ಒನ್ ಪ್ಲಸ್ ಸಂಸ್ಥೆಯಿಂದ ಒನ್ ಪ್ಲಸ್ 8 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ!
ಒನ್‌ಪ್ಲಸ್ ಭಾರತದ ನಂಬರ್ ಒನ್ ಪ್ರಿಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಆಗಿ ಗುರುತಿಸಿಕೊಂಡಿದೆ. ತನ್ನ ವಿಶಿಷ್ಟ ಮಾದರಿಯ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿರುವ ಒನ್‌ಪ್ಲಸ್ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸದ್ಯ ಇದೀಗ ಒನ್‌ಪ್ಲಸ್ 8 ಮತ್ತು ಒನ್‌ಪ್ಲಸ್ 8 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಹೌದು, ಒನ್‌ಪ್ಲಸ್ ಕಂಪೆನಿ ತನ್ನ ಒನ್‌ಪ್ಲಸ್ 8 ಮತ್ತು ಒನ್‌ಪ್ಲಸ್ 8 ಪ್ರೊ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳಲ್ಲಿ ಒನ್‌ಪ್ಲಸ್ 8 ಮತ್ತು ಒನ್‌ಪ್ಲಸ್ 8 ಪ್ರೊ 5G ನೆಟ್‌ವರ್ಕ್ ಅನ್ನು ಬೆಂಬಲಿಸಲಿವೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ಗಳು ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿವೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಒಳಗೊಂಡಿವೆ. ಸದ್ಯ ಈ ಎರಡು ಸ್ಮಾರ್ಟ್‌ಫೋನ್‌ಗಳಲ್ಲಿ ಒನ್‌ಪ್ಲಸ್ 8 ಪ್ರೊ ಸ್ಮಾರ್ಟ್‌ಫೋನ್ ಒಳಗೊಂಡಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ
ಒನ್ ಪ್ಲಸ್ 8 ಪ್ರೊ ಸ್ಮಾರ್ಟ್‌ಫೋನ್ 1440x3168 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರುವ 6.78-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಕ್ಯೂಎಚ್‌ಡಿ + ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಜೊತೆಗೆ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು 19.8: 9 ರಚನೆಯ ಅನುಪಾತವನ್ನ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇಯ ರಕ್ಷಣೆಗಾಗಿ 3D ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಹೊಂದಿದೆ. ಇದು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 1300 ನಿಟ್‌ಗಳ ಗರಿಷ್ಠ ಬ್ರೈಟ್‌ನೆಶ್ ಅನ್ನು ಸಹ ಹೊಂದಿದೆ. ಜೊತೆಗೆ ಇದು 10-ಬಿಟ್ ಕಲರ್ ಪ್ಯಾನಲ್ ಮತ್ತು ಎಚ್‌ಡಿಆರ್ 10 + ರೇಟಿಂಗ್ ಅನ್ನು ಸಹ ಹೊಂದಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಅಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 8GB RAM, 12GB RAM ಮತ್ತು 128GB ಹಾಗೂ 256GB ಇಂಟರ್ ಸ್ಟೋರೇಜ್‌ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನ ಹೊಂದಿದೆ. ಆದರೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹಣ ಸಾಮರ್ಥ್ಯವನ್ನ ವಿಸ್ತರಿಸುವ ಆಯ್ಕೆಯನ್ನ ನಿಡಲಾಗಿಲ್ಲ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 689 ಸೆನ್ಸಾರ್ ಜೊತೆಗೆ f/ 1.78 ಲೆನ್ಸ್ ಹಾಗೂ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಬೆಂಬಲವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ f/ 2.44 ಟೆಲಿಫೋಟೋ ಲೆನ್ಸ್ ಮತ್ತು ಒಐಎಸ್ ಬೆಂಬಲವನ್ನು ಹೊಂದಿದೆ, ಮೂರನೇ ಕ್ಯಾಮೆರಾ ಕೂಡ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಇದು f/ 2.2 ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿರುತ್ತದೆ. ಇನ್ನು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ "ಕಲರ್ ಫಿಲ್ಟರ್" ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ, ಈ ಸ್ಮಾರ್ಟ್‌ಫೋನ್ 3x ಹೈಬ್ರಿಡ್ ಬೆಂಬಲವನ್ನು ಪಡೆದುಕೊಂಡಿದ್ದು, 4k ವಿಡಿಯೋ ರೆಕಾರ್ಡಿಂಗ್ ಅನ್ನು 30/60 ftsನಲ್ಲಿ ನೀಡುತ್ತದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 471 ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಒನ್ ಪ್ಲಸ್ 8 ಪ್ರೊ ಸ್ಮಾರ್ಟ್‌ಫೋನ್ 4,510mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಹೊರತುಪಡಿಸಿ, ವಾರ್ಪ್ ಚಾರ್ಜ್ 30 ಟಿ (5 v/ 6 a) ಮತ್ತು ವಾರ್ಪ್ ಚಾರ್ಜ್ 30 ವೈರ್‌ಲೆಸ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE , ವೈ-ಫೈ 6, ಬ್ಲೂಟೂತ್ ವಿ 5.1, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಫ್ಲಿಕರ್ ಡಿಟೆಕ್ಟ್ ಸೆನ್ಸಾರ್, ಫ್ರಂಟ್ ಆರ್ಜಿಬಿ ಸೆನ್ಸರ್, ಲೇಸರ್ ಸೆನ್ಸರ್, ಮ್ಯಾಗ್ನೆಟೋಮೀಟರ್ ಮತ್ತು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಒನ್‌ಪ್ಲಸ್ 8 ಪ್ರೊ ಸ್ಮಾರ್ಟ್‌ಫೋನ್ 8GB RAM + 128GB ಶೇಖರಣಾ ಆಯ್ಕೆಗೆ ಬೆಲೆ $899 (ಸುಮಾರು 68,400.ರೂ,) ಗೆ ನಿಗದಿಪಡಿಸಲಾಗಿದೆ, ಇನ್ನು 12GB RAM + 256GB ಶೇಖರಣಾ ಮಾದರಿಯ ಸ್ಮಾರ್ಟ್‌ಫೋನ್ $999 (ಅಂದಾಜು 76,000.ರೂ,) ಬೆಲೆಯನ್ನು ಹೊಂದಿದೆ. ಅಲ್ಲದೆ ಈ ಫೋನ್ ಗ್ಲೇಶಿಯಲ್ ಗ್ರೀನ್, ಓನಿಕ್ಸ್ ಬ್ಲ್ಯಾಕ್ ಮತ್ತು ಅಲ್ಟ್ರಾಮರೀನ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ. ಇದು ಯುಕೆಯಲ್ಲಿ ಏಪ್ರಿಲ್ 29 ರಿಂದ ಯುಎಸ್‌ನಲ್ಲಿ ಏಪ್ರಿಲ್ 21 ರಿಂದ ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications




