ಮೂರು ಬಣ್ಣಗಳ ಆಯ್ಕೆಗಳಲ್ಲಿ ಬರಲಿದೆ ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌!

|

ಭಾರತದ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಎನಿಸಿಕೊಂಡಿದೆ. ತನ್ನ ವಿಭಿನ್ನ ಮತ್ತು ವಿಶೇಷ ಶೈಲಿಯ ವಿನ್ಯಾಸದಿಂದ ಹೆಸರುವಾಸಿಯಾಗಿದೆ. ಕ್ಯಾಮೆರಾ ಫೀಚರ್ಸ್‌ಗಳ ವಿಚಾರದಲ್ಲಿ ಒನ್‌ಪ್ಲಸ್‌ ಬ್ರಾಂಡ್‌ ಗ್ರಾಹಕರ ನೆಚ್ಚಿನ ಆಯ್ಕೆಯಾಗಿದೆ. ಸದ್ಯ ಇದೀಗ ಒನ್‌ಪ್ಲಸ್‌ ತನ್ನ ಹೊಸ ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಜಾಗತಿಕವಾಗಿ ಇದೇ ಅಕ್ಟೋಬರ್ 15 ರಂದು ಬಿಡುಗಡೆಯಾಗಲಿದೆ. ಇದು 25,000ರೂ.ಗಳ ಬೆಲೆಯಲ್ಲಿ ಲಭ್ಯವಾಗುವ ಸಾದ್ಯತೆ ಇದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಸಂಸ್ಥೆ ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ಪ್ಲಾನ್‌ ರೂಪಿಸಿದೆ. ಇದರ ನಡುವೆ ಈ ಸ್ಮಾರ್ಟ್‌ಫೋನ್‌ ಬಗೆಗಿನ ಊಹಾಪೋಹಗಳು, ವಿಶೇಷತೆಗಳ ಬಗ್ಗೆ ಹಲವು ಮಾಹಿತಿಗಳು ಬಹಿರಂಗಗೊಂಡಿವೆ. ಸದ್ಯದ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಮೂರು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ. ಇದು ಒನ್‌ಪ್ಲಸ್‌ 9R ಮಾದರಿಯಲ್ಲಿಯೇ ಬರಬಹುದು ಎಂದು ಹೇಳಲಾಗಿದೆ. ಹಾಗಾದ್ರೆ ಲೀಕ್‌ ಮಾಹಿತಿ ಪ್ರಕಾರ ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ 2400 × 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.55-ಇಂಚಿನ FHD+ E3 AMOLED ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿರಲಿದೆ. ಇದಲ್ಲದೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರುವ ಸಾಧ್ಯತೆ ಇದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಈ ಹಿಂದಿನ ವರದಿಗಳ ಪ್ರಕಾರ ಈ ಸ್ಮಾರ್ಟ್‌ಫೋನ್‌ ಒಪ್ಪೋನ ಕಲರ್‌ಓಎಸ್ 12 (ಆಂಡ್ರಾಯ್ಡ್ 11 ಆಧರಿಸಿ) ಬಾಕ್ಸ್-ಆಫ್-ದಿ-ಬಾಕ್ಸ್‌ನೊಂದಿಗೆ ಬರಲಿದೆ ಎಂದು ಉಲ್ಲೇಖಿಸಲಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಒನ್‌ಪ್ಲಸ್ 9RT ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP Sony IMX766 ಲೆನ್ಸ್‌ಗಳನ್ನು OIS ಬೆಂಬಲದೊಂದಿಗೆ ಒಳಗೊಂಡಿರುತ್ತವೆ. ಎರಡನೇ ಕ್ಯಾಮೆರಾ 16MP ಸೋನಿ IMX481 ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2MP B&W ಸೆನ್ಸರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿ ಹೊಂದಿರುವ ಸಾದ್ಯತೆ ಇದೆ. ಇದು 65W ವೇಗದ ಚಾರ್ಜಿಂಗ್ ಸೆಟಪ್‌ನೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಈ ವೈಶಿಷ್ಟ್ಯವು ಪ್ರಮಾಣೀಕರಣ ವೆಬ್‌ಸೈಟ್‌ನಲ್ಲಿ ಇತ್ತೀಚಿನ ಸ್ಮಾರ್ಟ್‌ಫೋನ್‌ಗಳ ಪಟ್ಟಿಯಿಂದ ದೃಡೀಕರಿಸಲ್ಪಟ್ಟಿದೆ. ಇತರ ಗುಡಿಗಳು ಭದ್ರತೆಗಾಗಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್, NFC, ಡ್ಯುಯಲ್ ಸ್ಟೀರಿಯೋ ಸ್ಪೀಕರ್ ಸೆಟಪ್ ಮತ್ತು X- ಆಕ್ಸಿಸ್ ಲೀನಿಯರ್ ಮೋಟಾರ್ ಅನ್ನು ಒಳಗೊಂಡಿರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒನ್ ಪ್ಲಸ್ 9RT ಅನ್ನು ಜಾಗತಿಕವಾಗಿ ಮಾಡುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಬೆಸ್ ವೇರಿಯೆಂಟ್ CNY 2,000 (ಅಂದಾಜು 23,000ರೂ.) ಬೆಲೆ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ ಇದರ ಉನ್ನತ ಮಾದರಿಗಾಗಿ CNY 3,000 (ಸುಮಾರು ರೂ. 35,000) ವರೆಗೆ ಹೋಗಬಹುದು ಎಂದು ಹೇಳಲಾಗಿದೆ. ಇನ್ನು OnePlus 9RT ಅನ್ನು ಮೂರು ಹೊಸ ಬಣ್ಣದ ಆಯ್ಕೆಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಟಿಪ್ಸ್ಟರ್ ಹೇಳಿದೆ. ಇದು ಒನ್‌ಪ್ಲಸ್ 9 ಆರ್ ಮಾದರಿಯ ವಿನ್ಯಾಸದಲ್ಲಿ ಬರಬಹುದು. ಈ ಹಿಂದಿನ ವರದಿಗಳ ಪ್ರಕಾರ ಈ ಸ್ಮಾರ್ಟ್‌ಫೋನ್‌ ಒಪ್ಪೋನ ಕಲರ್‌ಓಎಸ್ 12 (ಆಂಡ್ರಾಯ್ಡ್ 11 ಆಧರಿಸಿ) ಬಾಕ್ಸ್-ಆಫ್-ದಿ-ಬಾಕ್ಸ್‌ನೊಂದಿಗೆ ಬರಲಿದೆ ಎಂದು ಉಲ್ಲೇಖಿಸಲಾಗಿದೆ.

Best Mobiles in India

English summary
OnePlus might launch its upcoming OnePlus 9RT smartphone at a starting price of around Rs 25,000.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X