ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಒನ್‌ಪ್ಲಸ್‌ 9 ಲೈಟ್‌ ಸ್ಮಾರ್ಟ್‌ಫೋನ್‌ !

|

ಒನ್‌ಪ್ಲಸ್‌ ಕಂಪೆನಿ ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಬ್ರಾಂಡ್‌ಗಳಲ್ಲಿ ಒಂದಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಒನ್‌ಪ್ಲಸ್‌ ಇದೀಗ ತನ್ನ ಹೊಸ ಒನ್‌ಪ್ಲಸ್ 9 ಲೈಟ್ ಭಾರತದಲ್ಲಿ ಪರಿಚಯಿಸಲು ಮುಂದಾಗಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ವಿಭಿನ್ನ ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಇನ್ನು ಒನ್‌ಪ್ಲಸ್ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಒನ್‌ಪ್ಲಸ್ 9 ಸರಣಿಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಕಂಪೆನಿ ತನ್ನ ಒನ್‌ಪ್ಲಸ್ 9 ಲೈಟ್ ಸ್ಮಾರ್ಟ್‌ಫೋನ್‌ ಅನ್ನು ಸದ್ಯದಲ್ಲೇ ಬಿಡುಗಡೆ ಮಾಡಲಿದೆ. ಈ ಸ್ಮಾರ್ಟ್‌ಫೋನ್‌ ಒನ್‌ಪ್ಲಸ್‌ 9 ಸರಣಿಯಲ್ಲಿ ಹೊಸ ಮಾದರಿಯಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ. ಜೊತೆಗೆ ಇದು ಈ ಹಿಂದಿನ ಜನ್ ಪ್ರಮುಖ SoC ಯ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 865 ನಲ್ಲಿ ಇದು ಕಾರ್ಯನಿರ್ವಹಿಸುತ್ತದೆ ಎಂದು ವರದಿ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಹಾಗಾದ್ರೆ ಲೀಕ್‌ ಮಾಹಿತಿ ಈ ಸ್ಮಾರ್ಟ್‌ಫೋನ್‌ ಹೊಂದಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಒನ್‌ಪ್ಲಸ್‌ 9 ಲೈಟ್‌ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.65 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಹೊಂದಿರುವ Amoled ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 865 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 6GB RAM+128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಒನ್‌ಪ್ಲಸ್ 9 ಲೈಟ್‌ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒನ್‌ಪ್ಲಸ್‌ 9 ಲೈಟ್‌ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 30W ವೇಗದ ಚಾರ್ಜಿಂಗ್ ಬೆಂಬಲವನ್ನು ಸಹ ಒಳಗೊಂಡಿರಬಹುದು ಎಂದು ನಿರೀಕ್ಷಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒನ್‌ಪ್ಲಸ್ 9 ಲೈಟ್ ಸ್ಮಾರ್ಟ್‌ಫೋನ್‌ ಬೆಲೆ ಸುಮಾರು $ 600 (ಅ0ದಾಜು 43,800 ರೂ.) ಬೆಲೆಯನ್ನು ಹೊಂದಬಹುದು ಎಂದು ನಿರೀಕ್ಷಿಸಲಾಗಿದೆ.

Best Mobiles in India

English summary
OnePlus 9 Lite is set to launch in India in two distinct variants.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X