

ಒನ್‌ಪ್ಲಸ್‌ 8-ಡಿಸ್‌ಪ್ಲೇ

ಒನ್‌ಪ್ಲಸ್‌ 8-ಡಿಸ್‌ಪ್ಲೇ

ಒನ್‌ಪ್ಲಸ್‌ 8 ಸ್ಮಾರ್ಟ್‌ಫೋನ್ 6.55 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಸಹ ಪಡೆದುಕೊಂಡಿದೆ. ಜೊತೆಗೆ 3D ಗೊರಿಲ್ಲಾ ಗ್ಲಾಸ್‌ ರಕ್ಷಣೆಯನ್ನು ಒಳಗೊಂಡಿದ್ದು, 90Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ.

ಒನ್‌ಪ್ಲಸ್‌ 8 ಪ್ರೊ- ಡಿಸ್‌ಪ್ಲೇ

ಒನ್‌ಪ್ಲಸ್‌ 8 ಪ್ರೊ- ಡಿಸ್‌ಪ್ಲೇ

ಒನ್‌ಪ್ಲಸ್‌ 8 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 19.8:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಜೊತೆಗೆ QHD+ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಇನ್ನು ಈ ಫೋನ್ 120Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ.

ಒನ್‌ಪ್ಲಸ್‌ 8- ಪ್ರೊಸೆಸರ್

ಒನ್‌ಪ್ಲಸ್‌ 8- ಪ್ರೊಸೆಸರ್

ಒನ್‌ಪ್ಲಸ್‌ 8 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 865 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ Adreno 650 GPU ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಪ್ರೊಸೆಸರ್‌ ಆಂಡ್ರಾಯ್ಡ್‌ 10 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಮೂರು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 6GB+128GB, 8GB/12GB RAM ಮತ್ತು 128GB/256GB ಆಗಿವೆ.

ಒನ್‌ಪ್ಲಸ್‌ 8 ಪ್ರೊ- ಪ್ರೊಸೆಸರ್

ಒನ್‌ಪ್ಲಸ್‌ 8 ಪ್ರೊ- ಪ್ರೊಸೆಸರ್

ಒನ್‌ಪ್ಲಸ್‌ 8 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 865 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ Adreno 650 GPU ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಪ್ರೊಸೆಸರ್‌ ಆಂಡ್ರಾಯ್ಡ್‌ 10 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB/12GB RAM ಮತ್ತು 128GB/256GB ಆಗಿವೆ.

ಒನ್‌ಪ್ಲಸ್‌ 8- ಕ್ಯಾಮೆರಾ

ಒನ್‌ಪ್ಲಸ್‌ 8- ಕ್ಯಾಮೆರಾ

ಒನ್‌ಪ್ಲಸ್‌ 8 ಸ್ಮಾರ್ಟ್‌ಫೋನ್‌ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 16ಎಂಪಿ ಹಾಗೂ ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಒನ್‌ಪ್ಲಸ್‌ 8 ಪ್ರೊ- ಕ್ಯಾಮೆರಾ

ಒನ್‌ಪ್ಲಸ್‌ 8 ಪ್ರೊ- ಕ್ಯಾಮೆರಾ

ಒನ್‌ಪ್ಲಸ್‌ 8 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ ಹಾಗೂ ಸೆಕೆಂಡರಿ ಕ್ಯಾಮೆರಾ ಎರಡು 48ಎಂಪಿ ಸೆನ್ಸಾರ್ನಲ್ಲಿವೆ. ಹಾಗೆಯೇ ಇನ್ನುಳಿದೆರಡು ಕ್ಯಾಮೆರಾಗಳು 8ಎಂಪಿ ಮತ್ತು 5ಎಂಪಿ ಸೆನ್ಸಾರ್ ಪಡೆದಿವೆ. ಈ ಫೋನ್ ಸಹ ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಪಡೆದಿದೆ.

ಒನ್‌ಪ್ಲಸ್‌ 8 - ಬ್ಯಾಟರಿ

ಒನ್‌ಪ್ಲಸ್‌ 8 - ಬ್ಯಾಟರಿ

ಒನ್‌ಪ್ಲಸ್‌ 8 ಸ್ಮಾರ್ಟ್‌ಫೋನ್‌ 4,300mAh ಬ್ಯಾಟರಿ ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದರೊಂದಿಗೆ 30W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೂ ಇತ್ತೀಚಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಪಡೆದಿದೆ.

ಒನ್‌ಪ್ಲಸ್‌ 8 ಪ್ರೊ- ಬ್ಯಾಟರಿ

ಒನ್‌ಪ್ಲಸ್‌ 8 ಪ್ರೊ- ಬ್ಯಾಟರಿ

ಒನ್‌ಪ್ಲಸ್‌ 8 ಪ್ರೊ ಸ್ಮಾರ್ಟ್‌ಫೋನ್ 4,510mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಈ ಫೋನ್ ಸಹ 30W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೂ ಇತ್ತೀಚಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಪಡೆದಿದೆ.

Best Mobiles in India

English summary
OnePlus 8 series recently made its entry and the new OnePlus devices are now up for pre-orders in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X