ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ ಫೀಚರ್ಸ್ ಆನ್‌ಲೈನ್‌ನಲ್ಲಿ ಬಹಿರಂಗ!
ಭಾರತದಲ್ಲಿ ಒನ್‌ಪ್ಲಸ್ ಸಂಸ್ಥೆ ತನ್ನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಒನ್‌ಪ್ಲಸ್ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಅನ್ನು ಒನ್‌ಪ್ಲಸ್ 9 ಎಂದು ಹೆಸರಿಸಲಾಗಿದ್ದು, ಆನ್‌ಲೈನ್‌ನಲ್ಲಿ ಇದರ ವಿಶೇಷತೆ ಏನು ಅನ್ನೊದು ಬಹಿರಂಗವಾಗಿದೆ.

ಹೌದು, ಒನ್‌ಪ್ಲಸ್ ಸಂಸ್ಥೆ ತನ್ನ ಹೊಸ ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಇದು ಒನ್‌ಪ್ಲಸ್ 9 ಪ್ರೊ ಮತ್ತು ಒನ್‌ಪ್ಲಸ್ 9 ಲೈಟ್ ರೂಪಾಂತರಗಳ ಜೊತೆಗೆ ಒನ್‌ಪ್ಲಸ್ 9 ಸರಣಿಯ ಮೂರು ಫೋನ್‌ಗಳಲ್ಲಿ ಒನ್‌ಪ್ಲಸ್ 9 ಒಂದು ಎಂದು ನಿರೀಕ್ಷಿಸಲಾಗಿದೆ. ಸದ್ಯ ಆನ್‌ಲೈನ್‌ನಲ್ಲಿ ಬಹಿರಂಗವಾಗಿರುವ ಸ್ಕ್ರೀನ್‌ಶಾಟ್‌ಗಳ ಪ್ರಕಾರ ಒನ್‌ಪ್ಲಸ್ 9 ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ
ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 402 PP ಪಿಕ್ಸೆಲ್ ಸಾಂಧ್ರತೆಯನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ 120Hz ರಿಫ್ರೆಶ್ ರೇಟ್ ಅನ್ನು ಸಹ ಹೊಂದಿದೆ ಎನ್ನಲಾಗಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಅಡ್ರಿನೊ 660 ಜಿಪಿಯುನಿಂದ ನಿಯಂತ್ರಿಸಲ್ಪಡುತ್ತದೆ ಎಂದು ಹೇಳಲಾಗುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ
ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಲಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಇನ್ನು ಈ ಸ್ಮಾರ್ಟ್‌ಫೋನ್ 4,500mAh ಬ್ಯಾಟರಿಯನ್ನು ಬೆಂಬಲಿಸಬಹುದು ಎಂದು ಅಂದಾಜಿಸಲಾಗಿದೆ. ಇದು 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಬಹುದು ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ ಅನ್ನು ಬೆಂಬಲಿಸಲಿದೆ. ಇದು ಯಾವ ಬೆಲೆಯನ್ನು ಹೊಂದಿರಲಿದೆ ಅನ್ನೊದನ್ನ ಕಂಪೆನಿ ಇನ್ನ ಸಹ ಬಹಿರಂಗ ಪಡಿಸಿಲ್ಲ.


Click it and Unblock the Notifications