Home
ಸುದ್ದಿಜಾಲ

ಇಂದು ಭಾರತಕ್ಕೆ ಎಂಟ್ರಿ ನೀಡಲಿದೆ ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್‌ ಸರಣಿ!

ಜನಪ್ರಿಯ ಒನ್‌ಪ್ಲಸ್‌ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ ಪರಿಚಯಿಸಿ ಗ್ರಾಹಕರ ಮನ ಗೆದ್ದಿದೆ. ಸದ್ಯ ಇದೀಗ ಒನ್‌ಪ್ಲಸ್ 9 ಸರಣಿಯನ್ನು ಭಾರತದಲ್ಲಿ ಇಂದು ಸಂಜೆ ಬಿಡುಗಡೆ ಮಾಡಲಿದೆ. ಇನ್ನು ಈ ಸರಣಿಯಲ್ಲಿ ಒನ್‌ಪ್ಲಸ್ 9, ಒನ್‌ಪ್ಲಸ್ 9 ಪ್ರೊ ಮತ್ತು ಒನ್‌ಪ್ಲಸ್ 9R ಅನ್ನು ಪರಿಚಯಿಸುತ್ತಿದೆ. ಇದರ ಜೊತೆಗೆ ವೆರಿಯಬಲ್‌ ಸ್ಮಾರ್ಟ್‌ವಾಚ್‌ ಅನ್ನು ಪರಿಚಯಿಸುತ್ತಿದೆ ಎಂದು ಹೇಳಲಾಗಿದೆ.

ಒನ್‌ಪ್ಲಸ್‌  9

ಹೌದು, ಒನ್‌ಪ್ಲಸ್‌ ಕಂಪೆನಿ ತನ್ನ ಒನ್‌ಪ್ಲಸ್‌ 9 ಸರಣಿಯನ್ನು ಇಂದು ಬಿಡುಗಡೆ ಮಾಡುತ್ತಿದೆ. ಇಂದು ಸಂಜೆ 7: 30 ಕ್ಕೆ ಈ ಸ್ಮಾರ್ಟ್‌ಫೋನ್‌ಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಇನ್ನು ನೀವು ಈ ಈವೆಂಟ್ ಅನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದಾಗಿದ್ದು, ಒನ್‌ಪ್ಲಸ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಇನ್ನು ಇದೀಗ ಬಿಡುಗಡೆ ಆಗುತ್ತಿರುವ ಈ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಬಹಿರಂಗವಾಗಿದ್ದು, ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್ 9

ಒನ್‌ಪ್ಲಸ್ 9

ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್‌ 6.55 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 8GB RAM+128GB, 12GB RAM ಮತ್ತು 258GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 16ಮೆಗಾಪಿಕ್ಸೆಲ್‌ ಸೆನ್ಸಾರ್‌ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಒನ್‌ಪ್ಲಸ್ 9 ಪ್ರೊ

ಒನ್‌ಪ್ಲಸ್ 9 ಪ್ರೊ

ಒನ್‌ಪ್ಲಸ್ 9 ಪ್ರೊ ಸ್ಮಾರ್ಟ್‌ಫೋನ್‌ 6.7-ಇಂಚಿನ ಕ್ಯೂಹೆಚ್‌ಡಿ + ಎಲ್‌ಟಿಪಿಒ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಡೈನಾಮಿಕ್ ರಿಫ್ರೆಶ್-ರೇಟ್‌ ಅನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಕ್ವಾಡ್-ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೋನಿ ಐಎಂಎಕ್ಸ್ 789, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಒನ್‌ಪ್ಲಸ್ 9 R

ಒನ್‌ಪ್ಲಸ್ 9 R

ಒನ್‌ಪ್ಲಸ್ 9 R ಸ್ಮಾರ್ಟ್‌ಫೋನ್‌ ಗೇಮಿಂಗ್ ಸ್ಮಾರ್ಟ್‌ಫೋನ್ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.65 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 ಅಥವಾ ಸ್ನಾಪ್‌ಡ್ರಾಗನ್ 860 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ಅನ್ನು ಹೊಂದಿದೆ. ಜೊತೆಗೆ ಇದು 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್‌ ಚಾರ್ಜಿಂಗ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 128GB ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ 49,999 ರೂ ಬೆಲೆ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಒನ್‌ಪ್ಲಸ್ 9 ಪ್ರೊ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 64,999 ರೂ ಹೊಂದಿರುವ ಸಾಧ್ಯತೆ ಇದೆ. ಒನ್‌ಪ್ಲಸ್‌ 9 R ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿರಲಿದೆ ಅನ್ನೊದರ ಬಗ್ಗೆ ಇನ್ನು ಯಾವುದೇ ಮಾಹಿತಿ ಇಲ್ಲ. ಇದು ಸ್ಟೆಲ್ಲಾರ್ ಬ್ಲ್ಯಾಕ್, ಮಾರ್ನಿಂಗ್ ಮಿಸ್ಟ್ ಮತ್ತು ಪೈನ್ ಗ್ರೀನ್ ನಂತಹ ಮೂರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
OnePlus 9 series global and India launch is set today.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+