ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ!

|

ಮೊಬೈಲ್ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಕಂಪನಿಯು ಫ್ಲ್ಯಾಗ್‌ಶಿಪ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಹೆಚ್ಚಾಗಿ ಗುರುತಿಸಿಕೊಂಡಿದೆ. ಕಂಪನಿಯು ಇದೀಗ ನೂತನವಾಗಿ ಒನ್‌ಪ್ಲಸ್‌ 10 ಪ್ರೊ (OnePlus 10 Pro) ಬಿಡುಗಡೆ ಮಾಡಲು ಸಜ್ಜಾಗಿದೆ. ಆದ್ರೆ ಅದಕ್ಕೂ ಮುನ್ನವೇ ಒನ್‌ಪ್ಲಸ್‌ ಸಂಸ್ಥೆಯು ತನ್ನ ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿ ಗ್ರಾಹಕರಿಗೆ ಭರ್ಜರಿ ಖುಷಿ ಸುದ್ದಿ ನೀಡಿದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ ಈಗ 60,000 ರೂ. ಗಳ ಒಳಗೆ ಲಭ್ಯ. ಕಳೆದ ವರ್ಷ ಈ ಫೋನ್ 64,999ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಬಿಡುಗಡೆ ಆಗಿತ್ತು. ಆದ್ರೆ ಇದೀಗ 59,999ರೂ. ಬೆಲೆಯಲ್ಲಿ ಕಾಣಿಸಿದೆ. ಹಾಗೆಯೇ ಸಿಟಿ ಬ್ಯಾಂಕ್ ಕಾರ್ಡ್‌ ಮೂಲಕ ಖರೀದಿಸುವ ಗ್ರಾಹಕರಿಗೆ 10,000ರೂ. ಗಳ ವರೆಗೂ ತ್ವರಿತ ರಿಯಾಯಿತಿ ಸಿಗಲಿದೆ. ಇನ್ನು ಈ ಫೋನ್ 8GB/12GB RAM ಮತ್ತು 128GB/256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 1,440 x 3,216 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 19.8:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಜೊತೆಗೆ LTPO ತಂತ್ರಜ್ಞಾನ ಪಡೆದಿದೆ. ಇನ್ನು ಈ ಫೋನ್ 120Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ.

ಪ್ರೊಸೆಸರ್ ಬಲ ಯಾವುದು

ಪ್ರೊಸೆಸರ್ ಬಲ ಯಾವುದು

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB/12GB RAM ಮತ್ತು 128GB/256GB ಆಗಿವೆ.

ಕ್ಯಾಮೆರಾ ಸೆನ್ಸಾರ್ ಎಷ್ಟು?

ಕ್ಯಾಮೆರಾ ಸೆನ್ಸಾರ್ ಎಷ್ಟು?

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್‌ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಸಹ 65T Warp ಚಾರ್ಜ್‌ ಸಪೋರ್ಟ್‌ ಪಡೆದಿದೆ ಹಾಗೂ Warp ಚಾರ್ಜ್ 50w ಸಾಮರ್ಥ್ಯದ ವಾಯರ್‌ ಲೆಸ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೂ ಇತ್ತೀಚಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್ / ಎ-ಜಿಪಿಎಸ್, ಎನ್ಎಫ್ಸಿ, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಒನ್‌ಪ್ಲಸ್‌ 9 ಪ್ರೊ ಫೋನಿನ ಆರಂಭಿಕ 8GB/12GB RAM ಸ್ಟೋರೇಜ್‌ ವೇರಿಯಂಟ್ ಬೆಲೆ ಇಳಿಕೆಯ ಬಳಿಕ ಈಗ 59,999 ರೂ. ಆಗಿದೆ. ಇನ್ನು ಈ ಫೋನ್ ಪೈನ್ ಗ್ರೀನ್ ಮತ್ತು ಸ್ಟೆಲ್ಲಾರ್ ಬ್ಲ್ಯಾಕ್ ಆಯ್ಕೆ ಪಡೆದಿದೆ.

Best Mobiles in India

English summary
OnePlus 9 Pro Price Cut, ahead of OnePlus 10 Pro Launch; Should you buy it?

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X