ಇಂದು ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ ಸೇಲ್: ಬೆಲೆ ಎಷ್ಟು?..ಫೀಚರ್ಸ್ ಏನು?
ಒನ್‌ಪ್ಲಸ್ ಸಂಸ್ಥೆಯ ಇತ್ತೀಚಿನ ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಆಗಿರುವ ಒನ್‌ಪ್ಲಸ್ 9 ಮತ್ತು ಒನ್‌ಪ್ಲಸ್ 9R ಫೋನ್‌ಗಳು ಈಗಾಗಾಲೇ ಸ್ಮಾರ್ಟ್ ಪ್ರಿಯರನ್ನು ಆಕರ್ಷಿಸಿದೆ. ಆ ಪೈಕಿ ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ ಇಂದು (ಏ.15) ಅಮೆಜಾನ್ ಹಾಗೂ ಅಧಿಕೃತ ಒನ್‌ಪ್ಲಸ್ ವೆಬ್‌ಸೈಟ್ ಮೂಲಕ ಸೇಲ್ ಆರಂಭಿಸಲಿದೆ. ಇನ್ನು ಅಧಿಕ RAM ಹಾಗೂ ಕ್ವಾಡ್ ಕ್ಯಾಮೆರಾ ರಚನೆ ಸ್ಮಾರ್ಟ್‌ಫೋನಿನ ಪ್ರಮುಖ ಹೈಲೈಟ್ ಆಗಿದೆ.

ಹೌದು, ಜನಪ್ರಿಯ ಒನ್‌ಪ್ಲಸ್ 9R ಫೋನ್‌ಗಳ ಮೊದಲ ಮಾರಾಟ ಇಂದು ಶುರುವಾಗಲಿದೆ. ಈ ಫೋನ್ 8GB RAM ಮತ್ತು 12GB RAM ಮಾಡೆಲ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪ್ಲಾಟ್ ಪ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪ್ಲಾಟ್ ಪ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಕಾರ್ಯ
ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+128GB, 12GB RAM+256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ವಾಡ್ ಕ್ಯಾಮೆರಾ ವಿಶೇಷ
ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ವಾರ್ಪ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಅನ್ನು ಸುಮಾರು 30 ನಿಮಿಷಗಳಲ್ಲಿ ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳುತ್ತದೆ. ಇನ್ನು ಕನಎಕ್ಟಿವಿಟಿಯಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ರೂಪಾಂತರಕ್ಕೆ 39,999ರೂ. ಬೆಲೆಯನ್ನು ಹೊಂದಿದೆ. ಇನ್ನು 12 GB RAM ಮತ್ತು 256 GB ಸ್ಟೋರೇಜ್ ರೂಪಾಂತರದ ಬೆಲೆ 43,999ರೂ. ಬೆಲೆಯನ್ನು ಹೊಂದಿದೆ.ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ ಇಂದು (ಏ.15) ಅಮೆಜಾನ್ ಹಾಗೂ ಅಧಿಕೃತ ಒನ್‌ಪ್ಲಸ್ ವೆಬ್‌ಸೈಟ್ ಮೂಲಕ ಸೇಲ್ ಆರಂಭಿಸಲಿದೆ.ಇನ್ನು ಈ ಸ್ಮಾರ್ಟ್‌ಫೋನ್ ಲೇಕ್ ಬ್ಲೂ ಮತ್ತು ಕಾರ್ಬನ್ ಬ್ಲ್ಯಾಕ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications