ಭಾರತದಲ್ಲಿ ಒನ್‌ಪ್ಲಸ್ 9 R ಸ್ಮಾರ್ಟ್‌ಫೋನ್ ಅನಾವರಣ!..ಬೆಲೆ ಎಷ್ಟು?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಒನ್‌ಪ್ಲಸ್ ಸಂಸ್ಥೆ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಇದೀಗ ತನ್ನ ಬಹು ನಿರೀಕ್ಷಿತ ಒನ್‌ಪ್ಲಸ್ 9 ಸರಣಿ ಸ್ಮಾರ್ಟ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸರಣಿಯಲ್ಲಿ ಒನ್‌ಪ್ಲಸ್ 9, ಒನ್‌ಪ್ಲಸ್ 9 ಪ್ರೊ ಮತ್ತು ಒನ್‌ಪ್ಲಸ್ 9 R ಸ್ಮಾರ್ಟ್‌ಫೋನ್‌ಗಳು ಸೇರಿವೆ. ಇದರಲ್ಲಿ ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ ಮಧ್ಯ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದ್ದು, ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ.

ಹೌದು, ಒನ್‌ಪ್ಲಸ್ ಕಂಪೆನಿ ಒನ್‌ಪ್ಲಸ್ 9 ಸರಣಿ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇದರಲ್ಲಿ ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪ್ಲಾಟ್ ಪ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870SoC ಪ್ರೊಸೆಸರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್ 9 R ಸ್ಮಾರ್ಟ್‌ಫೋನ್ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪ್ಲಾಟ್ ಪ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+128GB, 12GB RAM+256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿಶೇಷ
ಒನ್‌ಪ್ಲಸ್ 9R ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ವೈಡ್ ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ವಾರ್ಪ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಅನ್ನು ಸುಮಾರು 30 ನಿಮಿಷಗಳಲ್ಲಿ ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳುತ್ತದೆ. ಇನ್ನು ಕನಎಕ್ಟಿವಿಟಿಯಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್ 9 R ಸ್ಮಾರ್ಟ್‌ಫೋನ್ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ರೂಪಾಂತರಕ್ಕೆ 39,999 ರೂ. ಬೆಲೆಯನ್ನು ಹೊಂದಿದೆ. ಇನ್ನು 12 GB RAM ಮತ್ತು 256 GB ಸ್ಟೋರೇಜ್ ರೂಪಾಂತರದ ಬೆಲೆ 43,999 ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಲೇಕ್ ಬ್ಲೂ ಮತ್ತು ಕಾರ್ಬನ್ ಬ್ಲ್ಯಾಕ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications




