ಒನ್‌ಪ್ಲಸ್‌ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!

|

ಆನ್‌ಲೈನ್ ತಾಣಗಳು ಫೋನ್‌ಗಳಿಗೆ ಒಂದಿಲ್ಲೊಂದು ರಿಯಾಯಿತಿ ನೀಡುತ್ತವೆ. ಇ ಕಾಮರ್ಸ್‌ ತಾಣಗಳಲ್ಲಿ ಇದೀಗ ಒನ್‌ಪ್ಲಸ್‌ ಕಂಪನಿಯ ಕೆಲವಯ ಫೋನ್‌ಗಳಿಗೆ ಐಸಿಐಸಿಐ ಬ್ಯಾಂಕ್‌ ರಿಯಾಯಿತಿ ಲಭ್ಯ ಇವೆ. ಒನ್‌ಪ್ಲಸ್ 9, ಒನ್‌ಪ್ಲಸ್‌ 9 ಪ್ರೊ, ಮತ್ತು ಒನ್‌ಪ್ಲಸ್‌ ನಾರ್ಡ್‌ CE 5G ಫೋನ್‌ಗಳು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ. ಐಸಿಐಸಿಐ ಬ್ಯಾಂಕ್ ಗ್ರಾಹಕರಿಗೆ 8,000 ತ್ವರಿತ ರಿಯಾಯಿತಿ, ಹಾಗೆಯೇ ಒನ್‌ಪ್ಲಸ್‌ ನಾರ್ಡ್‌ CE 5G ಖರೀದಿಯ ಮೇಲೆ 1,500 ತ್ವರಿತ ರಿಯಾಯಿತಿ ಲಭ್ಯ.

ಒನ್‌ಪ್ಲಸ್‌ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!

ಹೌದು, ಒನ್‌ಪ್ಲಸ್ 9, ಒನ್‌ಪ್ಲಸ್‌ 9 ಪ್ರೊ, ಮತ್ತು ಒನ್‌ಪ್ಲಸ್‌ ನಾರ್ಡ್‌ CE 5G ಫೋನ್‌ಗಳಿಗೆ ಐಸಿಐಸಿಐ ಬ್ಯಾಂಕ್‌ನ ಕೊಡುಗೆ ಲಭ್ಯವಾಗಲಿದೆ. ಈ ಕೊಡುಗೆ ಒನ್‌ಪ್ಲಸ್‌.ಇನ್ (OnePlus.in) ನಲ್ಲಿ ಲೈವ್ ಆಗಿವೆ. ಹಾಗಾದರೇ ಈ ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ 9 ಡಿಸ್‌ಪ್ಲೇ
ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.55 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಸಹ ಪಡೆದುಕೊಂಡಿದೆ. ಜೊತೆಗೆ 3D ಗೊರಿಲ್ಲಾ ಗ್ಲಾಸ್‌ ರಕ್ಷಣೆಯನ್ನು ಒಳಗೊಂಡಿದ್ದು, 120Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ.

ಒನ್‌ಪ್ಲಸ್‌ 9 ಪ್ರೊ- ಡಿಸ್‌ಪ್ಲೇ
ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 1,440x3,216 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 19.8:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಜೊತೆಗೆ LTPO ತಂತ್ರಜ್ಞಾನ ಪಡೆದಿದೆ. ಇನ್ನು ಈ ಫೋನ್ 120Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ.

ಒನ್‌ಪ್ಲಸ್‌ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!

ಒನ್‌ಪ್ಲಸ್‌ 9 ಪ್ರೊಸೆಸರ್
ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB/12GB RAM ಮತ್ತು 128GB/256GB ಆಗಿವೆ.

ಒನ್‌ಪ್ಲಸ್‌ 9 ಪ್ರೊ- ಪ್ರೊಸೆಸರ್
ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB/12GB RAM ಮತ್ತು 128GB/256GB ಆಗಿವೆ.

ಒನ್‌ಪ್ಲಸ್‌ 9 ಕ್ಯಾಮೆರಾ
ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಒನ್‌ಪ್ಲಸ್‌ 9 ಪ್ರೊ- ಕ್ಯಾಮೆರಾ
ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್‌ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಒನ್‌ಪ್ಲಸ್‌ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!

ಒನ್‌ಪ್ಲಸ್‌ 9 - ಬ್ಯಾಟರಿ
ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಸಹ 65T Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೂ ಇತ್ತೀಚಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಪಡೆದಿದೆ.ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್ / ಎ-ಜಿಪಿಎಸ್, ಎನ್ಎಫ್ಸಿ, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ. ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್, ಲೇಸರ್ ಸೆನ್ಸರ್ ಸೇರಿವೆ.

ಒನ್‌ಪ್ಲಸ್‌ 9 ಪ್ರೊ- ಬ್ಯಾಟರಿ
ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಸಹ 65T Warp ಚಾರ್ಜ್‌ ಸಪೋರ್ಟ್‌ ಪಡೆದಿದೆ ಹಾಗೂ Warp ಚಾರ್ಜ್ 50w ಸಾಮರ್ಥ್ಯದ ವಾಯರ್‌ ಲೆಸ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೂ ಇತ್ತೀಚಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಪಡೆದಿದೆ.ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್ / ಎ-ಜಿಪಿಎಸ್, ಎನ್ಎಫ್ಸಿ, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ.

ಒನ್‌ಪ್ಲಸ್‌ ನಾರ್ಡ್ CE 5G ಫೀಚರ್ಸ್‌
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ತ ರಿಯಾಯಿತಿ ಲಭ್ಯ.

Best Mobiles in India

English summary
OnePlus 9 Pro, OnePlus 9, OnePlus Nord CE 5G Listed With ICICI Bank Discounts.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X