ಭಾರತದಲ್ಲಿ ಇಂದು ಒನ್‌ಪ್ಲಸ್‌ 9 ಮತ್ತು ಒನ್‌ಪ್ಲಸ್ 9R ಫೋನ್‌ಗಳ ಫಸ್ಟ್‌ ಸೇಲ್‌!

|

ಒನ್‌ಪ್ಲಸ್‌ ಸಂಸ್ಥೆಯ ಇತ್ತೀಚಿನ ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಆಗಿರುವ ಒನ್‌ಪ್ಲಸ್‌ 9 ಮತ್ತು ಒನ್‌ಪ್ಲಸ್ 9R ಫೋನ್‌ಗಳು ಈಗಾಗಾಲೇ ಸ್ಮಾರ್ಟ್‌ ಪ್ರಿಯರನ್ನು ಆಕರ್ಷಿಸಿದೆ. ಒನ್‌ಪ್ಲಸ್‌ 9 ಮತ್ತು ಒನ್‌ಪ್ಲಸ್ 9R ಈ ಎರಡು ಸ್ಮಾರ್ಟ್‌ಫೋನ್‌ಗಳು ಇಂದು ಮೊದಲ ಸೇಲ್ ನಡೆಸಲಿದ್ದು, ಅಮೆಜಾನ್ ಪ್ರೈಮ್ ಸದಸ್ಯರಿಗೆ ಮತ್ತು ಒನ್‌ಪ್ಲಸ್ ರೆಡ್ ಕೇಬಲ್ ಕ್ಲಬ್ ಸದಸ್ಯರಿಗೆ ಖರೀದಿಗೆ ಲಭ್ಯವಾಗಲಿವೆ.

ಒನ್‌ಪ್ಲಸ್

ಹೌದು, ಜನಪ್ರಿಯ ಒನ್‌ಪ್ಲಸ್‌ 9 ಮತ್ತು ಒನ್‌ಪ್ಲಸ್ 9R ಫೋನ್‌ಗಳ ಮೊದಲ ಮಾರಾಟ ಇಂದು ಶುರುವಾಗಲಿದೆ. ಒನ್‌ಪ್ಲಸ್ 9 ಮತ್ತು ಒನ್‌ಪ್ಲಸ್ 9R ಎರಡೂ ಫೋನ್‌ಗಳು ಅಮೆಜಾನ್ ಪ್ರೈಮ್ ಸದಸ್ಯರಿಗೆ ಇಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಅಮೆಜಾನ್ ಮೂಲಕ ಖರೀದಿಸಲು ಲಭ್ಯವಿರುತ್ತದೆ. ಇತರೆ ಗ್ರಾಹಕರಿಗೆ ಏಪ್ರಿಲ್ 15 ರಿಂದ ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಫೋನ್ ಖರೀದಿಸಲು ಸಾಧ್ಯವಾಗುತ್ತದೆ. ಅಂತೆಯೇ, ರೆಡ್ ಕೇಬಲ್ ಕ್ಲಬ್ ಸದಸ್ಯರು ಎರಡು ಫೋನ್‌ಗಳನ್ನು ಒನ್‌ಪ್ಲಸ್ ವೆಬ್‌ಸೈಟ್ ಅಥವಾ ಒನ್‌ಪ್ಲಸ್ ಸ್ಟೋರ್ ಅಪ್ಲಿಕೇಶನ್‌ನಿಂದ ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಖರೀದಿಸಲು ಸಾಧ್ಯವಾಗುತ್ತದೆ. ಇನ್ನು ಒನ್‌ಪ್ಲಸ್‌ 9 ಫೋನಿನ ಬೇಸ್ ವೇರಿಯಂಟ್ 8GB RAM + 128GB ಬೆಲೆಯು 49,999ರೂ. ಆಗಿದೆ. ಹಾಗೆಯೇ ಒನ್‌ಪ್ಲಸ್ 9R ಫೋನಿನ 8GB RAM ಮಾಡೆಲ್‌ ವೇರಿಯಂಟ್‌ 39,999ರೂ.ಗಳಿಗೆ ಲಭ್ಯವಾಗಲಿದೆ. ಇನ್ನುಳಿದಂತೆ ಈ ಎರಡು ಫೋನ್‌ಗಳ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಒನ್‌ಪ್ಲಸ್‌ 9 ಡಿಸ್‌ಪ್ಲೇ

ಒನ್‌ಪ್ಲಸ್‌ 9 ಡಿಸ್‌ಪ್ಲೇ

ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.55 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಸಹ ಪಡೆದುಕೊಂಡಿದೆ. ಜೊತೆಗೆ 3D ಗೊರಿಲ್ಲಾ ಗ್ಲಾಸ್‌ ರಕ್ಷಣೆಯನ್ನು ಒಳಗೊಂಡಿದ್ದು, 120Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ.

ಒನ್‌ಪ್ಲಸ್‌ 9 ಪ್ರೊಸೆಸರ್

ಒನ್‌ಪ್ಲಸ್‌ 9 ಪ್ರೊಸೆಸರ್

ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB/12GB RAM ಮತ್ತು 128GB/256GB ಆಗಿವೆ.

ಒನ್‌ಪ್ಲಸ್‌ 9 ಕ್ಯಾಮೆರಾ

ಒನ್‌ಪ್ಲಸ್‌ 9 ಕ್ಯಾಮೆರಾ

ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಒನ್‌ಪ್ಲಸ್‌ 9 - ಬ್ಯಾಟರಿ

ಒನ್‌ಪ್ಲಸ್‌ 9 - ಬ್ಯಾಟರಿ

ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಸಹ 65T Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೂ ಇತ್ತೀಚಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಪಡೆದಿದೆ.ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್ / ಎ-ಜಿಪಿಎಸ್, ಎನ್ಎಫ್ಸಿ, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ. ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್, ಲೇಸರ್ ಸೆನ್ಸರ್ ಸೇರಿವೆ.

ಒನ್‌ಪ್ಲಸ್‌ 9R ಫೋನ್

ಒನ್‌ಪ್ಲಸ್‌ 9R ಫೋನ್

ಒನ್‌ಪ್ಲಸ್ 9 R ಸ್ಮಾರ್ಟ್‌ಫೋನ್‌ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪ್ಲಾಟ್‌ ಪ್ಲೂಯಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಆಪರೇಟಿಂಗ್‌ ಸಿಸ್ಟಮ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+128GB, 12GB RAM+256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಸೆನ್ಸಾರ್‌

ಒನ್‌ಪ್ಲಸ್‌ 9R ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್‌, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ವಾರ್ಪ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಒನ್‌ಪ್ಲಸ್‌ 9 ಸರಣಿಯಲ್ಲಿ ಒನ್‌ಪ್ಲಸ್‌ 9, ಒನ್‌ಪ್ಲಸ್‌ 9 ಪ್ರೊ ಮತ್ತು ಒನ್‌ಪ್ಲಸ್‌ 9R ಫೋನ್ ಲಾಂಚ್ ಆಗಿವೆ. ಒನ್‌ಪ್ಲಸ್‌ 9 ಫೋನ್ 8GB + 128GB ವೇರಿಯಂಟ್‌ ಬೆಲೆಯು 49,999ರೂ. ಆಗಿದೆ. 12GB + 256GB ಸ್ಟೋರೇಜ್‌ ವೇರಿಯಂಟ್‌ ದರದವು 54,999ರೂ. ಆಗಿದೆ. ಅದೇ ರೀತಿ ಒನ್‌ಪ್ಲಸ್‌ 9 ಪ್ರೊ 8GB + 128GB ವೇರಿಯಂಟ್ ಬೆಲೆಯು 64,999ರೂ. ಆಗಿದೆ. 12GB + 256GB ವೇರಿಯಂಟ್ ಬೆಲೆಯು 69,999ರೂ. ಆಗಿದೆ. ಹಾಗೆಯೇ ಒನ್‌ಪ್ಲಸ್‌ 9R ಬೇಸ್‌ ವೇರಿಯಂಟ್‌ ದರವು 8GB + 128GB ವೇರಿಯಂಟ್ ದರವು 39,999ರೂ. ಆಗಿದೆ.

Best Mobiles in India

English summary
OnePlus 9 and the OnePlus 9R are all set to go on sale in India today at 12noon on Amazon.in and OnePlus India’s official website.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X