ಸಂಕ್ರಾಂತಿ ವೇಳೆ ಭಾರತಕ್ಕೆ ಲಗ್ಗೆ ಇಡಲಿದೆ ಒನ್‌ಪ್ಲಸ್‌ 9RT ಫೋನ್‌?..ಬೆಲೆ ಎಷ್ಟು?

|

ಪ್ರಮುಖ ಮೊಬೈಲ್ ಬ್ರಾಂಡ್‌ಗಳಲ್ಲಿ ಒಂದಾದ ಒನ್‌ಪ್ಲಸ್‌ ಫ್ಲ್ಯಾಗ್‌ಶಿಪ್ ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಇತ್ತೀಚಿಗೆ ಒನ್‌ಪ್ಲಸ್‌ ಹೊಸದಾಗಿ ಒನ್‌ಪ್ಲಸ್‌ 9RT ಫೋನ್‌ ಲಾಂಚ್‌ ಮಾಡಿದ್ದು, ಈ ಸ್ಮಾರ್ಟ್‌ಫೋನ್‌ ಅನ್ನು ನಾಳೆ (ಜನೆವರಿ 14 ರಂದು) ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ಅಮೋಲೆಡ್

ಹೌದು, ಒನ್‌ಪ್ಲಸ್‌ ಸಂಸ್ಥೆ ತನ್ನ ಒನ್‌ಪ್ಲಸ್‌ 9RT ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಮಾಡಲಿದೆ. ಇದು 120Hz ಅಮೋಲೆಡ್ ಡಿಸ್‌ಪ್ಲೇ ಮತ್ತು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65T ವಾರ್ಪ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎನ್ನುವುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ಕಲರ್ ಗ್ಯಾಮಟ್‌ನೊಂದಿಗೆ ಬರುತ್ತದೆ. ಅಲ್ಲದೆ 1300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಓಪೋನ ಕಲರ್‌ಓಎಸ್ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮರಾ ಸೆಟಪ್ 4K ವೀಡಿಯೋ ರೆಕಾರ್ಡಿಂಗ್ ನೀಡುತ್ತದೆ ಮತ್ತು ಹೈಬ್ರಿಡ್ ಫೋಕಸ್‌ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65T ವಾರ್ಪ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಅನ್ನು ಒಳಗೊಂಡಿದೆ. ಇನ್ನು ಈ ಫೋನ್‌ ಡಾಲ್ಬಿ ಅಟ್ಮೋಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಟೀರಿಯೋ ಸ್ಪೀಕರ್‌ಗಳನ್ನು ನೀಡಿದೆ.

Best Mobiles in India

English summary
OnePlus 9RT Price in India Leaked ahead of January 14 launch.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X