Home
ಸುದ್ದಿಜಾಲ

ಭರ್ಜರಿ ಬೆಲೆ ಇಳಿಕೆ ಕಂಡ ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್!

ಮೊಬೈಲ್ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಕಂಪನಿಯು ಫ್ಲ್ಯಾಗ್‌ಶಿಪ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಹೆಚ್ಚಾಗಿ ಗುರುತಿಸಿಕೊಂಡಿದೆ. ಅವುಗಳಲ್ಲಿ ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಒನ್‌ಪ್ಲಸ್‌ 8T ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿತ್ತು. ಕಂಪನಿಯು ಇದೀಗ ಒನ್‌ಪ್ಲಸ್‌ 8T ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದ್ದು, ಈ ಫೋನಿನತ್ತ ಮತ್ತೆ ಗ್ರಾಹಕರು ತಿರುಗಿ ನೋಡುವಂತಾಗಿದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 8T ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ 1000ರೂ. ಕಡಿತವಾಗಿದೆ. ಬೆಲೆ ಇಳಿಕೆಯಿಂದಾಗಿ 8GB + 128GB ಸ್ಟೋರೇಜ್ ವೇರಿಯಂಟ್ 38,999ರೂ.ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ 12GB + 256GB ಸ್ಟೋರೇಜ್‌ ವೇರಿಯಂಟ್‌ ಫೋನ್‌ 41,999ರೂ.ಗಳ ದರವನ್ನು ಹೊಂದಿದೆ. 2020ರಲ್ಲಿ ಈ ಫೋನ್ ಕ್ರಮವಾಗಿ 42,999ರೂ ಮತ್ತು 45,999ರೂ.ಗಳ ಬೆಲೆಯಲ್ಲಿ ಲಾಂಚ್ ಆಗಿದ್ದವು. ನಂತರದಲ್ಲಿ ಕ್ರಮವಾಗಿ 39,999ರೂ ಮತ್ತು 42,999ರೂ. ಬೆಲೆಯಲ್ಲಿ ಲಭ್ಯ ಇದ್ದವು. ಹಾಗಾದರೇ ಒನ್‌ಪ್ಲಸ್‌ 8T ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ವಿನ್ಯಾಸ

ಡಿಸ್‌ಪ್ಲೇ ರಚನೆ ವಿನ್ಯಾಸ

ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದ್ದು, 6.55-ಇಂಚಿನ ಫುಲ್‌ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 402ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಒನ್‌ಪ್ಲಸ್‌ 8T ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 12GB RAM ಮತ್ತು 256GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX586 ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಬ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಬ್ಯಗಳು

ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 65 ಡಬ್ಲ್ಯೂ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಬ್ಯಾಟರಿಯನ್ನು ಕೇವಲ 39 ನಿಮಿಷಗಳಲ್ಲಿ 100% ಮತ್ತು ಕೇವಲ 15 ನಿಮಿಷಗಳಲ್ಲಿ 58% ಚಾರ್ಜ್‌ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.1, ಜಿಪಿಎಸ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

Best Mobiles in India

English summary
The OnePlus 8T is now up for sale at its lowest ever price of Rs 38,999 in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+