Home
ಸುದ್ದಿಜಾಲ

ಅಮೆಜಾನ್‌ನಲ್ಲಿ ಇಂದು ಮತ್ತೆ ಒನ್‌ಪ್ಲಸ್‌ 8 ಪ್ರೊ ಫೋನಿನ ಫ್ಲ್ಯಾಶ್‌ ಸೇಲ್‌!

ಒನ್‌ಪ್ಲಸ್‌ ಸಂಸ್ಥೆಯ ಇತ್ತೀಚಿನ ನೂತನ ಸ್ಮಾರ್ಟ್‌ಫೋನ್ ಸರಣಿ 'ಒನ್‌ಪ್ಲಸ್‌ 8 ಪ್ರೊ' ಈಗಾಗಲೇ ಫ್ಲ್ಯಾಶ್‌ ಸೇಲ್‌ ನಡೆಸಿದೆ. ಒನ್‌ಪ್ಲಸ್‌ 8 ಪ್ರೊ ಸ್ಮಾರ್ಟ್‌ಫೋನ್ ಇಂದು (ಜು.13) ಮಧ್ಯಾಹ್ನ 12ಕ್ಕ ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಕಂಪನಿಯ ವೆಬ್‌ಸೈಟ್‌ ಮೂಲಕ ಮತ್ತೆ ಫ್ಲ್ಯಾಶ್‌ ಸೇಲ್ ನಡೆಸಲಿದೆ. ಇನ್ನು ಒನ್‌ಪ್ಲಸ್‌ 8 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ ಹಾಗೂ ಸೆಕೆಂಡರಿ ಕ್ಯಾಮೆರಾ ಎರಡು 48ಎಂಪಿ ಸೆನ್ಸಾರ್ ಪಡೆದಿವೆ.

ಒನ್‌ಪ್ಲಸ್‌ 8 ಪ್ರೊ

ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 8 ಪ್ರೊ ಸ್ಮಾರ್ಟ್‌ಫೋನ್ ಫ್ಲ್ಯಾಶ್‌ ಸೇಲ್ ಇಂದು ಮತ್ತೆ ನಡೆಯಲಿದೆ. ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 54,999ರೂ.ಗಳಾಗಿದ್ದು, ಜಿಯೋ ಗ್ರಾಹಕರಿಗೆ 6,000ರೂ. ವರೆಗೂ ಬೇನಿಫಿಟ್ಸ್‌ ಲಭ್ಯವಾಗಲಿವೆ. ಹಾಗೆಯೇ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆಯು ದೊರೆಯಲಿದೆ. ಸ್ನ್ಯಾಪ್‌ಡ್ರಾಗನ್‌ 865 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನುಳಿದ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಒನ್‌ಪ್ಲಸ್‌ 8 ಪ್ರೊ- ಡಿಸ್‌ಪ್ಲೇ

ಒನ್‌ಪ್ಲಸ್‌ 8 ಪ್ರೊ- ಡಿಸ್‌ಪ್ಲೇ

ಒನ್‌ಪ್ಲಸ್‌ 8 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 19.8:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಜೊತೆಗೆ QHD+ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಇನ್ನು ಈ ಫೋನ್ 120Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ.

ಒನ್‌ಪ್ಲಸ್‌ 8 ಪ್ರೊ- ಪ್ರೊಸೆಸರ್

ಒನ್‌ಪ್ಲಸ್‌ 8 ಪ್ರೊ- ಪ್ರೊಸೆಸರ್

ಒನ್‌ಪ್ಲಸ್‌ 8 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 865 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ Adreno 650 GPU ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಪ್ರೊಸೆಸರ್‌ ಆಂಡ್ರಾಯ್ಡ್‌ 10 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB/12GB RAM ಮತ್ತು 128GB/256GB ಆಗಿವೆ.

ಒನ್‌ಪ್ಲಸ್‌ 8 ಪ್ರೊ- ಕ್ಯಾಮೆರಾ

ಒನ್‌ಪ್ಲಸ್‌ 8 ಪ್ರೊ- ಕ್ಯಾಮೆರಾ

ಒನ್‌ಪ್ಲಸ್‌ 8 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ ಹಾಗೂ ಸೆಕೆಂಡರಿ ಕ್ಯಾಮೆರಾ ಎರಡು 48ಎಂಪಿ ಸೆನ್ಸಾರ್ನಲ್ಲಿವೆ. ಹಾಗೆಯೇ ಇನ್ನುಳಿದೆರಡು ಕ್ಯಾಮೆರಾಗಳು 8ಎಂಪಿ ಮತ್ತು 5ಎಂಪಿ ಸೆನ್ಸಾರ್ ಪಡೆದಿವೆ. ಈ ಫೋನ್ ಸಹ ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಪಡೆದಿದೆ.

ಒನ್‌ಪ್ಲಸ್‌ 8 ಪ್ರೊ- ಬ್ಯಾಟರಿ

ಒನ್‌ಪ್ಲಸ್‌ 8 ಪ್ರೊ- ಬ್ಯಾಟರಿ

ಒನ್‌ಪ್ಲಸ್‌ 8 ಪ್ರೊ ಸ್ಮಾರ್ಟ್‌ಫೋನ್ 4,510mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಈ ಫೋನ್ ಸಹ 30W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೂ ಇತ್ತೀಚಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಪಡೆದಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

8GB+128GB ವೇರಿಯಂಟ್‌ನ ಒನ್‌ಪ್ಲಸ್‌ 8 ಪ್ರೊ ಫೋನಿನ ಆರಂಭಿಕ ಬೆಲೆಯು 54,999ರೂ. ಆಗಿದ್ದು, 12GB+256GB ವೇರಿಯಂಟ್ ಬೆಲೆಯು 59,999ರೂ. ಆಗಿದೆ.

Best Mobiles in India

English summary
The OnePlus 8 Pro will go on flash sale in India today at 12:00PM. The sale will begin on both Amazon India and the company’s official India website.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+